ಮುಂಗಾರು ಅಬ್ಬರಕ್ಕೆ ರೈತರ ಸಂತಸ

Team Udayavani, Apr 20, 2019, 3:00 AM IST

mungaru

ಗುಂಡ್ಲುಪೇಟೆ: ತಾಲೂಕಿನ ಹಲವೆಡೆ ಗುರುವಾರ ಮತ್ತು ಶುಕ್ರವಾರ ಸುರಿದ ಮುಂಗಾರು ಮಳೆಯ ಅಬ್ಬರಕ್ಕೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಬಿಸಿಲಿನ ಬೇಗೆಯಿಂದ ಚುನಾವಣಾ ಕಾವಿನಿಂದ ಬಳಲಿದ್ದವರಿಗೆ ತಂಪನ್ನುಂಟು ಮಾಡಿದೆ.

ತಾಲೂಕಿನ ತೆರಕಣಾಂಬಿ ಮತ್ತು ಕಸಬಾ ಹೋಬಳಿಯ ಹಲವು ಕಡೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಬಿಗಿಯಾಗಿದ್ದ ಭೂಮಿ ತಂಪಿನಿಂದ ತಣ್ಣಗಾಗಿದ್ದರೆ, ಮುಂಗಾರಿನ ಫ‌ಸಲು ತೆಗೆಯುವ ಹುಮ್ಮಸ್ಸಿನಲ್ಲಿ ರೈತರು ವ್ಯವಸಾಯ ಚಟುವಟಿಕೆ ಹಮ್ಮಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

ಪ್ರಮುಖವಾಗಿ ಖುಷ್ಕಿ ಪದ್ಧತಿಯ ಮಳೆಯಾಶ್ರಿತ ವ್ಯವಸಾಯ ನೆಚ್ಚಿಕೊಂಡಿರುವ ತಾಲೂಕಿನ ಶೇ.70 ರೈತರು ಮುಂಗಾರಿನಲ್ಲಿ ಚಟುವಟಿಕೆ ನಡೆಸುವ ಸಲುವಾಗಿ ಭೂಮಿಯನ್ನು ಹದ ಮಾಡಲು ತೊಡಗಿದ್ದಾರೆ.

ತಾಲೂಕಿನ ತೆರಕಣಾಂಬಿ ಹೋಬಳಿಯ ಕೊಡಸೋಗೆ, ಬೊಮ್ಮಲಾಪುರ, ಶೀಲವಂತಪುರ, ಸೋಮನಪುರ ಯಾನಗಹಳ್ಳಿ ಪ್ರದೇಶದ ಹಲವು ಗ್ರಾಮಗಳಲ್ಲಿ ಗುರುವಾರ ಸುರಿದ ಮಳೆಯಿಂದ ಕೆಲಕಾಲ ಮತದಾನ ಮಾಡಲು ಮನೆಯಿಂದ ಹೊರಗೆ ಬಾರದ ಪರಿಸ್ಥಿತಿ ಉದ್ಭವವಾಗಿತ್ತು.

ಸುಮಾರು 3 ಗಂಟೆಗಳ ಕಾಲ ಸುರಿದ ಮಳೆ ರೈತನಿಗೆ ಹರ್ಷ ತಂದಿತು. ಶುಕ್ರವಾರ ಆ ಪ್ರದೇಶದ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಿದರು. ಮುಂಗಾರಿನಲ್ಲಿ ಹತ್ತಿ, ಜೋಳ, ಚೆಂಡುಮಲ್ಲಿಗೆ ಮುಂತಾದ ಬೆಳೆಗಳನ್ನು ಬೆಳೆಯುವ ಸಲುವಾಗಿ ಭೂಮಿಯನ್ನು ಹದಗೊಳಿಸುವ ಸಿದ್ಧತೆಯಲ್ಲಿ ಇದ್ದಾಗಲೇ ಇಂದು ಮತ್ತೂಮ್ಮೆ ಸುರಿದ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯುಂಟಾಯಿತು.

ಅದೇ ರೀತಿ ಕಸಬಾ ಹೋಬಳಿಯ ಪಶ್ಚಿಮ ಭಾಗದ ಕಾಡಂಚಿನ ಗ್ರಾಮಗಳಾದ ಬರಗಿ, ಹೊಂಗಹಳ್ಳಿ, ಚನ್ನಮಲ್ಲಿಪುರ, ಬೇರಂಬಾಡಿ, ಗೋಪಾಲಪುರ, ಭೀಮನಬೀಡು ಸುತ್ತಮುತ್ತ ಮಧ್ಯಾಹ್ನ ಮೂರು ಗಂಟೆ ವೇಳೆಗೆ ಪ್ರಾರಂಭವಾದ ಮಳೆ ಸತತವಾಗಿ 4 ಗಂಟೆಗಳ ಕಾಲು ಸುರಿಯಿತು.

ತುಂಬಾ ದಿನಗಳಿಂದ ಬಿಸಿಲ ಬೇಗೆಯಿಂದ ಗಟ್ಟಿಯಾಗಿದ್ದ ಭೂಮಿಗೆ ಇದರಿಂದ ಉಳುಮೆ ಮಾಡಲು ಆಸಕ್ತ ವಾತಾವರಣ ಉಂಟಾಯಿತು. ಈ ಪ್ರದೇಶದ ಜನರು ಶೀಘ್ರದಲ್ಲಿ ಚೆಂಡುಮಲ್ಲಿಗೆ ಹೂವಿನ ಬಿತ್ತನೆ ಬೀಜ ಪಡೆದು ಒಟ್ಟು ಮಾಡಲಿದ್ದಾರೆ. 15 -20 ದಿನಗಳಲ್ಲಿ ನಾಟಿ ಮಾಡುವ ಮೂಲಕ ಮುಂಗಾರಿನ ಫ‌ಸಲಿನ ಪ್ರಾರಂಭವಾಗುತ್ತದೆ. ಇನ್ನು ಪಟ್ಟಣ ಪ್ರದೇಶದಲ್ಲಿ ಮಳೆ ಹೆಚ್ಚಿನ ಘರ್ಜನೆ ನಡೆಸದಿದ್ದರೂ, ಚುನಾವಣಾ ಕಾವಿನಲ್ಲಿ ಮುಳುಗಿದ್ದ ಜನರಲ್ಲಿ ಉತ್ಸಾಹದ ಸೆಲೆ ಚಿಮ್ಮಿಸಿದೆ.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.