ಕರಗ ಉತ್ಸವದಲ್ಲಿ ಹೊಡೆದಾಟ
Team Udayavani, Apr 21, 2019, 3:00 AM IST
ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ವಿಶ್ವವಿಖ್ಯಾತ ಕರಗ ಉತ್ಸವದ ವೇಳೆ ಕ್ಷುಲ್ಲಕ ವಿಚಾರವಾಗಿ ಇಬ್ಬರು ಯುವಕರು ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಆ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಯುವಕರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ತಿಗಳಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನ ಸಮೀಪ ಕರಗ ಉತ್ಸವದ ಮೆರವಣಿಗೆ ನಡೆಯುತ್ತಿತ್ತು.
ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಜಗಳದ ವಿಡಿಯೋ ರೆಕಾರ್ಡ್ ಮಾಡಿದ ಕೆಲವರು ದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ ಉತ್ಸವದಲ್ಲಿ ಪಾಲ್ಗೊಂಡಿದ್ದ ಯುವತಿಯನ್ನು ಚುಡಾಯಿಸಿದ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಹಲಸೂರು ಗೇಟ್ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.