ಉತ್ಸಾಹದಿಂದ ಮತ ಹಕ್ಕು ಚಲಾಯಿಸಿ
ಮತದಾನ ಜಾಗೃತಿ ಅಭಿಯಾನದ ವಸ್ತು ಪ್ರದರ್ಶನಕ್ಕೆ ಚಾಲನೆ20ರ ವರೆಗೆ ವೀಕ್ಷಣೆಗೆ ಅವಕಾಶ
Team Udayavani, Apr 19, 2019, 4:32 PM IST
ಬಳ್ಳಾರಿ: ನಗರದ ಕೇಂದ್ರ (ಹೊಸ) ಬಸ್ ನಿಲ್ದಾಣದಲ್ಲಿ ಲೋಕಸಭೆ ಚುನಾವಣೆ ನಿಮಿತ್ತ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಅಭಿಯಾನದ ವಸ್ತುಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್ ವೀಕ್ಷಿಸಿದರು.
ಬಳ್ಳಾರಿ: ಮತದಾನ ಅತ್ಯಂತ ಅಮೂಲ್ಯವಾಗಿದ್ದು, ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ ಮುಕ್ತ ಮತ್ತು ನಿರ್ಭಿತಿಯಿಂದ ಹಾಗೂ ಅತ್ಯಂತ ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಬೇಕು ಅಪರ ಜಿಲ್ಲಾ ಚುನಾವಣಾಧಿಕಾರಿ ಎಂ. ಸತೀಶಕುಮಾರ್ ಹೇಳಿದರು.
ಲೋಕಸಭಾ ಚುನಾವಣೆ ನಿಮಿತ್ತ ನಗರದ ಕೇಂದ್ರ (ಹೊಸ) ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
ವತಿಯಿಂದ ಗುರುವಾರ ಏರ್ಪಡಿಸಿದ್ದ ಮತದಾನ ಜಾಗೃತಿ ಅಭಿಯಾನದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದ ಹಬ್ಬವಾದ ಮತದಾನ ಪ್ರಕ್ರಿಯೆ ಇದೇ ಏ.23ರಂದು ನಡೆಯಲಿದ್ದು, ಸರ್ವರೂ ಉತ್ಸಾಹದಿಂದ ಬಂದು ಮತದಾನ ಮಾಡಬೇಕು. ಯಾವುದೇ ಕಾರಣಕ್ಕೂ ಸಂವಿಧಾನ ನಮಗೆ ಕಲ್ಪಿಸಿರುವ ಅಮೂಲ್ಯ ಅವಕಾಶವನ್ನು ಮಿಸ್ ಮಾಡಿಕೊಳ್ಳಬಾರದು. ಯೋಗ್ಯ ವ್ಯಕ್ತಿಗೆ ಮತಚಲಾಯಿಸಬೇಕು
ಎಂದರು.
ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮತದಾನದ ಮಹತ್ವ,
ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯೋಗ ಕೈಗೊಂಡಿರುವ ಕ್ರಮಗಳು, ಮತಗಟ್ಟೆಗೆ ತೆರಳಬೇಕಾದ ಸಂದರ್ಭದಲ್ಲಿರಬೇಕಾದ ದಾಖಲೆಗಳು, ಚುನಾವಣಾ ರಾಯಭಾರಿಗಳ ಸಂದೇಶಗಳನ್ನು ವಸ್ತುಪ್ರದರ್ಶನದಲ್ಲಿ ಭಿತ್ತರಿಸಿರುವುದು ಶ್ಲಾಘನೀಯ ಎಂದರು.
ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿ-ವಿಜಲ್ ಆ್ಯಪ್ ಸೇರಿದಂತೆ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಅವರು, ಮತದಾರರು ಅತ್ಯಂತ ಖುಷಿಯಿಂದ ಬಂದು ಮತದಾನ ಮಾಡುವ ನಿಟ್ಟಿನಲ್ಲಿ ನೀರು- ನೆರಳು, ವ್ಹೀಲ್ ಚೇರ್, ಭೂತಗನ್ನಡಿ, ವಾಹನದ ವ್ಯವಸ್ಥೆ, ರ್‍ಯಾಂಪ್ ಸೇರಿದಂತೆ ಅನೇಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿ ಸಿದಂತೆ ಕಡ್ಡಾಯ ಮತದಾನದ ಕುರಿತು ಪ್ರತಿಜ್ಞಾ ವಿಧಿ
ಯನ್ನು ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ ನೆರೆದಿದ್ದ ಎಲ್ಲರಿಗೆ ಬೋಧಿಸಿದರು.
ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ, ಸಣ್ಣ ಉಳಿತಾಯ ಇಲಾಖೆಯ
ಅಭಿವೃದ್ಧಿ ಅಧಿಕಾರಿ ಹೊನ್ನೂರಪ್ಪ, ಕಾರ್ಮಿಕ ಇಲಾಖೆಯ ಶಿವರಾಜ್, ವಾರ್ತಾ ಇಲಾಖೆಯ ಅ ಧೀಕ್ಷಕ ಗುರುರಾಜ ಸೇರಿದಂತೆ
ಎನ್‌ಇಕೆಎಸ್‌ಆರ್‌ಟಿಸಿ ಹಾಗೂ ವಿವಿಧ ಇಲಾಖೆಗಳ ನೌಕರರು ಮತ್ತು ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.