ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಮಂಗಳೂರಿನ ಮಹಿಳೆ ಸಾವು
ಭಾರತೀಯ ರಾಯಭಾರಿ ಕಛೇರಿ ಸಹಾಯವಾಣಿ ಸಂಖ್ಯೆಗಳು: +94777903082, +94112422788, +94112422789, +94777902082, ಮತ್ತು +94772234176
Team Udayavani, Apr 21, 2019, 3:40 PM IST
ಕೊಲಂಬೋ: ಈಸ್ಟರ್ ಆಚರಣೆಯ ವೇಳೆ ಶ್ರೀಲಂಕಾ ರಾಜಧಾನಿ ಕೊಲಂಬೋ ಸೇರಿ ಮೂರು ನಗರಗಳಲ್ಲಿ ಉಗ್ರರು 8 ಕಡೆಗಳಲ್ಲಿ ಸರಣಿ ಸ್ಫೋಟಗಳನ್ನು ನಡೆಸಿದ್ದು, ಮಂಗಳೂರಿನ ಮಹಿಳೆ ಸೇರಿ ಕನಿಷ್ಠ 162 ಮಂದಿ ಪ್ರಾಣ ಕಳೆದುಕೊಂಡಿದ್ದು , 400ಕ್ಕೂ ಹೆಚ್ಚಿನ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಲಂಬೋಗೆ ಪ್ರವಾಸಕ್ಕೆ ತೆರಳಿದ್ದ ರಝೀನಾ ಖಾದರ್ ಕುಕ್ಕಾಡಿ (58)ಎಂಬ ಮಹಿಳೆ ಸಾವನ್ನಪ್ಪಿರುವ ಬಗ್ಗೆ ವಿವರಗಳು ಲಭ್ಯವಾಗಿದ್ದು, ಮೃತ ಮಹಿಳೆ ಪತಿ ರಝಾಕ್ ದುಬೈನಲ್ಲಿ ನೆಲೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಳಗ್ಗೆ 6ಕಡೆಗಳಲ್ಲಿ ನಡೆದ ಸರಣಿ ದಾಳಿಯಿಂದ ಇಡೀ ದೇಶವೇ ಬೆಚ್ಚಿ ಬಿದ್ದಿದ್ದು, ಮಧ್ಯಾಹ್ನ ಕೊಲಂಬೋದ ಇನ್ನೆರಡು ಸ್ಥಳಗಳಲ್ಲಿ ಪ್ರಬಲ ಸ್ಫೋಟಗಳು ಸಂಭವಿಸಿದ್ದು ಆತಂಕ ಇನ್ನಷ್ಟು ಹೆಚ್ಚಾಗಿದೆ.
ಕೊಲಂಬೋ ಸೇರಿದಂತೆ ಶ್ರೀಲಂಕಾದೆಲ್ಲೆಡೆ ಹೈ ಅಲರ್ಟ್ ಘೋಷಿಸಿ ಕಟ್ಟೆಚ್ಚರ ವಹಿಸಲಾಗಿದೆ. ವಿಮಾನ ನಿಲ್ದಾಣಗಳು, ಬಸ್ ನಿಲ್ದಾಣಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಬೆಳಗ್ಗೆ ಮೂರು ಚರ್ಚ್‌ಗಳು ಮತ್ತು ಮೂರು ಪಂಚತಾರಾ ಹೊಟೇಲ್‌ಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಮಧ್ಯಾಹ್ನ ಕೊಲಂಬೋದ ದೆಹಿವಾಲಾ ಮತ್ತು ಡೆಮೊಟಗೋಡಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ.
ದೆಹಿವಾಲಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಬಟ್ಟಿಕಾಲೋಯಾದ ಚರ್ಚ್‌ನಲ್ಲಿ ಮೊದಲ ನ್ಪೋಟ ಸಂಭವಸಿದ್ದು, ಬಳಿಕ ಕೊಲಂಬೋದ ಕೊಚ್ಚಿಕೊಡೆಯ ಚರ್ಚ್‌ನಲ್ಲಿ ಸ್ಫೋಟ ಸಂಭವಿಸಿದೆ.
ಕೊಲಂಬೋ ನಗರದಲ್ಲಿ ಸೇನಾ ಪಡೆಗಳ ತುಕಡಿಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲಾ ಭದ್ರತಾ ಸಿಬಂದಿಗಳ ರಜೆ ಕಡಿತಗೊಳಿಸಲಾಗಿದೆ.
ಸಾಮಾಜಿಕ ತಾಣಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸೋಮವಾರ ಮತ್ತು ಮಂಗಳವಾರ ಸರ್ಕಾರಿ ರಜೆ ಘೋಷಿಸಲಾಗಿದೆ.
ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರು ಭದ್ರತಾ ಸಮಿತಿಯ ತುರ್ತು ಸಭೆಯನ್ನು ಕರೆದು ಸ್ಫೋಟಗಳ ಬಗ್ಗೆ ವಿವರ ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.