ರಾತ್ರೋರಾತ್ರಿ ರಸ್ತೆ ಬದಿ ಕಸ ವಿಲೇವಾರಿ


Team Udayavani, Apr 21, 2019, 5:08 PM IST

ram-1

● ತಿರುಮಲೆ ಶ್ರೀನಿವಾಸ್‌

ಮಾಗಡಿ: ಬೆಂಗಳೂರು- ಮಾಗಡಿ ಮುಖ್ಯರಸ್ತೆ ಕಸದ ಕೊಟ್ಟಿಯಾಗುವ ಮುನ್ನ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ತಡೆಯುವಂತೆ ನಾಗರಿಕರ ಆಗ್ರಹವಾಗಿದೆ. ಬೆಂಗಳೂರು- ಮಾಗಡಿ ಮಾರ್ಗದ ಮುಖ್ಯರಸ್ತೆ ಬದಿಯಲ್ಲಿ ದೂರದ ನಗರ ಪ್ರದೇಶದಿಂದ ರಾತ್ರೋರಾತ್ರಿ ಕದ್ದುಮುಚ್ಚಿ ಕಸ ವಿಲೇವಾರಿ ಮಾಡಿ, ಆ ಕಸದ ರಾಶಿಗೆ ಬೆಂಕಿ ಹಚ್ಚುವ ಛಾಳಿ ಮಾತ್ರ ಇನ್ನೂ ನಿಂತಿಲ್ಲ.

ಮಾಗಡಿ ತಾಲೂಕಿನ ಗೊರೂರು ಬಳಿ ಬಿಬಿಎಂಪಿ ಕಸವಿಲೇವಾರಿ ಘಟಕ ಸ್ಥಾಪನೆ ಸದ್ಯಕ್ಕೆ ನಿಂತಿದೆ. ಮಠಾಧೀಶರು ಮತ್ತು ರಾಜಕಾರಣಿಗಳು ಹಾಗೂ ಸುತ್ತಮುತ್ತಲ ಗ್ರಾಮಸ್ಥರ ಹೋರಾಟ ಫ‌ಲವಾಗಿ ಕಸ ವಿಲೇವಾರಿ ಘಟಕ ಸ್ಥಾಪನೆ ಸಂಚು ವಿಫ‌ಲವಾಗಿದೆ. ಆದರೂ ಬೆಂಗಳೂರು- ಮಾಗಡಿ ಮುಖ್ಯರಸ್ತೆ ಬದಿ ಕದ್ದುಮುಚ್ಚಿ ತಂದು ಸುರಿದು ಬೆಂಕಿ ಹಚ್ಚುವ ಕೆಲಸ ಮಾತ್ರ ನಿಂತಿಲ್ಲ. ಇದರಿಂದ ಸುತ್ತಮುತ್ತಲ ಜನತೆ ನೆಮ್ಮದಿಯೂ ಇಲ್ಲದಂತಾಗಿದೆ. ದುರ್ವಾಸನೆ ನಡುವೆ ವಾಹನ ಸವಾರರು ಮೂಗು ಮುಚ್ಚಿಕೊಂಡು ಸಂಚಾರ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಬಿಬಿಎಂಪಿಯಿಂದ ತ್ಯಾಜ್ಯ ವಿಲೇವಾರಿ: ಬಿಬಿಎಂಪಿಯ ತ್ಯಾಜ್ಯಗಳನ್ನು ಹಾಗೂ ಕೈಗಾರಿಕೆಗಳ ಅಪಾಯಕಾರಿ ತ್ಯಾಜ್ಯಗಳನ್ನು ಪ್ರಸಿದ್ಧ ತಿಮ್ಮಗೊಂಡನಹಳ್ಳಿ ಜಲಾಶಯದ ಬಳಿ, ತಾವರೆಕೆರೆ, ಹೊನ್ನಾಪುರ ಕೆರೆಯಂಗಳದ ಮಾರ್ಗದುದ್ದಕ್ಕೂ ರಾತ್ರೋರಾತ್ರಿ ತಂದು ಸುರಿಯುತ್ತಿರುವ ಪರಿಪಾಠ ನಡೆದಿದೆ. ತ್ಯಾಜಕ್ಕೆ ಬೆಂಕಿ ಹಚ್ಚುವುದರಿಂದ ಹೊಗೆ ಸೂಸಿ ಇಲ್ಲಿನ ಸುತ್ತಮುತ್ತಲ ಪರಿಸರದ ಮೇಲೆ ತೀವ್ರ ಹಾನಿಕರ ಉಂಟಾಗುತ್ತಿದೆ. ನಿತ್ಯ ವಾಹನ ಸವಾರರು ಪ್ರಯಾಣಿಕರು ಈ ಹೊಗೆಯ ನಡುವೆ ವಾಹನ ಚಲಿಸಲಾಗದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ರಸ್ತೆ ಬದಿ, ಆಸುಪಾಸು, ಖಾಸಗಿ ಜಮೀನು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಉನ್ನತ ಅಧಿಕಾರಿಗಳು, ರಾಜಕಾರಿಣಿಗಳಿಗೆ ಈ ಅವಾಂತರ ಕಣ್ಣಿಗೆ ಕಾಣದೆ ಇರುವುದು ವಿಪರ್ಯಾಸ.

ವಾಹನ ಸವಾರರು, ಪ್ರಯಾಣಿಕರಿಗೆ ಕಿರಿಕಿರಿ: ಕೋಳಿ, ಮಾಂಸದ ಅಂಗಡಿ ಮತ್ತು ಹೋಟೆಲ್ ಮಾಲೀಕರು ತ್ಯಾಜ್ಯವನ್ನು ಚೀಲದಲ್ಲಿ ತುಂಬಿಕೊಂಡು ರಾತ್ರೊರಾತ್ರಿ ತಂದು ರಸ್ತೆ ಬದಿ, ಸಾರ್ವಜನಿಕ ಸ್ಥಳಗಳಲ್ಲಿ ಸುರಿದು ಬೆಂಕಿ ಹಚ್ಚಿ ಹೋಗುತ್ತಿದ್ದಾರೆ. ಇಂತಹ ಕಡೆಯಂತೂ ವಾಹನ ಸವಾರರು ಮೂಗು ಮುಚ್ಚಿಕೊಂಡು ಸಂಚರಿಸು ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಆಹಾರ ಹುಡಕಿಕೊಂಡು ಬರುವ ನಾಯಿಗಳು ಕಸದ ಚೀಲವನ್ನು ರಸ್ತೆ ಎಳೆದು ತಂದು ಹರಡುತ್ತಿವೆ ಎನ್ನಲಾಗುತ್ತಿದೆ.

ಬೆಂಕಿ ಹಚ್ಚುವ ಮೂಲಕ ಸಾಕ್ಷಿ ನಾಶ: ಕಸದ ರಾಶಿಯಲ್ಲಿನ ಸಾಕ್ಷಿಗಳ ಆಧಾರದ ಮೇಲೆಯೇ ಈ ಕಸ ವಿಲೇವಾರಿ ಎಲ್ಲಿಂದ ಮಾಡುತ್ತಾರೆ ಎಂಬುದನ್ನು ಪತ್ತೆ ಹಚ್ಚಲು ಕಷ್ಟದ ಕೆಲಸವಲ್ಲ. ಈ ಕಾರಣದಿಂದಲೇ ಕದ್ದು ಮುಚ್ಚಿ ಕಸದ ರಾಶಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರೇ ಹೇಳುತ್ತಾರೆ. ಸ್ಥಳೀಯ ಪಂಚಾಯ್ತಿಗಳು ಅಥವಾ ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು ಎಚ್ಚೆತ್ತುಕೊಂಡರೆ ಕಸ ವಿಲೇವಾರಿಗೆ ಕಡಿವಾಣ ಕಷ್ಟವಾಗುವುದಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಕಸದಿಂದ ಜಲಾಶಯದ ನೀರು ಕಲುಷಿತ: ಈ ಮಾರ್ಗದ ರಸ್ತೆಯಲ್ಲಿಯೇ ಪ್ರಸಿದ್ಧ ತಿಪ್ಪಗೊಂಡನಹಳ್ಳಿ ಜಲಾಶಯವಿದೆ. ವಿಷಕಾರಿ ಕಸವನ್ನು ತಂದು ಸುರಿಯುತ್ತಿರುವುದರಿಂದ ಜಲಾಶಯದ ನೀರು ಕಲುಷಿತವಾಗುವ ಆತಂಕದ ಜೊತೆಗೆ ಜಲಾಶಯದ ಆಸುಪಾಸಿನ ಗ್ರಾಮಗಳಲ್ಲಿ ವಾಸಿಸುವ ಜನರು ತತ್ತರಿಸಿಹೋಗಿದ್ದಾರೆ. ಕಸದ ರಾಶಿಗೆ ಬೆಂಕಿ ಹಚ್ಚುವುದರಿಂದ ವಾಯು ಮಾಲಿನ್ಯ ಉಂಟಾಗುತ್ತಿದೆ. ಆದರೂ, ಜನಪ್ರತಿನಿಧಿಗಳಾಗಲಿ, ಸಂಬಂಧಪಟ್ಟ ಪರಿಸರ ಮಾಲಿನ್ಯ ಇಲಾಖೆಯ ಅಧಿಕಾರಿಗಳಾಗಲಿ, ಜಲಮಂಡಲಿ ಎಂಜಿನಿಯರ್‌ಗಳಾಗಲಿ ಈ ಬಗ್ಗೆ ಯಾರು ತಲೆ ಕೆಡಿಸಿಕೊಂಡಿಲ್ಲ. ಏಕೆಂದರೆ ಅವರು ಇಲ್ಲಿ ವಾಸಿಸುತ್ತಿಲ್ಲ. ಇಲ್ಲಿ ವಾಸಿಸುವವರು ಗ್ರಾಮೀಣ ಬಡ ಜನತೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರು- ಮಾಗಡಿ ಮುಖ್ಯರಸ್ತೆ ಕಸದ ತೊಟ್ಟಿಯಾಗುವುದರಲ್ಲಿ ಸಂಶಯವಿಲ್ಲ. ಇನ್ನು ಮುಂದಾದರೂ ಅಧಿಕಾರಿಗಳು ಜನಪ್ರತಿನಿಧಿಗಳು ಎಚ್ಚೆತ್ತು ಕಸ ವಿಲೇವಾರಿ ತಡೆಯಬೇಕಿದೆ ಎಂಬುದು ಸುತ್ತಮುತ್ತಲ ನಾಗರಿಕರ ಆಶಯವಾಗಿದೆ.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.