ಅಂಬೇಡ್ಕರನ್ನು ದಲಿತರೇ ಮರೆತಿದ್ದು ವಿಷಾದಕರ

ದಸಂಸ ನೇತೃತ್ವದಲ್ಲಿ ನಡೆದ ಅಂಬೇಡ್ಕರ್‌ ಜಯಂತಿಯಲ್ಲಿ ಅಣ್ಣು ಸಾಧನ್‌

Team Udayavani, Apr 20, 2019, 6:00 AM IST

7

ಕಡಬ: ಅಂಬೇಡ್ಕರ್‌ ಅವರ ಹೋರಾಟದ ಫಲದಿಂದಾಗಿ ಸವಲತ್ತು, ಆಸ್ತಿ, ಉದ್ಯೋಗಳನ್ನು ಪಡೆದು ಸಮಾಜದ ಮುಖ್ಯವಾಹಿನಿಯಲ್ಲಿರುವ ದಲಿತರೇ ಅಂಬೇಡ್ಕರ್‌ ಅವರನ್ನು ಮರೆತಿರುವುದು ವಿಷಾದದ ಸಂಗತಿ ಎಂದು ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್‌ ನುಡಿದರು. ಅವರು ಕಡಬ ತಾಲೂಕು ದಲಿತ ಸಂಘರ್ಷ ಸಮಿತಿಯ ವತಿಯಿಂದ ಕಡಬದ ಅಂಬೇಡ್ಕರ್‌ ಭವನದಲ್ಲಿ ಜರಗಿದ ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ 128ನೇ ಜನ್ಮ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕದಲ್ಲಿ ಪ್ರೊ| ಬಿ. ಕೃಷ್ಣಪ್ಪ ಅವರ ಹೋರಾಟದ ಫಲದಿಂದ 6 ಲಕ್ಷ ಎಕರೆ ಭೂಮಿ ದಲಿತ ಸಮುದಾಯಕ್ಕೆ ಸಿಕ್ಕಿದೆ. ಕರ್ನಾಟಕದ ಇತಿಹಾಸದಲ್ಲಿ ಯಾವ ಮಂತ್ರಿಯಿಂದಲೂ ಇದು ಸಾಧ್ಯವಾಗಿಲ್ಲ. ಅಂಬೇಡ್ಕರ್‌ ಅವರ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳದ ನಾವು ಇಂದಿಗೂ ಶೋಷಿತರಾಗಿಯೇ ಇದ್ದೇವೆ. ನಾವೆಲ್ಲರೂ ಒಗ್ಗಟ್ಟಿನಿಂದ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿ ಕಡಬ ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಉಮೇಶ್‌ ಕೋಡಿಂಬಾಳ ಮಾತನಾಡಿ, ಕಡಬ ತಾಲೂಕಿನಲ್ಲಿರುವ ಎಲ್ಲ ದಲಿತ ಸಂಘಟನೆಗಳು ಒಟ್ಟಾದರೆ ಮಾತ್ರ ಡಾ| ಅಂಬೇಡ್ಕರ್‌ ಅವರು ಕಂಡ ಕನಸನ್ನು ನನಸಾಗಿಸಿ, ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಸಾಧ್ಯ. ಕಡಬದ ಹೃದಯ ಭಾಗದಲ್ಲಿ ಬೃಹತ್‌ ಅಂಬೇಡ್ಕರ್‌ ಭವನ ನಿರ್ಮಿಸುವುದಕ್ಕೆ ನಾವೆಲ್ಲರೂ ಪ್ರಯತ್ನಪಡಬೇಕು ಎಂದರು.

ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ, ದಸಂಸ ಪುತ್ತೂರು ತಾಲೂಕು ಶಾಲೆಯ ಸಂಚಾಲಕ ಗಣೇಶ್‌ ಗುರಿಯಾನ, ದಲಿತ ಸೇವಾ ಸಮಿತಿಯ ಜಿಲ್ಲಾ ಮುಖಂಡ ಅಣ್ಣು ಎಳ್ತಿಮಾರು, ಅಂಬೇಡ್ಕರ್‌ವಾದ ಸಂಘಟನೆಯ ಜಿಲ್ಲಾ ಮುಖಂಡ ಗುರುವಪ್ಪ ಕಲ್ಲಗುಡ್ಡೆ ಮಾತನಾಡಿದರು. ದಲಿತ ಮುಖಂಡ ದಿ| ಎಂ. ಕೂಸಪ್ಪ ಅವರ ಧರ್ಮ ಪತ್ನಿ ಸುಶೀಲಾ ಕುರಿಯ, ದಲಿತ ಮುಖಂಡರಾದ ಬಾಬು ಸವಣೂರು, ವಿಶ್ವನಾಥ್‌ ಪುಣತ್ತಾರ್‌, ನಾಗೇಶ್‌ ಕುರಿಯಾ, ಹರ್ಷಿತ್‌ ಕುರಿಯಾ, ರವಿ ಮರ್ದಾಳ, ಪುಟ್ಟಣ್ಣ ತೋಟಂತಿಲ್ಲ, ಮೀನಾಕ್ಷಿ ಬಂಬಿಲ, ಚೆನ್ನು ಮಂತೂರು, ಚಂದ್ರಾವತಿ ಅರ್ಲಪದವು, ಸೀತಾರಾಮ್‌ ಅರ್ಲಪದವು, ಅಣ್ಣು ಪೇರುಮಜಲು, ಪ್ರವೀಣ್‌ ಪಾಪೆಮಜಲ್‌ ಉಪಸ್ಥಿತರಿದ್ದರು. ಹರೀಶ್‌ ಅಂಕಜಾಲ್‌ ಸ್ವಾಗತಿಸಿ, ವಂದಿಸಿದರು.

ಒಬಾಮಾಗೂ ಸ್ಫೂರ್ತಿ
ಮುಖಂಡ ಅನಂದ ಮಿತ್ತಬೈಲ್‌ ಮಾತನಾಡಿ, ಬಲಿಷ್ಠ ರಾಷ್ಟ್ರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅಂಬೇಡ್ಕರ್‌ ಅವರೇ ನನಗೆ ಸ್ಫೂರ್ತಿ ಎಂದಿದ್ದಾರೆ. ಆದರೆ ಭಾರತೀಯರಾದ ನಾವು ಅಂಬೇಡ್ಕರ್‌ ಅವರ ಜಾತಿಯನ್ನು ಹುಡುಕುತ್ತಿರುವುದು ದುರಂತ. ನಮ್ಮ ಸಮುದಾಯಕ್ಕೆ ಅನ್ಯಾಯವಾದಾಗ ಧ್ವನಿ ಎತ್ತದವರು ಸಮುದಾಯದ ನಾಯಕರಾಗಲು ಸಾಧ್ಯವಿಲ್ಲ, ವಿವಿಧ ಸಂಘಟನೆಗಳಲ್ಲಿರುವ ನಾವು ಸಮುದಾಯಕ್ಕೆ, ಸಂವಿಧಾನಕ್ಕೆ ಅಪಚಾರವಾದಾಗ ಹೋರಾಡಬೇಕು. ಆಗಲೇ ನಿಜವಾದ ಅಂಬೇಡ್ಕರ್‌ವಾದಿ ಯಾಗಲು ಸಾಧ್ಯ ಎಂದರು.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.