ಜೀವನ ಮೌಲ್ಯದಿಂದ ಭವಿಷ್ಯ ಉಜ್ವಲ : ಡಾ| ವೀರೇಂದ್ರ ಹೆಗ್ಗಡೆ
Team Udayavani, Apr 20, 2019, 6:00 AM IST
ಬೆಳ್ತಂಗಡಿ: ವಿದ್ಯಾರ್ಥಿಗಳು ಬದುಕಿನಲ್ಲಿ ಉತ್ತಮ ಜೀವನ ಮೌಲ್ಯ ಅಳವಡಿಸಿಕೊಂಡು ಆದರ್ಶ ಪ್ರಜೆಯಾಗಿ, ಜವಾಬ್ದಾರಿಯುತ ನಾಗರಿಕನಾಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಜಿರೆಯ ರತ್ಮಮಾನಸದ 2018-19ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ ಪೂರೈಸಿದ 27 ವಿದ್ಯಾರ್ಥಿಗಳು ಭೇಟಿ ಮಾಡಿದ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಅರ್ಹತಾಪತ್ರ ವಿತರಿಸಿ ಶುಭಹಾರೈಸಿದರು. ಅಂಕ ಗಳಿಕೆಯೊಂದೇ ಮೂಲ ಗುರಿಯಾಗದೆ ಸವಾಲುಗಳನ್ನು ಎದುರಿಸಿ ಜೀವನ ಶಿಕ್ಷಣದ ಉದಾತ್ತ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಈ ವೇಳೆ ರತ್ನಮಾನಸದಲ್ಲಿ ಮೂರು ವರ್ಷಗಳಲ್ಲಿ ಕಲಿತ ಜೀವನ ಶಿಕ್ಷಣದ ಅನುಭವವನ್ನು ವಿದ್ಯಾರ್ಥಿಗಳು ಹಂಚಿಕೊಂಡರು. ರತ್ನಮಾನಸದ ಪಾಲಕ ಕೃಷ್ಣ ಶೆಟ್ಟಿ, ಶಿಕ್ಷಕ ರವಿಚಂದ್ರ ಹಾಗೂ ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.
ರತ್ನಮಾನಸದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್. ಪ್ರಭಾಕರ ಮತ್ತು ಕಾರ್ಯದರ್ಶಿ ಡಾ| ಬಿ. ಯಶೋವರ್ಮ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ರತ್ನಮಾನಸದಿಂದ ವಿದ್ಯಾರ್ಥಿಗಳಿಗೆ ವಿದಾಯಕೋರಿ, ರತ್ನಮಾನಸದ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಅವರನ್ನು ಸೇರ್ಪಡೆಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.