ಸಂಭ್ರಮದ ಹನುಮ ಜಯಂತಿ

ದೇವಸ್ಥಾನಗಳಲ್ಲಿ ವಿಶೇಷ ಪೂಜೆ-ಅಭಿಷೇಕ ವಿವಿಧೆಡೆ ಭಕ್ತ ಸಮೂಹಕ್ಕೆ ಅನ್ನ ಸಂತರ್ಪಣೆ

Team Udayavani, Apr 20, 2019, 1:23 PM IST

20-April-17

ವಿಜಯಪುರ: ನಗರದ ವಿವಿಧ ಆಂಜನೇಯ ದೇವಾಲಯಗಳಲ್ಲಿ ಹನುಮ ಜಯಂತಿ ಆಚರಿಸಲಾಯಿತು.

ವಿಜಯಪುರ: ಜಿಲ್ಲೆಯಾದ್ಯಂತ ವಾಯುಪುತ್ರನ ಭಕ್ತರು ಶುಕ್ರವಾರ
ಶ್ರದ್ಧಾ ಭಕ್ತಿಯಿಂದ ತಮ್ಮ ಆರಾಧ್ಯ ದ್ಯೆವ ಹನುಮ ಜಯಂತಿ ಅಚರಿಸಿದರು. ಹನುಮಾನ ದೇವರ ದೇವಾಲಯಗಳಲ್ಲಿ ಭಕ್ತ ಸಾಗರ ನೆರೆದಿತ್ತು. ಬೆಳಗ್ಗೆಯಿಂದಲೇ ಹನುಮಾನ ದೇವಾಲಯಕ್ಕೆ ತೆರಳಿದ ಸಾವಿರಾರು ಸಂಖ್ಯೆ ಭಕ್ತಾದಿಗಳು ವಿಶೇಷ ಪೂಜೆ ಸಲ್ಲಿಸಿ ಹನುಮಂತನ ದರ್ಶನಾಶೀರ್ವಾದ ಪಡೆದು ಭಕ್ತಿ ಸಮರ್ಪಿಸಿದರು.

ಬಾಲ ಹನುಮನಿಗೆ ತೊಟ್ಟಿಲಲ್ಲಿ ಹಾಕಿ ಭಕ್ತಿ ಗೀತೆಗಳನ್ನು ಹಾಡಲಾಯಿತು. ಅಭಿಷೇಕ, ಎಲಿಪೂಜೆ, ಹೋಮ-ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನೆರವೇರಿದವು. ಜನರು ಭಕ್ತಿ ಭಾವದಿಂದ ಹನುಮಂತನನ್ನು ನೆನೆದರು. ಭಗವಾನ ಹನುಮಂತ ಅವರ ಕುರಿತಾದ ಭಕ್ತಿಗೀತೆಗಳು ಎಲ್ಲೆಡೆ ಮೊಳಗಿದವು. ಹನುಮಂತ ಹನುಮಂತ , ಪವಮಾನ ಪವಮಾನ ಜಗದ ಪ್ರಾಣ, ಜೈ ಹೋ ಪವನ ಕುಮಾರ ಎಂದೆಲ್ಲೆ ಹಾಡಿ ಹೊಗಳುವ ಮೂಲಕ ಭಕ್ತಿ ಸಮರ್ಪಣೆ ಮೆರೆದರು.

ನಗರದ ಹೊರ ವಲಯದಲ್ಲಿರುವ ಭೂತನಾಳ ಕೆರೆ ಬಳಿಯ
ಹನುಮಗಿರಿಯಲ್ಲಿ ಹನುಮ ಜಯಂತಿ ನಡೆಯಿತು. ಪವಮಾನ
ಹೋಮ, ಅಭಿಷೇಕ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಪಂ| ಮಧ್ವಾಚಾರ್ಯ ಮೊಕಾಶಿ ಹಾಗೂ ಪಂ|
ಸಂಜೀವಾಚಾರ್ಯ ಮದಭಾವಿ ಅವರ ನೇತೃತ್ವದಲ್ಲಿ ಈ ಬಾರಿ ಹನುಮ ದೀಕ್ಷಾಕಾರ್ಯಕ್ರಮ ನಡೆಯಿತು. ಯುವಕರಲ್ಲಿ
ದೇಶಭಕ್ತಿ ಹಾಗೂ ಹನುಮಂತನ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆ ದೊರಕಿಸುವ ಕೇಸರಿ, ಬಿಳಿ ಹಾಗೂ ಹಸಿರು ವರ್ಣದ ದಾರ ಕಟ್ಟುವ ಹನುಮದೀಕ್ಷಾ ಕಾರ್ಯಕ್ರಮ ವೈಭವದಿಂದ ನಡೆಯಿತು.

ವಿಜಯಪುರದ ಮುಳ್ಳಗಸಿ ಬಳಿ ಇರುವ ಹೊಯ್ಸಳರ ಕಾಲದ
800 ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಹನುಮಾನ
ದೇವಾಲಯದಲ್ಲಿ ಹನುಮ ಜಯಂತಿ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ನಂತರ ಹನುಮಂತ ದೇವರ 5 ಅಡಿ ಎತ್ತರದ ಭವ್ಯ ಬೆಳ್ಳಿ ಮೂರ್ತಿ ಮತ್ತು ಪಲ್ಲಕ್ಕಿ ಮೆರವಣಿಗೆ ವೈಭವದಿಂದ ನಡೆಯಿತು.

ನಗರದ ಸ್ಟೇಶನ್‌ ರಸ್ತೆಯಲ್ಲಿರುವ ಆಚಾರ ಕಟ್ಟಿ ಬಡಾವಣೆಯಲ್ಲಿನ 350 ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಶ್ರೀರಾಮ ಮಂದಿರದಲ್ಲಿ ಸಹ ಹನುಮ ಜಯಂತಿಯನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಯಿತು. ಜಲ ನಗರದ ಇಬ್ರಾಹಿಂಪುರ ರೈಲ್ವೇ ನಿಲ್ದಾಣ ಬಳಿ ಇರುವ ವಜ್ರಹನುಮಾನ ದೇವಾಲಯ, ಗಣೇಶ ನಗರದಲ್ಲಿರುವ ಸಾಕ್ಷಿ ಹನುಮಾನ ಮಂದಿರಗಳಲ್ಲೂ ಸಂಭ್ರಮದಿಂದ ಹನುಮ ಜಯಂತಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ವಿಜಯಪುರದ ಮನಗೂಳಿ ಅಗಸಿಯಲ್ಲಿರುವ ಹನುಮಾನ
ದೇವಾಲಯ, ವಿವೇಕ್‌ ನಗರದಲ್ಲಿರುವ ಪ್ರಸನ್ನ ಪಂಚಮುಖೀ ಪ್ರಾಣದೇವ ದೇವಾಲಯ, ಪ್ರಸನ್ನಾಂಜನೇಯ ದೇವಾಲಯ, ಹನುಮಂತದೇವರ ಗುಡಿ, ಮಧುಲಾ ಮಾರುತಿ ದೇವಾಲಯ, ಲದ್ದಿಕಟ್ಟಿ ಹನುಮಂತ ದೇವಾಲಯ ಸೇರಿದಂತೆ ಹಲವಾರು ಹನುಮಂತ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ಧಾರ್ಮಿಕ
ಕಾರ್ಯಕ್ರಮಗಳು ನೆರವೇರಿದವು.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

courts

Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.