ಮತದಾನಕ್ಕೆ ಸಿದ್ಧತೆ ಮಾಡಿಕೊಳ್ಳಲು ಡಿಸಿ ಸೂಚನೆ
ಸೆಕ್ಟರ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ವಿಡಿಯೋ ಕಾನ್ಫರೆನ್ಸ್
Team Udayavani, Apr 22, 2019, 2:32 PM IST
ಬೀದರ: ವಿವಿಧ ವಿಧಾನಸಭಾ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಮಾತನಾಡಿದರು.
ಬೀದರ: ಬೀದರ ಲೋಕಸಭಾ ಕ್ಷೇತ್ರಕ್ಕೆ ಏ.23ರಂದು ಮತದಾನ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್. ಮಹಾದೇವ ಎಲ್ಲ ಸಹಾಯಕ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ವಿಧಾನಸಭಾ ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಅವರು, ಮತದಾನ ದಿನದಂದು ಕಾಲಕಾಲಕ್ಕೆ ಮತದಾನದ ಅಂಕಿ ಅಂಶಗಳನ್ನು ಕಳುಹಿಸಲು ಸಹಾಯಕ ಚುನಾವಣಾಧಿಕಾರಿಗಳು ಒತ್ತು ಕೊಡಬೇಕು. ಈ ನಿಟ್ಟಿನಲ್ಲಿ ಸೆಕ್ಟರ್ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿ ಅಂಕಿ ಅಂಶಗಳ ಮಾಹಿತಿ ಪಡೆಯಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆಗೆ ನಿಯೋಜನೆಗೊಂಡ ಪ್ರತಿಯೊಬ್ಬ ಸೆಕ್ಟರ್ ಅಧಿಕಾರಿಗಳು ಆಯೋಗದ ನಿರ್ದೇಶನದಂತೆ ಕೆಲಸ ನಿರ್ವಹಿಸಬೇಕು. ಮತದಾನ ದಿನ ಮತದಾನಕ್ಕೂ ಮುಂಚಿತವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಅಣಕು ಮತದಾನಕ್ಕೆ ಸಿದ್ಧತೆ ಮಾಡಿಕೊಂಡಿರುವಂತೆ ತಾವುಗಳು ಪರಿಶೀಲಿಸಬೇಕು. ಆಯಾ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಅಧಿಕಾರಿಗಳಿಗೆ ಈ ಬಗ್ಗೆ ಮಾರ್ಗದರ್ಶನ ನೀಡಬೇಕು ಎಂದು ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು.
ಸಹಾಯ ಪಡೆಯಿರಿ: ವಿದ್ಯುನ್ಮಾನ ಯಂತ್ರಗಳನ್ನು ಸರಿಯಾಗಿ ಜೋಡಿಸಲು ಒತ್ತು ಕೊಡಬೇಕು. ಅಣಕು ಮತದಾನ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ನಂತರದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಬೇಕು. ಈ ಬಗ್ಗೆ ಮತಗಟ್ಟೆ ಅಧಿಕಾರಿಗಳಿಗೆ ಸರಿಯಾಗಿ ತಿಳಿ ಹೇಳಬೇಕು. ಏನಾದರೂ ಸಮಸ್ಯೆ ಎದುರಾದರೆ ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು ಮತ್ತು ತಾಂತ್ರಿಕ ಸಹಾಯಕರ ಸಹಾಯ ಪಡೆಯಬೇಕು ಎಂದು ತಿಳಿಸಿದರು.
ನಿಷೇಧಾಜ್ಞೆ ಜಾರಿ: ಮತಗಟ್ಟೆ ವ್ಯಾಪ್ತಿಯ ಸುತ್ತಲು 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತದಾರರನ್ನು ಹೊರತುಪಡಿಸಿ ಇತರೆ ಯಾರಿಗೂ ಈ ವ್ಯಾಪ್ತಿಯಲ್ಲಿ ಇರಲು ಅವಕಾಶ ಕೊಡಬಾರದು. 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಈ ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳು ಸಹ ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಚುನಾವಣಾಧಿಕಾರಿಗಳಾದ ಶಂಕರ ವಣಕ್ಯಾಳ ಹಾಗೂ ಇತರರು ಇದ್ದರು.
ಮತದಾನ ಎಲ್ಲರಹಕ್ಕು: ಹೂಗಾರ
ಕಮಲನಗರ: ಪ್ರಜಾಪ್ರಭುತ್ವದಲ್ಲಿ ಮತದಾರರ ಪಾತ್ರ ಮಹತ್ತರವಾಗಿದ್ದು, ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ವ್ಯವಸ್ಥೆ ಪರಿವರ್ತನೆಗಾಗಿ ಈ ಚುನಾವಣೆಯಲ್ಲಿ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ, ನಿರ್ಭಯವಾಗಿ ಮತ ಚಲಾಯಿಸಬೇಕು. ಎಂದು ಎಬಿವಿಪಿ ತಾಲೂಕು ಸಂಚಾಲಕ ಉಮೇಶ ಹೂಗಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.