ನಾಳೆ ಉಚ್ಛಂಗಿದುರ್ಗದಲ್ಲಿ ಸಿದ್ದು ಪ್ರಚಾರ
Team Udayavani, Apr 19, 2019, 4:12 PM IST
ಹರಪನಹಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಎಸ್ಪಿ ಆರ್. ಚೇತನ್ ಉಚ್ಚಂಗಿದುರ್ಗ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಹರಪನಹಳ್ಳಿ: ಲೋಕಸಭಾ ಚುನಾವಣೆ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಬಿ. ಮಂಜಪ್ಪ ಅವರ ಪರ ಮಾತಯಾಚಿಸಲು ಏ.20ರಂದು ಮಧ್ಯಾಹ್ನ 1ಗಂಟೆಗೆ ಉಚ್ಚಂಗಿದುರ್ಗ ಗ್ರಾಮಕ್ಕೆ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಗಮಿಸಲಿದ್ದಾರೆ ಎಂದು ಜಿಪಂ ಸದಸ್ಯ ಎಚ್. ಪರಶುರಾಮಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖಂಡರಾದ ಸಿ.ಎಂ. ಇಬ್ರಾಹಿಂ, ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಮಾಜಿ
ಸಚಿವ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ, ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ, ಹರಿಹರ ಶಾಸಕ ರಾಮಪ್ಪ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜೆಡಿಎಸ್ ಮುಖಂಡ ಅರಸೀಕೆರೆ ಎನ್.ಕೊಟ್ರೇಶ್, ಕೆಪಿಸಿಸಿ ಮಹಿಳಾ ರಾಜ್ಯ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಮುಂತಾದವರು
ಭಾಗವಹಿಸಲಿದ್ದಾರೆ ಎಂದರು.
ಬಹಿರಂಗ ಸಭೆ ಅಂಗವಾಗಿ ಹರಪನಹಳ್ಳಿ, ಜಗಳೂರು ಸೇರಿದಂತೆ
ಜಿಲ್ಲಾದ್ಯಂತ ಸುಮಾರು 15 ರಿಂದ 20 ಸಾವಿರ ಕಾಂಗ್ರೆಸ್ ಪಕ್ಷದ
ಮುಖಂಡರು, ಪದಾಧಿ ಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪೊಲೀಸ್ ವರಿಷ್ಠಾ ಧಿಕಾರಿ ಭೇಟಿ: ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಉಚ್ಚಂಗಿದುರ್ಗ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಜಿಲ್ಲಾ ವರಿಷ್ಠಾಧಿ ಕಾರಿ ಆರ್.ಚೇತನ್
ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣದ ಕುರಿತು ತಜ್ಞರ ಸಲಹೆಯನ್ನು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಡಿವೈಎಸ್ಪಿ ನಾಗೇಶ್ ಐತಾಳ್, ಸಿಪಿಐ
ಡಿ.ದುರುಗಪ್ಪ, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮತ್ತಹಳ್ಳಿ
ಎಸ್.ಮಂಜುನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎಂ.
ಶಿವಕುಮಾರಸ್ವಾಮಿ ಮುಖಂಡರಾದ ಬೈರೇಶ್, ಗೋಡೆಪ್ರಕಾಶ್,
ವೀರೇಂದ್ರ ಪಾಟೀಲ್, ಸಲಾಂ ಸಾಬ್, ಟಿ.ಮಂಜಪ್ಪ, ಮಂಜುನಾಥ್, ಬಸವನಗೌಡ, ಚಂದ್ರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.