ಶಿವಮೊಗ್ಗದಲ್ಲಿ ಮೈತ್ರಿಕೂಟಕ್ಕೆ ಆನೆಬಲ ತಂದ ಡಿಕೆಶಿ !


Team Udayavani, Apr 21, 2019, 3:00 AM IST

shivamogga

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಖಾಡಕ್ಕೆ “ಡಿಕೆ ಬ್ರದರ್ ‘ ಕಾಲಿಟ್ಟಿದ್ದು ಮತ್ತೂಮ್ಮೆ “ಟ್ರಬಲ್‌ ಶೂಟರ್’ ಎನ್ನುವುದನ್ನು ನಿರೂಪಿಸಿದ್ದಾರೆ. ಹೊಂದಾಣಿಕೆ ಕೊರತೆಯಿಂದ ಪ್ರಚಾರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ಮೈತ್ರಿಕೂಟಕ್ಕೆ ಡಿ.ಕೆ.ಶಿವಕುಮಾರ್‌ ಆಗಮನ ಆನೆ ಬಲ ನೀಡಿದೆ.

ತೀರ್ಥಹಳ್ಳಿ ಹಾಗೂ ಭದ್ರಾವತಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಒಂದೇ ವೇದಿಕೆ ಏರಲು ನಿರಾಕರಿಸಿದ್ದ ಕಾರಣ ಉಪ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ನಿರೀಕ್ಷಿತ ಮತ ಗಳಿಕೆ ಸಾಧ್ಯವಾಗಿರಲಿಲ್ಲ. ಇದರಿಂದ ಕಡಿಮೆ ಅಂತರದಲ್ಲಿ ಮಧು ಬಂಗಾರಪ್ಪ ಸೋಲನುಭವಿಸಿದ್ದರು.

ಸೋಲಿನ ಪಾಠ ಕಲಿತ ಮಧು ಟಿಕೆಟ್‌ ಪಕ್ಕಾ ಆಗುತ್ತಲೇ ಟ್ರಬಲ್‌ ಶೂಟರ್‌ ಡಿ.ಕೆ. ಶಿವಕುಮಾರ್‌ ಕ್ಷೇತ್ರದ ಉಸ್ತುವಾರಿ ತೆಗೆದುಕೊಳ್ಳಬೇಕೆಂದು ಸಿಎಂಗೆ ಮನವಿ ಮಾಡಿದ್ದರು. ಉಸ್ತುವಾರಿ ತೆಗೆದುಕೊಳ್ಳದಿದ್ದರೂ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

ಮಾತಿನಂತೆ ಬಂದ ಡಿಕೆಶಿ ಭದ್ರಾವತಿ, ಶಿವಮೊಗ್ಗ, ತೀರ್ಥಹಳ್ಳಿಗೆ ಭೇಟಿ ಕೊಟ್ಟು, “ರಾಷ್ಟ್ರ ನಾಯಕರು ಒಂದಾಗಿದ್ದಾರೆ. ನಾವು ಆಗುವುದರಲ್ಲಿ ತಪ್ಪೇನಿಲ್ಲ. ಒಂದೇ ಕಾರಿನಲ್ಲಿ ಹೋಗಿ ಪ್ರಚಾರ ಮಾಡಿ, ಇಲ್ಲ ಬೇರೆ ಗಾಡಿ ಹತ್ತಿ’ ಎಂದು ತಾಕೀತು ಮಾಡಿದ್ದರು.

ದೇಶಕ್ಕಾಗಿ ಒಂದಾಗೋಣ ಎಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಹಾಗೂ ಆರ್‌.ಎಂ. ಮಂಜುನಾಥ ಗೌಡ ಒಂದೇ ಕಾರಿನಲ್ಲಿ ತೆರಳಿ ಪ್ರಚಾರ ಮಾಡಿದರು. ಆದರೆ ಭದ್ರಾವತಿಯಲ್ಲಿ ಪ್ರತ್ಯೇಕವಾಗಿಯೇ ಪ್ರಚಾರ ಮಾಡುತ್ತೇವೆ ಎಂದಿದ್ದರು.

ಆದರೆ ಪ್ರತ್ಯೇಕವಾಗಿಯೂ ಪ್ರಚಾರ ಮಾಡಲಿಲ್ಲ. ಇದನ್ನೆಲ್ಲ ಗಮನಿಸುತ್ತಿದ್ದ ಡಿಕೆಶಿ ಶುಕ್ರವಾರ (ಏ.19) ಆಗಮಿಸುತ್ತಿದ್ದಂತೆ ತಡರಾತ್ರಿ ಸಭೆ ನಡೆಸಿ ಹಾಲಿ ಮತ್ತು ಮಾಜಿ ಶಾಸಕರ ಮನವೊಲಿಸಿ ಕೈ ಕುಲುಕಿಸಿದರು. ಇದು ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಭದ್ರಾವತಿ ಜನರಿಗೇ ಶಾಕ್‌: ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸಿನ ಮೇಲೆ ರಾಜಕಾರಣ ಮಾಡಿಕೊಂಡು ಬಂದಿದ್ದ ಎಂ.ಜೆ. ಅಪ್ಪಾಜಿ ಗೌಡ ಹಾಗೂ ಬಿ.ಕೆ. ಸಂಗಮೇಶ್‌ 30 ವರ್ಷಗಳಿಂದ ಮುಖಾಮುಖೀಯಾಗುತ್ತಿದ್ದಾರೆ.

ಇಬ್ಬರೂ ಪಕ್ಷೇತರರಾಗಿಯೇ ಖಾತೆ ತೆರೆದವರು. ಇಬ್ಬರ ನಡುವಿನ ಜಗಳಗಳು ತಾಲೂಕಿನ ಜನರನ್ನೇ ಬೆಚ್ಚಿಬೀಳಿಸಿವೆ. ಈ ಇಬ್ಬರೂ ಘಟಾನುಘಟಿ ನಾಯಕರು ಈಗ ಒಂದೇ ವೇದಿಕೆ ಏರಿರುವುದು ಟ್ರಬಲ್‌ ಶೂಟರ್‌ ಡಿಕೆಶಿ ಚಾಣಾಕ್ಷತನಕ್ಕೆ ಸಾಕ್ಷಿಯಾಗಿದೆ.

ಶಿವಕುಮಾರ್‌ ರಾಜ್ಯದ ಬೇರೆ ಕಡೆಯೂ ಪ್ರವಾಸದಲ್ಲಿರುವುದರಿಂದ ಸಹೋದರ ಡಿ.ಕೆ. ಸುರೇಶ್‌ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಲ್ಲದೇ 15ಕ್ಕೂ ಹೆಚ್ಚು ಸಚಿವರು ಹಾಗೂ ಶಾಸಕರು ಸಹ ಪ್ರತಿ ತಾಲೂಕಿನ ಜವಾಬ್ದಾರಿ ತೆಗೆದುಕೊಂಡಿದ್ದಾರೆ.

ಭೇದಿಸುತ್ತಾರಾ ಬಿಜೆಪಿ ಕೋಟೆ: ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ ಏಳರಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಯಡಿಯೂರಪ್ಪ ಸಿಎಂ ಆದಾಗ ಮಾಡಿದ್ದ ಅಭಿವೃದ್ಧಿ ಕಾರ್ಯಕ್ರಮಗಳು, ಸಂಘಟನೆ ಬಲ ಬಿಜೆಪಿಗೆ ಶ್ರೀರಕ್ಷೆಯಾಗಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ನಿರ್ಮಲಾ ಸೀತಾರಾಮನ್‌, ಎಸ್‌.ಎಂ. ಕೃಷ್ಣ ಸೇರಿ ಅನೇಕರು ಜಿಲ್ಲೆಯಲ್ಲಿ ಪ್ರಚಾರ ನಡೆಸಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಕೆಶಿ ಬಿಜೆಪಿ ಭದ್ರಕೋಟೆ ಹೇಗೆ ಭೇದಿಸುತ್ತಾರೆ ಕಾದುನೋಡಬೇಕಿದೆ.

ಯಡಿಯೂರಪ್ಪಗೆ ಟಾಂಗ್‌: ಡಿಕೆಶಿ ಚುನಾವಣಾ ರಣತಂತ್ರ ರೂಪಿಸಿದಷ್ಟೇ ಅಲ್ಲದೇ ಯಡಿಯೂರಪ್ಪ ವಿರುದ್ಧ ವಾಗ್ಧಾಳಿ ಕೂಡ ನಡೆಸುತ್ತಿದ್ದಾರೆ. ನೀರಾವರಿ ತಂದಿಲ್ಲ, ಅಚ್ಛೇ ದಿನ್‌ ಬಂದಿಲ್ಲ, ನಿಮ್ಮ ಮುಖಕ್ಕೆ ಏಕೆ ಮತ ಕೇಳುತ್ತಿಲ್ಲ, ಯಡಿಯೂರಪ್ಪ ಡೈರಿ ಹೀಗೆ ಅನೇಕ ವಿಷಯಗಳು ಪ್ರಸ್ತಾಪವಾಗುತ್ತಿವೆ.

* ಶರತ್‌ ಭದ್ರಾವತಿ

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.