ಸ್ಟ್ರಾಂಗ್ ರೂಂಗೆ ಸರ್ಪಗಾವಲು
ಗಡಿ ಭದ್ರತಾ ಪಡೆ, ಪೊಲೀಸರ ಹದ್ದಿನ ಕಣ್ಣು • 20 ಕೊಠಡಿಯೊಳಗೆ ಮತಯಂತ್ರ ಭದ್ರ
Team Udayavani, Apr 20, 2019, 11:54 AM IST
ಮಂಡ್ಯ: ಮತಯಂತ್ರಗಳನ್ನು ಇಡಲಾಗಿರುವ ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಆವರಣದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಕಾಲೇಜು ಆವರಣದೊಳಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಇಡೀ ಕಾಲೇಜು ಆವರಣ ಗಡಿ ಭದ್ರತಾ ಪಡೆ ಹಾಗೂ ಪೊಲೀಸರ ಸುಪರ್ದಿಗೆ ಒಳಪಡಿಸಿದೆ.
ಗುರುವಾರ ಮತದಾನದ ಬಳಿಕ ಮಂಡ್ಯ ಲೋಕಸಭಾ ಕ್ಷೇತ್ರದ 8 ವಿಧಾನ ಸಭಾ ಕ್ಷೇತ್ರಗಳಿಂದ ಬಂದ ಮತಯಂತ್ರಗಳನ್ನು ಡಿ-ಮಸ್ಟರಿಂಗ್ ಮಾಡಿ ಕೊಠಡಿಗೆ ಸೇರಿಸಲಾಯಿತು. ಮತಯಂತ್ರಗಳು ಹಾಗೂ ವಿವಿಪ್ಯಾಟ್ ಮಿಷನ್‌ಗಳ ಲೆಕ್ಕ ಪಡೆದು, ಭದ್ರತಾ ಕೊಠಡಿಯೊಳಗೆ ಸೇರಿಸುವಷ್ಟರಲ್ಲಿ ಗುರುವಾರ ತಡರಾತ್ರಿಯಾಗಿತ್ತು. ಸಂಪೂರ್ಣ ಪ್ರಕ್ರಿಯೆ ಮುಗಿದ ಬಳಿಕ ಕೊಠಡಿಗಳಿಗೆ ಬೀಗ ಹಾಕಿ ಸೀಲ್ ಮಾಡಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಲಾಯಿತು.
ವಿದ್ಯುತ್ ಸಂಪರ್ಕ ಕಡಿತ: ಮತಯಂತ್ರಗಳ ಸುರಕ್ಷತೆ ಕಾಪಾಡುವ ಸಲುವಾಗಿ ಮತಯಂತ್ರ ಗಳನ್ನು ಇಡಲಾಗಿರುವ ಕೊಠಡಿಗಳಿಗೆ ಕಲ್ಪಿಸಿದ್ದ ವಿದ್ಯುತ್ ವ್ಯವಸ್ಥೆ ಕಡಿತಗೊಳಿಸಲಾಗಿದೆ. ನೀರಿನ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ನೂಟ್ ಅಥವಾ ನೀರಿನ ಅವಘಡಗಳಿಂದ ಮತಯಂತ್ರಗಳಿಗೆ ಸಂಭವಿಸಬಹುದಾದ ಹಾನಿ ತಪ್ಪಿಸುವ ಸಲುವಾಗಿ ಮುಂಜಾಗ್ರತೆಯಾಗಿ ಈ ಕ್ರಮ ವಹಿಸಲಾಗಿದೆ.
100 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ: ಸುರಕ್ಷತೆ ದೃಷ್ಟಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುತ್ತಲಿನ 100 ಮೀ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪ್ರವೇಶ ದ್ವಾರದಲ್ಲಿ ಬ್ಯಾರಿಕೇಟ್ ಅಳವಡಿಸಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ. ಸ್ಥಳೀಯ ಪೊಲೀಸರು ಕಾಲೇಜಿನ ಪ್ರವೇಶ ದ್ವಾರಗಳಲ್ಲಿ ನಿರಂತರವಾಗಿ ಗಸ್ತು ತಿರುಗುತ್ತಾ ಭದ್ರತೆ ಮೇಲೆ ಕಟ್ಟೆಚ್ಚರ ವಹಿಸಿದ್ದಾರೆ.
20 ಕೊಠಡಿಗಳಲ್ಲಿ ಮತಯಂತ್ರ ಭದ್ರ: ಸರ್ಕಾರಿ ಮಹಾವಿದ್ಯಾಲಯದ 20ಕ್ಕೂ ಹೆಚ್ಚು ಕೊಠಡಿಗಳಲ್ಲಿ ಮತಯಂತ್ರ ಗಳನ್ನಿಟ್ಟು ಕೊಠಡಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ. ಗಡಿಭದ್ರತಾ ಪಡೆಯ ಒಂದು ಕಂಪನಿ ಭದ್ರತಾ ಕೊಠಡಿಯ ಮೇಲುಸ್ತುವಾರಿ ವಹಿಸಿಕೊಂಡಿವೆ. ಸುಮಾರು 64 ಮಂದಿ 3 ಪಾಳಿಯಲ್ಲಿ ಭದ್ರತಾ ಕೊಠಡಿಯ ಕಾವಲು ಕಾಯುವರು. ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ನೊಳಗೆ ಸೀಸಿ ಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಭದ್ರತೆಯ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಕಟ್ಟಡದ ಹೊರಭಾಗ, ಒಳಭಾಗ, ಸ್ಟ್ರಾಂಗ್ ರೂಂ ಮುಂಭಾಗದಲ್ಲೆಲ್ಲಾ ಸೀಸಿ ಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಯಾವುದೇ ರೀತಿಯ ಭದ್ರತಾ ಲೋಪ ಎದುರಾಗದಂತೆ ಮುಂಜಾಗ್ರತೆ ವಹಿಸಲಾಗಿದೆ. ಗಡಿ ಭದ್ರತಾ ಪಡೆಯವರೊಂದಿಗೆ ರಾಜ್ಯ ಸಶಸ್ತ್ರ ಪೊಲೀಸ್ 3 ತುಕಡಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ 150 ಮಂದಿ ಸ್ಥಳೀಯ ಪೊಲೀಸರು ರಕ್ಷಣೆಗೆ ನೆರವಾಗಲಿದ್ದಾರೆ. ಭದ್ರತೆ ಮೇಲುಸ್ತುವಾರಿಗಾಗಿ 4 ಉಪ ಅಧೀಕ್ಷಕರು, 6 ಇನ್ಸ್‌ಪೆಕ್ಟರ್‌ಗಳು, 8 ಸಬ್ ಇನ್ಸ್‌ಪೆಕ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಬಗ್ಗೆ ಆಗಾಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.