ಆಯೋಗದ ವಿರುದ್ಧ ಜನರ ಆಕ್ರೋಶ
Team Udayavani, Apr 20, 2019, 3:00 AM IST
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಉದ್ದೇಶಪೂರ್ವಕವಾಗಿ ಹೆಸರು ತೆಗೆಯಲಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ವೇಳೆ ಬಿಬಿಎಂಪಿ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಹೆಚ್ಚಿನ ಜನರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಕೆಲವೆಡೆ ಸಾರ್ವಜನಿಕರು ಮತಗಟ್ಟೆಗಳಲ್ಲೇ ಅಧಿಕಾರಗಳೊಂದಿಗೆ ವಾಗ್ವಾದ ನಡೆಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಮತದಾನ ಸಹ ಮಾಡಲಾಗಿದೆ. ಕೇವಲ ಒಂದು ವರ್ಷದಲ್ಲಿ ಪಟ್ಟಿಯಿಂದ ಹೆಸರನ್ನು ಯಾವ ಆಧಾರದ ಮೇಲೆ ತೆಗೆಯುತ್ತಾರೆ. ಇನ್ನು ಮನೆಯಲ್ಲಿ ಇಬ್ಬರ ಹೆಸರಿದ್ದರೆ, ಇನ್ನಿಬ್ಬರ ಹೆಸರು ಕಾಣೆಯಾಗಿವೆ ಎಂಬ ಸಾರ್ವಜನಿಕರ ಪ್ರಶ್ನೆಗಳಿಗೆ ಆಯೋಗದ ಬಳಿ ಉತ್ತರವಿಲ್ಲ.
ಆಯೋಗದಿಂದಲೇ ಸಂದೇಶ: ಇನ್ನು ಕೆಲ ಮತದಾರರು ಆಯೋಗದ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಆಯೋಗದಿಂದಲೇ ಮತದಾರರಿಗೆ ಇಂತಹ ಮತಗಟ್ಟೆಯಲ್ಲಿ ನೀವು ಮತ ಚಲಾಯಿಸಬೇಕು ಎಂಬ ಸಂದೇಶ ಮತಗಟ್ಟೆಯ ವಿಳಾಸ ಸಮೇತ ಬಂದಿದೆ. ಹೀಗಿದ್ದರೂ ಮತಗಟ್ಟೆಯಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವ ಬಗ್ಗೆ ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೇ ರಾಜಕೀಯ ಉದ್ದೇಶಕ್ಕಾಗಿ ಹತ್ತಾರು ಸಾವಿರ ಮತದಾರರ ಹೆಸರುಗಳನ್ನು ತೆಗೆಸಿರುವ ಬಗ್ಗೆ ಸಾರ್ವಜನಿಕರು ಆರೋಪಿಸಿದ್ದರೆ. ಜತೆಗೆ, ಉದ್ದೇಶಪೂರ್ವಜಕವಾಗಿ ಪಟ್ಟಿಯಿಂದ ಹೆಸರು ಬಿಟ್ಟುಹೋಗಿರುವ ಮತದಾರರಿಗೆ ಮತ್ತೂಮ್ಮೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಕ್ಷಗಳಿಗೆ ಮೊದಲೇ ಪಟ್ಟಿ ನೀಡಲಾಗಿತ್ತು: ಆಯೋಗದ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, ಆಯೋಗದಿಂದ ಎರಡು ಮೂರು ಬಾರಿ ಮತದಾರರ ಪಟ್ಟಿ ಪ್ರಕಟಿಸಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯಿಂದ ತೆಗೆದವರ ವಿವರ ಹಾಗೂ ಅಂತಿಮ ಪಟ್ಟಿ ನೀಡಲಾಗಿತ್ತು. ಆಗ ಯಾವುದೇ ಚಕಾರವೆತ್ತದೆ ಚುನಾವಣೆ ದಿನ ಆರೋಪಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸ್ಪಷ್ಟಪಡಿಸಿದರು.
ಚುನಾವಣಾ ಆಯೋಗದಿಂದ ಯಾವುದೇ ಮತದಾರರ ಹೆಸರನ್ನು ಏಕಾಏಕಿ ತೆಗೆದಿಲ್ಲ. ಬದಲಿಗೆ ಅಧಿಕಾರಿಗಳು ಪ್ರತಿಯೊಂದು ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಕ್ಕ-ಪಕ್ಕದವರಿಂದ ಮಾಹಿತಿ ಪಡೆದ ನಂತರವೇ ಹೆಸರುಗಳನ್ನು ತೆಗೆದಿದ್ದಾರೆ. ಅದರ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಂದ ಸುಮಾರು 2 ಲಕ್ಷ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ಆಯೋಗದಿಂದ 2018ರಲ್ಲಿಯೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆ ನಂತರ ಹಲವು ಬಾರಿ ಪರಿಷ್ಕರಣೆ ಮಾಡಲಾಗಿತ್ತು. ಜ.16ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ಬಳಿಕ ಯಾವುದೇ ಹೆಸರುಗಳನ್ನು ಪಟ್ಟಿಯಿಂದ ತೆಗೆದಿಲ್ಲ. ಆ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.