ಮಹದೇವಪ್ಪ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು
Team Udayavani, Apr 21, 2019, 3:00 AM IST
ತಿ.ನರಸೀಪುರ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ 66ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ರೋಗಿಗಳಿಗೆ ಹಣ್ಣು ವಿತರಿಸಿದರು.
ಪಟ್ಟಣದ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಡಾ.ಎಚ್.ಸಿ.ಮಹದೇವಪ್ಪ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಚಿದರು.
ತಾಪಂ ಅಧ್ಯಕ್ಷ ಆರ್.ಚಲುವರಾಜು ಮಾತನಾಡಿ, ಲೋಕೋಪಯೋಗಿ ಸಚಿವರಾಗಿದ್ದ ಡಾ.ಎಚ್.ಸಿ.ಮಹದೇವಪ್ಪ ಅವರು ತಿ.ನರಸೀಪುರ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿದ್ದಾರೆ ಎಂದು ಸ್ಮರಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ರಾಜಕಾರಣದಲ್ಲಿ ಕ್ರಿಯಾಶೀಲತೆಗೆ ಹೆಸರಾಗಿ, ಜಾತ್ಯತೀತ ಗುಣದಿಂದಲೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿದಂತಹ ಮಹದೇವಪ್ಪ ಎಲ್ಲರೂ ಮೆಚ್ಚುವಂತಹ ನಾಯಕರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ರಾಜು, ನಿರ್ದೇಶಕ ಚಿಕ್ಕಣ್ಣ, ತಾಪಂ ಮಾಜಿ ಅಧ್ಯಕ್ಷರಾದ ಸಿ.ಚಾಮೇಗೌಡ, ಕುಮಾರಸ್ವಾಮಿ, ಜಿಪಂ ಮಾಜಿ ಸದಸ್ಯ ಕೆ.ಮಹದೇವ, ಪಿ.ಸ್ವಾಮಿನಾಥ್‌ಗೌಡ,
ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಗಣೇಶ, ಸದಸ್ಯ ರಾಮಲಿಂಗಯ್ಯ, ಮಾಜಿ ಉಪಾಧ್ಯಕ್ಷ ಗಿರೀಶ್, ಕುಕ್ಕೂರು ಪ್ರಸನ್ನ, ದೊಡ್ಡಮುಲಗೂಡು ಸ್ವಾಮಿಗೌಡ, ಪುರಸಭಾ ಸದಸ್ಯ ಬಾದಾು ಮಂಜು, ಮೃಗಾಲಯ ಪ್ರಾಧಿಕಾರದ ಮಾಜಿ ನಿರ್ದೇಶಕಿ ಲತಾ ಜಗದೀಶ್,
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯದರ್ಶಿ ಎಂ.ಬಿ.ಚಂದ್ರಶೇಖರ, ಕೊಳತ್ತೂರು ಗ್ರಾಪಂ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ಎಂ.ಬಿ.ಸಾಗರ್, ಶಿವಮ್ಮ, ಮಾಜಿ ಅಧ್ಯಕ್ಷರಾದ ವಾಟಾಳು ನಾಗೇಶ, ಚಿದರವಳ್ಳಿ ಚಂದ್ರಶೇಖರ, ಮುಸುನಕೊಪ್ಪಲು ಶಿವರಾಮು,
ಕುರುಬರ ಸಂಘದ ಉಪಾಧ್ಯಕ್ಷ ಪುಳ್ಳಾರಿ ಮಾದೇಶ, ಅಂದ ಯುವ ಜಿಲ್ಲಾಧ್ಯಕ್ಷ ಜೆ.ಅನೂಪ್, ಕಿರಣ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಮಹೇಶ, ಮುಖಂಡರಾದ ಕೆ.ಸಿ.ಮಹದೇವು, ವೀರಪ್ಪ ಒಡೆಯರಹುಂಡಿ ಬಸವರಾಜು, ಗುರುಮಲ್ಲ,
ಕೋಣಗಹಳ್ಳಿ ನಾಗರಾಜು, ಎಂ.ಮಹೇಶ, ಮಹದೇವಮ್ಮ, ಜಯಲಕ್ಷ್ಮೀ, ಹೊರಳಹಳ್ಳಿ ನಿಂಗಯ್ಯ, ಕೆಬ್ಬೇಹುಂಡಿ ಮಹೇಶ, ಮಣಿಕಂಠಸ್ವಾು, ರಂಗಸ್ವಾಮಿ, ಹಸುವಟ್ಟಿ ಜವರಯ್ಯ, ಏಳುಮಲೆ ಮಂಜು ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.