ರಫೆಲ್ ಅಕ್ರಮ ನಡೆದಿದ್ದರೆ ದಾಖಲೆ ಕೊಡಲಿ
ಬಿಜೆಪಿ ಪ್ರಬುದ್ಧರ ಸಮಾವೇಶ
Team Udayavani, Apr 21, 2019, 3:24 PM IST
ರಾಯಚೂರು: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಉದ್ಘಾಟಿಸಿದರು.
ರಾಯಚೂರು: ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ, ಅವ್ಯವಹಾರದ ದಾಖಲೆ ಬಿಡುಗಡೆ ಮಾಡಿ ಸಾಬೀತು ಮಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಸವಾಲು ಹಾಕಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಬಿಜೆಪಿಯಿಂದ ಆಯೋಜಿಸಿದ್ದ ಮೋದಿ ಮತ್ತೂಮ್ಮೆ ನವ ಭಾರತ ನಿರ್ಮಾಣ ಕುರಿತು ಪ್ರಬುದ್ಧರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿಯವರು ಒಂದೂ ಭ್ರಷ್ಟಾಚಾರ ಮಾಡಿಲ್ಲ. ಐದು ವರ್ಷದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಮೊತ್ತದ ಟೆಂಡರ್ ಕರೆದರೂ ನಯಾ ಪೈಸೆ ಅಕ್ರಮ ನಡೆದಿಲ್ಲ. ಹೀಗಾಗಿ ಅವರಿಗೆ ಅದನ್ನು ಸಾಬೀತು ಮಾಡಲು ಆಗುತ್ತಿಲ್ಲ.
12 ನಿಮಿಷ ಭಾಷಣ ಮಾಡಿದರೆ ರಾಹುಲ್ ಗಾಂಧಿಗೆ ವಿಶ್ರಾಂತಿ ಬೇಕು. ಇಂಥವರಿಂದ ದೇಶದ ಪ್ರಗತಿ ಹೇಗೆ ಸಾಧ್ಯ ಎಂದು ಲೇವಡಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಆದರೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೊಮ್ಮಗನಿಗಾಗಿ
ತಮ್ಮ ಕ್ಷೇತ್ರವನ್ನೇ ತ್ಯಾಗ ಮಾಡಿದರು. ಆದರೆ, ಈ ಬಾರಿ ಕುಟುಂಬ ರಾಜಕಾರಣ ಮಾಡುತ್ತಿರುವ ದೇವೇಗೌಡ, ರಾಯಚೂರು ಸಂಸದ ಬಿ.ವಿ.ನಾಯಕ ಸೋಲು ಖಚಿತ ಎಂದರು.
ಉಜ್ವಲ ಯೋಜನೆಯಡಿ 6.97 ಕೋಟಿ ಸಿಲಿಂಡರ್ ವಿತರಣೆ, 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಇದು ಕೆಳಮಟ್ಟದ ಜನರ ಗಮನಕ್ಕೆ ಬರಬೇಕಾದರೆ ಇನ್ನೂ ಐದು ವರ್ಷ ಮೋದಿಯವರಿಗೆ ಅಧಿಕಾರ ನೀಡಬೇಕು ಎಂದರು.
ನಿವೃತ್ತ ಸೈನಿಕರ ಸಂಘ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿತು. ಮಾಜಿ ಸಚಿವ ಸಿ.ಟಿ. ರವಿ, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿದರು. ಶಾಸಕರಾದ ಡಾ|
ಶಿವರಾಜ ಪಾಟೀಲ, ರಾಜುಗೌಡ, ಸಂಸದರಾದ ಪಿ.ಸಿ. ಮೋಹನ, ಮಾಜಿ ಸಚಿವ ನಾರಾಯಣಸ್ವಾಮಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಎನ್.ಶಂಕ್ರಪ್ಪ, ವಿಭಾಗಿಯ ಉಸ್ತುವಾರಿ ಅಶೋಕ ಗಸ್ತಿ, ಬಿಜೆಪಿ
ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.