ಕಾಲೇಜು-ಕೈಗಾರಿಕೆ ಸ್ಥಾಪನೆಯೇ ಮರೀಚಿಕೆ


Team Udayavani, Apr 20, 2019, 4:29 PM IST

bel-

ಹುಕ್ಕೇರಿ: ಲೋಕಸಭಾ ಚುನಾವಣೆ ಮತದಾನಕ್ಕೆ ಇನ್ನು ಕೆಲವು ದಿನಗಳು ಬಾಕಿ ಇದ್ದರೂ ಹುಕ್ಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಮಾತ್ರ ಏರಿಲ್ಲ. ಚುನಾವಣೆಯ ಇದೇಯೋ ಇಲ್ಲವೋ ಎಂಬ ವಾತಾವರಣ ಕ್ಷೇತ್ರದಲ್ಲಿದೆ.

ಲೋಕಸಭಾ ಚುನಾವಣೆಗೆ ಒಂದು ತಿಂಗಳಿನಿಂದಲೂ ನಡೆದ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ಹಾಗೂ ನಂತರದ ಬೆಳವಣಿಗೆ ಮತದಾರರ ಮೇಲೆ ಪರಿಣಾಮ ಬೀರಿದಂತೆ ಕಾಣುತ್ತಿದೆ. ಮೇಲಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಬ್ಬರೂ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದವ ರಾಗಿರುವುದರಿಂದ ಹುಕ್ಕೇರಿ ಕ್ಷೇತ್ರದ ಜನರಲ್ಲಿ ಅಂತಹ ಉತ್ಸಾಹ ಕಾಣುತ್ತಿಲ್ಲ. ಮಾಜಿ ಸಂಸದ ರಮೇಶ ಕತ್ತಿ ಅವರಿಗೆ ಟಿಕೆಟ್ ಸಿಗದೇ ಇರುವ ಕಾರಣ ನಿರಾಶರಾಗಿರುವ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಪ್ರಚಾರದಲ್ಲಿ ಕಾಣುತ್ತಿಲ್ಲ. ಅವರ ಅಭಿಮಾನಿಗಳನ್ನು ಪಕ್ಷದ ಚಟುವಟಿಕೆಗೆ ಕರೆತರಲು ಹರಸಾಹಸ ಪಡಬೇಕಾಗಿದೆ. ಇನ್ನು ಕಾಂಗ್ರೆಸ್‌ನಲ್ಲಿ ಸಹ ಇದೇ ಸ್ಥಿತಿ ಇರುವುದರಿಂದ ಎಲ್ಲಿಯೂ ಪ್ರಚಾರದ ಅಬ್ಬರ ಹಾಗೂ ಉನ್ನತ ನಾಯಕರ ಸಮಾವೇಶಗಳು ಕ್ಷೇತ್ರದಲ್ಲಿ ಕಾಣುತ್ತಿಲ್ಲ. ಕ್ಷೇತ್ರದಲ್ಲಿ ಸಹಕಾರಿ ಸಂಘ. ಸಂಸ್ಥೆಗಳ ಮೇಲೆ ಮತದಾನ ಅವಲಂಬಿತವಾಗಿದೆ.

ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಮಾಡಿ ಪ್ರಚಾರದ ಮೂಲಕ ಮತದಾರರ ಮನಗೆಲ್ಲಲು ಪ್ರಯತ್ನ ಮಾಡಿದ್ದಾರೆ. ದೇಶದಲ್ಲಿ ಇತ್ತೀಚೆಗೆ ನಡೆದ ಬಾಲಾಕೋಟ ಘಟನೆ, ಮೇಲಿಂದ ಮೇಲೆ ಕೇಳಿಸುತ್ತಿರುವ ರಫೇಲ್ ಡೀಲ್ ಮೊದಲಾದ ಪ್ರಕರಣಗಳ ಕುರಿತು ಇಲ್ಲಿಯ ಜನರಿಗೆ ಆಸಕ್ತಿ ಇಲ್ಲ. ಅವರಿಗೆ ಇದೂ ಬೇಕಾಗಿಯೂ ಇಲ್ಲ. ಸ್ಥಳೀಯ ರಾಜಕಾರಣ ಹಾಗೂಈ ಸಮಸ್ಯೆಗಳ ಬಗ್ಗೆ ಮಾತ್ರ ಚರ್ಚೆ ನಡೆದಿದೆ.

ಆರಂಭದಲ್ಲಿ ಅಭ್ಯರ್ಥಿಗಳು ಎಲ್ಲ ಕಡೆ ಪ್ರಚಾರ ಮಾಡಿದರೂ ಕೊನೆಯ ಮೂರು ದಿನಗಳಲ್ಲಿ ನಡೆಯುವ ಪ್ರಚಾರ, ಮತದಾರರ ಮನವೊಲಿಕೆ ಹಾಗೂ ಕರಾಮತ್ತು ಎಲ್ಲ ಲೆಕ್ಕಾಚಾರವನ್ನೂ ಬದಲಾಯಿಸುತ್ತದೆ ಎಂಬ ಅಭಿಪ್ರಾಯ ಕ್ಷೇತ್ರದಲ್ಲಿದೆ. ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಂದು ಹೋದ ಮೇಲೆ ಕತ್ತಿ ಸಹೋದರರ ಮುನಿಸು ಅಂತ್ಯವಾಗಿದೆಯೇ. ಅವರು ಮುಕ್ತ ಮನಸ್ಸಿನಿಂದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರೆಯೇ ಎಂಬ ಕುತೂಹಲದ ಚರ್ಚೆ ಎಲ್ಲ ಕಡೆ ಕಾಣುತ್ತದೆ. ಇದರ ಜತೆಗೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಸಹ ಸ್ವಾರಸ್ಯಕರ ಚರ್ಚೆಗಳು ಇಲ್ಲಿ ನಡೆಯುವುದನ್ನು ಕಾಣಬಹುದು.

ಕ್ಷೇತ್ರದಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿವರೆಗೆ ಸೌಲಭ್ಯಗಳಿದ್ದರೂ ಹೆಚ್ಚಿನ ವ್ಯಾಸಂಗಕ್ಕಾಗಿ ಜಿಲ್ಲಾ ಕೇಂದ್ರಗಳನ್ನು ಅವಲಂಬಿಸಬೇಕಾಗಿದೆ. ರೈತರಿಗೆ ಅನುಕೂಲವಾಗಬೇಕಿರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಸಂಪೂರ್ಣವಾಗಬೇಕಾಗಿದೆ. ಕ್ಷೇತ್ರದಲ್ಲಿ ದೊಡ್ಡ ಕೈಗಾರಿಕೆಗಳು, ತಾಂತ್ರಿಕ ವೃತ್ತಿಪರ ಮಹಾವಿದ್ಯಾಲಯಗಳು ಸ್ಥಾಪನೆ ಮಾಡಲು ಒತ್ತು ನೀಡಬೇಕು ಎಂಬ ಬೇಡಿಕೆ ಇದೆ.

ಪಕ್ಕದಲ್ಲೇ ಹಿಡಕಲ್ ಜಲಾಶಯ, ಹಿರಣ್ಯಕೇಶಿ ಹಾಗೂ ಘಟಪ್ರಭಾ ನದಿ ಇರುವುದರಿಂದ ನೀರಾವರಿಯ ಸಮಸ್ಯೆ ಅಷ್ಟು ಗಂಭೀರವಾಗಿಲ್ಲ. ಕ್ಷೇತ್ರದಲ್ಲಿ ರೈತಾಪಿ ಕುಟುಂಬಗಳೇ ಹೆಚ್ಚು. ತಾಲೂಕಿನಲ್ಲಿ ಏಕಸ್‌ ಹಾಗೂ ಕ್ವೆಸ್ಟ್‌ ಎಂಬ ಬಹು ರಾಷ್ಟ್ರೀಯ ಕಂಪನಿಗಳು ಮತ್ತು ಕೇಂದ್ರ ಸರ್ಕಾರಿ ಸ್ವಾಮ್ಯದ ಒಂದು ಕಂಪನಿ ಇರುವುದರಿಂದ ಸ್ಥಳೀಯ ಜನರಿಗೆ ಒಂದಿಷ್ಟು ಉದ್ಯೋಗ ಸಿಕ್ಕಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಸಣ್ಣ ಕೈಗಾರಿಕೆಗಳು ಬಂದಿಲ್ಲ ಎಂಬ ಕೊರಗಿದೆ.

ಟಾಪ್ ನ್ಯೂಸ್

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

1-belagavi

Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ದಾಳಿ

Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.