ಸಂತು ಲವ್ಸ್ ಸಂಧ್ಯಾ
ನೈಜ ಘಟನೆಯಿಂದ ಪ್ರೇರಿತ ಚಿತ್ರ
Team Udayavani, Apr 23, 2019, 3:21 AM IST
ಕನ್ನಡದಲ್ಲಿ ಈಗಾಗಲೇ “ನಂದ ಲವ್ಸ್ ನಂದಿತಾ’, “ರಾಜ ಲವ್ಸ್ ರಾಧೆ’, “ಶಶಿಕಲಾ ಲವ್ವರ್ ಆಫ್ ಪುಟ್ಟರಾಜು’ ಸೇರಿದಂತೆ ಹಲವು ಚಿತ್ರಗಳು ಬಂದು ಹೋಗಿವೆ. ಈಗ “ಸಂತು ಲವ್ಸ್ ಸಂಧ್ಯಾ’ ಎಂಬ ಹೊಸಬರ ಚಿತ್ರವೂ ಸೇರ್ಪಡೆಯಾಗಿದೆ. ಆರ್.ಕೆ.ಗಾಂಧಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರದ ಮೂಲಕ ಜೈ ಸುಬ್ರಮಣಿ ನಾಯಕರಾಗುತ್ತಿದ್ದಾರೆ. ಈ ಹಿಂದೆ ಜೈ ಸುಬ್ರಮಣಿ ಹಲವು ಚಿತ್ರಗಳಲ್ಲಿ ಸಾಹಸ ಕಲಾವಿದರಾಗಿ ಕೆಲಸ ಮಾಡಿದ್ದಾರೆ. “ಸಂತು ಲವ್ಸ್ ಸಂಧ್ಯಾ’ ನೈಜ ಘಟನೆ ಆಧರಿಸಿ ತಯಾರಾಗುತ್ತಿರುವ ಚಿತ್ರ. ಕಳೆದ ನಾಲ್ಕು ವರ್ಷಗಳ ಹಿಂದೆ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದಲ್ಲಿ ನಡೆದ ಒಂದು ಘಟನೆ ಚಿತ್ರದ ಹೈಲೈಟ್.
ಇತ್ತೀಚೆಗೆ ಯಲ್ದೂರು ಗ್ರಾಮದ ಗಂಗಾ ಭವಾನಿ ದೇವಸ್ಥಾನದಲ್ಲಿ ಚಿತ್ರಕ್ಕೆ ಪೂಜೆ ನೆರವೇರಿದೆ. ನಿವೃತ್ತ ಅರಣ್ಯಾಧಿಕಾರಿ ಕೆಂಪಣ್ಣ ಮೊದಲ ದೃಶ್ಯಕ್ಕೆ ಕ್ಯಾಮೆರಾ ಚಾಲನೆ ಮಾಡಿದರೆ, ನಿರ್ಮಾಪಕ ಶಿವಕುಮಾರ್ ಕ್ಲಾಪ್ ಮಾಡಿದ್ದಾರೆ. ಶೀರ್ಷಿಕೆಯೇ ಹೇಳುವಂತೆ, ಇದೊಂದು ಪಕ್ಕಾ ಲವ್‌ಸ್ಟೋರಿ ಚಿತ್ರ.
ಪ್ರೇಮಿಗಳ ನಡುವೆ ಜಾತಿ ಎಂಬ ವಿಲನ್ ಎದುರಾದಾಗ, ಆ ಪ್ರೇಮಿಗಳ ಬದುಕಲ್ಲಿ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತವೆ, ಆ ಸಮಸ್ಯೆಗಳನ್ನು ಆ ಪ್ರೇಮಿಗಳು ಹೇಗೆ ಎದುರಿಸುತ್ತಾರೆ ಎಂಬುದು ಕಥೆ. ನೈಜ ಘಟನೆಗೆ ಸಾಕ್ಷಿಯಾಗಿರುವ ಯುವಕ ವೆಂಕಟ್ ಈಗಲೂ ಯಲ್ದೂರು ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನಾಗಿ ಅಲೆದಾಡುತ್ತಿದ್ದು, ಆ ಸನ್ನಿವೇಶ ಕೂಡ ಚಿತ್ರದಲ್ಲಿರಲಿದೆ ಎಂಬುದು ನಿರ್ದೇಶಕರ ಮಾತು.
ಚಿತ್ರವನ್ನು ಶಿವಕುಮಾರ್ ಜೊತೆಗೆ ದೇವರಾಜ್, ಶಬರೀಶ್ ನಿರ್ಮಾಣ ಮಾಡುತ್ತಿದ್ದಾರೆ. ಪೌಲ್ ರಾಜು ಛಾಯಾಗ್ರಹಣವಿದೆ. ಗಂಟಾಡಿ ಕೃಷ್ಣ ಸಂಗೀತ ನೀಡುತ್ತಿದ್ದು, ಸುರೇಶ್ ಕಂಬಳಿ ಸಾಹಿತ್ಯ, ಶಂಕರ್ ಸಾಹಸವಿದೆ. ಸಾನ್ವಿ ನೃತ್ಯ ನಿರ್ದೇಶನ ಮಾಡಿದರೆ, ವಿನಯ್ ಜಿ. ಆಲೂರು ಸಂಕಲನವಿದೆ. ಚಿತ್ರದಲ್ಲಿ ಸುಶ್ಮಾ ಗೌಡ, ಕಿಲ್ಲರ್ ವೆಂಕಟೇಶ್, ಬ್ಯಾಂಕ್ ಜನಾರ್ಧನ್, ಹೊನ್ನವಳ್ಳಿ ಕೃಷ್ಣ, ಕಾವ್ಯ ಪ್ರಕಾಶ್, ದಿಂಬಾಲ ಅಶೋಕ್, ಕೋಲಾರ ಬಾಬು ಇತರರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.