ಭರವಸೆ ಹುಸಿಗೊಳಿಸಿದ ಪ್ರಧಾನಿ ಮೋದಿ
Team Udayavani, Apr 22, 2019, 3:38 PM IST
ಕೊಪ್ಪಳ: ನಗರದ ವಿವಿಧ ವಾರ್ಡ್‌ಗಳಲ್ಲಿ ಲೋಕಸಭಾ ಮೈತ್ರಿ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಜೆಡಿಎಸ್ ಜಿಲ್ಲಾ ವೀಕ್ಷಕ ಸಿ.ಎಂ. ನಾಗರಾಜ ಸೇರಿದಂತೆ ಕಾಂಗ್ರೆಸ್ ಮುಖಂಡರಿಂದ ಜಂಟಿ ಪ್ರಚಾರ ನಡೆಸಿದರು.
ಈ ವೇಳೆ ಸಿ.ಎಂ. ನಾಗರಾಜ ಮಾತನಾಡಿ, ಕೇಂದ್ರ ಸರ್ಕಾರವು ಹಿಂದೆ 2014ರಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಯಾವೊಂದು ಕೆಲಸವನ್ನು ಮಾಡಿಲ್ಲ. ಮೋದಿ ಅವರು ಹೇಳಿದ 15 ಲಕ್ಷ ರೂ. ಯಾರ ಖಾತೆಗೂ ಜಮೆಯಾಗಿಲ್ಲ. ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಮೋದಿ ಭರವಸೆ ಹುಸಿಗೊಳಿಸಿದ್ದಾರೆ.
ರೈತರಿಗೆ, ಕೃಷಿ ಕಾರ್ಮಿಕರಿಗೆ ಹಿಂದುಳಿದ ವರ್ಗಕ್ಕೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವರ್ಗಕ್ಕೆ ಯಾವುದೇ ಕೊಡುಗೆ ನೀಡದೆ ಕಾಲ ಹರಣ ಮಾಡಿದ್ದಾರೆ. ಬಿಜೆಪಿಯನ್ನು ಕಟ್ಟಿ ಬೆಳೆಸಿದ ಎಲ್.ಕೆ. ಅಡ್ವಾನಿ ಅವರನ್ನು ಮರೆತು ಮೂಲೆಗುಂಪು ಮಾಡಿದ್ದಾರೆ. ಬಿಜೆಪಿಗೆ ಮತ ಹಾಕದೇ ಮೈತ್ರಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ, ಕಾರ್ಯಧ್ಯಕ್ಷ ವೀರೇಶ ಮಹಾಂತಯ್ಯನಮಠ, ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಸೈಯದ್, ವಕ್ತಾರ ಮೌನೇಶ ಎಸ್. ವಡ್ಡಟ್ಟಿ, ನಗರಸಭೆ ಸದಸ್ಯರಾದ ಅಮ್ಜದ ಪಟೇಲ್, ಚನ್ನಪ್ಪ ಕೊಟ್ಯಾಳ, ಮುಖಂಡರಾದ ಮಾನ್ವಿ ಪಾಷಾ, ಕಾಟನ ಪಾಷಾ, ಅಯೂಬ್ ಅಡ್ಡೇವಾಲೆ, ವೆಂಕಟೇಶ ಬೆಲ್ಲಪ್ಪ, ಶಫಿ ಗಾರ್ಮೆಂಟ್ಸ್, ಸಲೀಂ ಅಳವಂಡಿ, ಸಿ.ಎಂ. ಹಿರೇಮಠ, ಮಂಜುನಾಥ ಸೊರಟೂರು ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.