ಮೌಲ್ಯಯುತ ಸಮಾಜ ಕಟ್ಟುವ ಕೆಲಸವಾಗಲಿ

Team Udayavani, Apr 22, 2019, 3:00 AM IST

moulyayuta

ಮೈಸೂರು: ಮೌಲ್ಯಗಳ ಆಧಾರದ ಮೇಲೆ ಸಮಾಜ ಕಟ್ಟುವ ಕೆಲಸ ಆಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಹೇಳಿದರು.

ಮೈಸೂರು ಲಯನ್ಸ್‌ ಕ್ಲಬ್‌ ಇಂಟರ್‌ನ್ಯಾಷನಲ್‌ ಜಿಲ್ಲಾ 317ಎ ವತಿಯಿಂದ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಭಾನುವಾರ ಆಯೋಜಿಸಿದ್ದ 43ನೇ ವಾರ್ಷಿಕ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿದ್ದ ಮೌಲ್ಯಗಳು ಇಂದು ಕಣ್ಮರೆಯಾಗಿವೆ. ಆ ಕಾಲದಲ್ಲಿದ್ದ ಮೌಲ್ಯಗಳು ಇಂದಿನ ಸಮಾಜಕ್ಕೆ ಬೇಕಿದೆ. ಜೊತೆಗೆ ಮೌಲ್ಯಯುತ ಸಮಾಜ ಕಟ್ಟುವ ಕೆಲಸ ಆಗಬೇಕಿದೆ. ಇಂದು ನಮ್ಮ ಸಮಾಜ ಶ್ರೀಮಂತಿಕೆ ಮತ್ತು ಅಧಿಕಾರಕ್ಕೆ ಸಲಾಂ ಹೊಡೆಯುತ್ತಿದ್ದು, ತೃಪ್ತಿಯೇ ಇಲ್ಲದ ಸಮಾಜವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಾಮಾಣಿಕತೆ: ನಾನು ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಆದರೆ ಕರ್ನಾಟಕದಲ್ಲಿ ಕೆಲಸ ಮಾಡುವಾಗ ಬಾವಿಯಲ್ಲಿನ ಕಪ್ಪೆಯಾಗಿದ್ದೆ. ಸಮಾಜದಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ನನಗೆ ಮಾಹಿತಿಯೇ ಇರಲಿಲ್ಲ.

ನಂತರ ಲೋಕಾಯುಕ್ತಕ್ಕೆ ಬಂದ ಮೇಲೆ ಸಮಾಜ ಎಷ್ಟರಮಟ್ಟಿಗೆ ಹಾಳಾಗಿದೆ ಎಂಬುದು ತಿಳಿಯಿತು. ಇಲ್ಲಿ ಪ್ರಾಮಾಣಿಕರಿಗೆ ಯಾವುದೇ ಬೆಲೆ ಇಲ್ಲ. ಹಣ, ಅಧಿಕಾರ ಇರುವವರಿಗೆ ಮಾತ್ರ ಬೆಲೆ. ಆದರೂ ಸಮಾಜದ ಎಷ್ಟೋ ತೊಡಕುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು.

ಹಗರಣಗಳ ಸರಮಾಲೆ: 50ರ ದಶಕದಿಂದ ಇಲ್ಲಿಯವರೆಗೆ ದೇಶದಲ್ಲಿ ಅನೇಕ ಹಗರಣಗಳು ಬಯಲಿಗೆ ಬಂದಿವೆ. ಮೊದಲ ಬಾರಿಗೆ ಜೀಪ್‌ ಖರೀದಿ ಹಗರಣದಿಂದ ಪ್ರಾರಂಭವಾಗಿ ಕಲ್ಲಿದ್ದಲು ಹಗರಣದವರೆಗೆ ಬೃಹತ್‌ ಮಟ್ಟದಲ್ಲಿ ಆವರಿಸಿದೆ.

ಬೋಪೋರ್ಸ್‌, ಕಾಮನ್‌ವೆಲ್ತ್‌, 2ಜೀ ಹಗರಣ ಸೇರಿದಂತೆ ಹಗರಣಗಳ ಸರಮಾಲೆಯೇ ನಡೆದಿರುವುದು ನಮ್ಮ ಕಣ್ಣ ಮುಂದಿದೆ. ಈ ರೀತಿಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಸೋರಿಕೆಯಾಗುತ್ತಿದ್ದರೆ ದೇಶದ ಅಭಿವೃದ್ಧಿ ಎಲ್ಲಿಂದ ಸಾಧ್ಯ ಎಂದು ಪ್ರಶ್ನಿಸಿದ ಅವರು, ಈ ರೀತಿ ಹಣ ಪೋಲಾಗುವುದನ್ನು ನಾನು ಧಿಕ್ಕರಿಸುತ್ತೇನೆ ಎಂದರು.

ಚರ್ಚೆ ಇಲ್ಲ: ಸ್ವಾತಂತ್ರ್ಯ ಬಂದ ದಿನಗಳಲ್ಲಿ 1947ರಿಂದ 49ರವರೆಗೆ ಇದ್ದ ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗ ವ್ಯವಸ್ಥೆ ಇಂದು ಇಲ್ಲ. ಅಂದು ಶಾಸನಸಭೆಗಳಲ್ಲಿ ನಡೆಯುತ್ತಿದ್ದ ಚರ್ಚೆಗಳು ಇಂದು ನಡೆಯುತ್ತಿಲ್ಲ. ಕೇವಲ ಸಭಾತ್ಯಾಗ ಮಾಡುವುದೇ ಶಾಸಕಾಂಗವಾಗಿಬಿಟ್ಟಿದೆ. ಇದು ಸಂವಿಧಾನದ ಮಹತ್ವವನ್ನು ಹಾಳುಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನ್ಯಾಯಾಂಗದಲ್ಲೂ ಭ್ರಷ್ಟಾಚಾರ: ಇಂದು ಸಂವಿಧಾನದ ಎಲ್ಲಾ ಅಂಗಗಳು ಭ್ರಷ್ಟಾrಚಾರದ ಮಸಿ ಬಳಿದುಕೊಂಡಿವೆ. ಕಾರ್ಯಾಂಗ ಹಾಗೂ ಶಾಸಕಾಂಗ ತಮ್ಮ ಪಾವಿತ್ರ್ಯತೆ ಕಳೆದುಕೊಂಡಿವೆ. ಇಂದು ನ್ಯಾಯಾಂಗದಲ್ಲೂ ಭ್ರಷ್ಟಾಚಾರ ಇರುವುದನ್ನು ನಾ ಹೇಳಬೇಕಿಲ್ಲ.

ಅದು ಎಲ್ಲರಿಗೂ ತಿಳಿದ ವಿಚಾರ. ಕಾರ್ಯಾಂಗದ ಮಧ್ಯಸ್ಥಿಕೆ ಇಲ್ಲದೇ ದೇಶದಲ್ಲಿ ಯಾವುದೇ ಹಗರಣ ಮತ್ತು ಭ್ರಷ್ಟಾಚಾರ ನಡೆಯಲು ಸಾಧ್ಯವಿಲ್ಲ. ಈ ಎಲ್ಲದಕ್ಕೂ ಮೂಲ ಕಾರಣ ಕಾರ್ಯಾಂಗದ ಅಧಿಕಾರಿಗಳು ಮತ್ತು ಶಾಸಕಾಂಗ. ಈ ರೀತಿ ಹಣ ಪೋಲಾದರೆ ಸಮಾಜ ಮತ್ತು ದೇಶದ ಪ್ರಗತಿ ಬಯಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸರ್ಕಾರಿ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ, ಎಲ್ಲಾ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಕಡು ಬಡವರಿಗಾಗಿಯೇ ಸರ್ಕಾರಿ ಆಸ್ಪತ್ರೆಗಳನ್ನು ತೆರೆಯಲಾಗಿದೆ. ಆದರೆ, ಆ ವೈದ್ಯರುಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ಆಸ್ಪತ್ರೆಗೆ ನೇರವಾಗಿ ಬರುವ ರೋಗಿ, ಘೋರವಾಗಿ ಹೊರಗೆ ಹೋಗುವಂತಹ ಪರಿಸ್ಥಿತಿ ಇದೆ ಎಂದು ಹೇಳಿದರು.

ವೃತ್ತಿ ಧರ್ಮ ಮರೆತ ಮಾಧ್ಯಮ: ಮಾಧ್ಯಮವನ್ನು ಸಂವಿಧಾನದ ನಾಲ್ಕನೇ ಅಂಗವನ್ನಾಗಿ ಸಾರ್ವಜನಿಕರು ಮಾಡಿದ್ದಾರೆ. ಆದರೆ ಮಾಧ್ಯಮದವರು ಮಾಡುತ್ತಿರುವುದಾರು ಏನು? ಪೇಯ್ಡ ನ್ಯೂಸ್‌ ಭರದಲ್ಲಿ ಮಾಧ್ಯಮ ತನ್ನ ವೃತ್ತಿ ಧರ್ಮ ಮರೆತಿದೆ. ಜೊತೆಗೆ ತನ್ನ ಪಾವಿತ್ರ್ಯತೆಯನ್ನು ಕಳೆದುಕೊಳ್ಳುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್‌ ಸಂಸ್ಥೆಯ ಅಂತಾರಾಷ್ಟ್ರೀಯ ನಿರ್ದೇಶಕ ವಿ.ವಿ. ಕೃಷ್ಣ ರೆಡ್ಡಿ, ಕೆ.ವಂಶಿಧರ್‌ ಬಾಬು, ಜಿಲ್ಲಾ ಗವರ್ನರ್‌ ವಿ. ರೇಣುಕುಮಾರ್‌, ಸಂಸ್ಥೆಯ ಕಾರ್ಯದರ್ಶಿ ಎಚ್‌.ಅಶ್ವಥ್‌ ನಾರಾಯಣ, ಖಜಾಂಚಿ ಎಲ್‌.ವಿ.ಶ್ರೀನಿವಾಸ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.