ಕೋಟ ಕಾರಂತ ಕಲಾಭವನ: ಕೆ.ಸಿ ಕುಂದರ್ ಪ್ರಶಸ್ತಿ ಪ್ರದಾನ
Team Udayavani, Apr 21, 2019, 6:30 AM IST
ಕೋಟ: ಸಾಂಪ್ರದಾಯಿಕ ಕುಲಕಸಬುಗಾರ ಸೋಮ ಮರಕಾಲ ಹಾಗೂ ಗುಡಿಕೈಗಾರಿಕೆಯಲ್ಲಿ ಹೆಸರು ಗಳಿಸಿದ ನಾಗರಾಜ್ ಆಚಾರ್ಯ ಗುಂಡ್ಮಿ ಅವರಿಗೆ ಎ. 20ರಂದು ಕೋಟ ಕಾರಂತ ಕಲಾಭವನದಲ್ಲಿ ದಿ| ಕೆ.ಸಿ ಕುಂದರ್ ಸ್ಮಾರಕ ಪುರಸ್ಕಾರ ನೀಡಿ ಗೌರವಿಸಲಾಯಿತು.
ಡಾ|ಕೆ.ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಹಾಗೂ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾ.ಪಂ., ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಜೇಸಿಐ ಕಲ್ಯಾಣಪುರ, ರೋಟರಿ ಹಂಗಾಕಟ್ಟೆ-ಸಾಸ್ತಾನ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು.
ಬಾಲಪ್ರತಿಭೆ ಸಿಂಚನ ಕೋಟೇಶ್ವರ ಮಾತನಾಡಿ, ಮಕ್ಕಳ ಪ್ರತಿಭೆಗಳಿಗೆ
ಹೆತ್ತವರು ಸೂಕ್ತ ಪ್ರೋತ್ಸಾಹ ನೀಡಬೇಕು ಎಂದರು.
ಕಾರ್ಯಕ್ರಮದ ಸಂಯೋಜಕ, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಮಾತನಾಡಿ, ಕೆ.ಸಿ. ಕುಂದರ್ ಅವರು ಕರಾವಳಿ ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಭಾಸ್ಯ ಬರೆದವರು ಹಾಗೂ ಆಧುನಿಕ ಮಾರುಕಟ್ಟೆ
ವ್ಯವಸ್ಥೆಯನ್ನು ಪರಿಚಯಿಸಿದವರು. ಅವರ ದಾರಿಯಲ್ಲೇ ನಾವು ಮುಂದುವರಿಯುತ್ತಿದ್ದೇವೆ ಎಂದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ ಅಧ್ಯಕ್ಷತೆ ವಹಿಸಿದ್ದರು. ಕಲ್ಯಾಣಪುರ ಜೇಸಿಐ ಅಧ್ಯಕ್ಷೆ ಆಶಾ ಅಲೆನ್‌ವಾಜ್, ಹಂಗಾರಕಟ್ಟೆ ರೋಟರಿ ಅಧ್ಯಕ್ಷೆ ಸುಲತಾ ಹೆಗ್ಡೆ ಹಾಗೂ ಕೆ.ಸಿ. ಕುಂದರ್ ಸಂಬಂಧಿಗಳಾದ ಪ್ರೇಮಾ ರಮೇಶ್, ಮಹೇಶ್ವರೀ ಸುರೇಶ್, ಸರೋಜಾ ಕಾರ್ತಿಕ್ ಮತ್ತು ಕೋಟತಟ್ಟು ಗ್ರಾ.ಪಂ. ಪಿಡಿಒ ಸುಜಾತಾ ಲಕ್ಕಪ್ಪ, ವಿಧಾನಪರಿಷತ್ ವಿಪಕ್ಷ ನಾಯಕರ ಆಪ್ತಸಹಾಯಕರಾದ ಹರೀಶ್ ಶೆಟ್ಟಿ, ವಿವೇಕ್ ಅಮೀನ್, ಕಾರಂತ ಟ್ರಸ್ಟ್‌ನ ಟ್ರಸ್ಟಿ ಸುಬ್ರಾಯ ಆಚಾರ್ಯ, ಶಿಬಿರದ ನಿರ್ದೇಶಕರಾದ ಸತೀಶ್ ವಡ್ಡರ್ಸೆ, ಕುಮಾರ್, ಪ್ರಶಾಂತ್ ಸಾೖಬ್ರಕಟ್ಟೆ, ರವಿಕಿರಣ್ ಕೋಟ ಉಪಸ್ಥಿತರಿದ್ದರು.
ಕಾರಂತ ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಶ್ರೀನಿಧಿ, ಯಶಸ್ವಿನಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.