ತನಿಖೆಗೆ ಆದೇಶಿಸಿದ ಕೇಂದ್ರ ಆಯೋಗ
Team Udayavani, Apr 20, 2019, 3:00 AM IST
ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿಯಿಂದ 1.5 ಲಕ್ಷ ಮತದಾರರ ಹೆಸರು ನಾಪತ್ತೆಯಾದ ಪ್ರಕರಣ ಸಂಬಂಧ ಸೂಕ್ತ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶಿಸಿದೆ.
ಪ್ರಕರಣ ಕುರಿತಂತೆ ಸಾಕಷ್ಟು ದೂರುಗಳು ಬಂದಿರುವ ಹಿನ್ನಲೆಯಲ್ಲಿ ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್‌ಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಮತದಾರರ ಪಟ್ಟಿಯಲ್ಲಿ ಹೆಸರುಗಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಉದ್ದೇಶಪೂರ್ವಕವಾಗಿ ಹೆಸರು ತೆಗೆಯಲಾಗಿದೆ ಎಂದು ಆರೋಪಿಸಿದ್ದಾರೆ
ಆಕ್ರೋಶ: ಈ ನಡುವೆ ರಾಜ್ಯದಲ್ಲಿ ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ವೇಳೆ ಬಿಬಿಎಂಪಿ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಹೆಚ್ಚಿನ ಜನರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಕೆಲವೆಡೆ ಸಾರ್ವಜನಿಕರು ಮತಗಟ್ಟೆ ಗಳಲ್ಲೇ ಅಧಿಕಾರಿ ಗಳೊಂದಿಗೆ ವಾಗ್ವಾದ ನಡೆಸಿದ್ದರು.
ಆಯೋಗದಿಂದಲೇ ಸಂದೇಶ: ಇನ್ನು ಕೆಲ ಮತದಾ ರರು ಆಯೋಗದ ಸಹಾಯವಾಣಿ 1950ಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಈ ವೇಳೆ ಆಯೋಗ ದಿಂದಲೇ ಮತದಾರರಿಗೆ ಇಂತಹ ಮತಗಟ್ಟೆಯಲ್ಲಿ ನೀವು ಮತ ಚಲಾಯಿಸಬೇಕೆಂಬ ಸಂದೇಶ ಮತಗಟ್ಟೆ ವಿಳಾಸ ಸಮೇತ ಬಂದಿದೆ. ಹೀಗಿದ್ದರೂ ಮತಗಟ್ಟೆ ಯಲ್ಲಿನ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವ ಬಗ್ಗೆ ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಪಕ್ಷಗಳ ಮುಖಂಡರೇ ರಾಜಕೀಯ ಉದ್ದೇಶಕ್ಕಾಗಿ ಮತ ದಾರರ ಹೆಸರುಗಳನ್ನು ತೆಗೆಸಿರುವ ಬಗ್ಗೆ ಸಾರ್ವಜನಿ ಕರು ಆರೋಪಿಸಿದ್ದರೆ. ಜತೆಗೆ, ಪಟ್ಟಿಯಿಂದ ಹೆಸರು ಬಿಟ್ಟುಹೋಗಿರುವ ಮತದಾರರಿಗೆ ಮತ್ತೂಮ್ಮೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಕ್ಷಗಳಿಗೆ ಮೊದಲೇ ಪಟ್ಟಿ ನೀಡಲಾಗಿತ್ತು: ಯೋಗದ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, ಆಯೋಗದಿಂದ ಎರಡು ಮೂರು ಬಾರಿ ಮತದಾರರ ಪಟ್ಟಿ ಪ್ರಕಟಿಸಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯಿಂದ ತೆಗೆದವರ ವಿವರ ಹಾಗೂ ಅಂತಿಮ ಪಟ್ಟಿ ನೀಡಲಾಗಿತ್ತು. ಆಗ ಯಾವುದೇ ಚಕಾರವೆತ್ತದೆ ಚುನಾವಣೆ ದಿನ ಆರೋಪಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸ್ಪಷ್ಟಪಡಿಸಿದರು.
ಅಧಿಕಾರಿಗಳು ಪ್ರತಿಯೊಂದು ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಕ್ಕ-ಪಕ್ಕದವ ರಿಂದ ಮಾಹಿತಿ ಪಡೆದ ನಂತರವೇ ಹೆಸರುಗಳನ್ನು ತೆಗೆದಿದ್ದಾರೆ. ಅದರ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಂದ ಸುಮಾರು 2 ಲಕ್ಷ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ಆಯೋಗದಿಂದ 2018ರಲ್ಲಿಯೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆ ನಂತರ ಹಲವು ಬಾರಿ ಪರಿಷ್ಕರಣೆ ಮಾಡಲಾಗಿತ್ತು. ಜ.16ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ಬಳಿಕ ಯಾವುದೇ ಹೆಸರುಗಳನ್ನು ಪಟ್ಟಿಯಿಂದ ತೆಗೆದಿಲ್ಲ. ಆ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.