ವಿಶ್ವಭೂಮಿ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ

ಮೆರವಣಿಗೆ,ಗಿಡ ನೆಡುವ ಕಾರ್ಯಕ್ರಮ; ಅಧಿಕಾರಿಗಳು,ಸಮಾಜ ಸೇವಕರು ಭಾಗಿ

Team Udayavani, Apr 23, 2019, 2:35 PM IST

hasan-2

ಹಾಸನ: ಜಾಗತಿಕ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಭೂಮಿ ದಿನಾಚರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಹಸಿರು ಭೂಮಿ ಪ್ರತಿಷ್ಠಾನ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿ ಕೊಂಡಿದ್ದ ಕಾರ್ಯಕ್ರಮಕ್ಕೆ ವಿವಿಧ ಜನವರ್ಗಗಳು ಸ್ಪಂದಿಸಿದ್ದರಿಂದ ಕಾರ್ಯಕ್ರಮವು ವಿಶಿಷ್ಟವಾಗಿ ಮೂಡಿಬಂದಿತು.

ಕಾಲ್ನಡಿಗೆ ಜಾಥಾ: ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪರಿಸರ ಕಾಳಜಿ ಸಾರುವ ಹಾಗೂ ವಾಯುಮಾಲಿನ್ಯ ನಿಯಂತ್ರಣದ ಅನಿವಾರ್ಯತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.

ಗಣ್ಯರ ಉಪಸ್ಥಿತಿ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್‌.ತಿಮ್ಮಣ್ಣಾಚಾರ್‌, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಕೆ.ಬಸವರಾಜು, ವಿವಿಧ ನ್ಯಾಯಾಲಯದ ನ್ಯಾಯಾ ಧೀಶರು, ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜು, ಹಸಿರು ಭೂಮಿ ಪ್ರತಿಷ್ಠಾನದ ಪ್ರಮುಖ ಆರ್‌.ಪಿ.ವೆಂಕಟೇಶ್‌ ಮೂರ್ತಿ, ರಾಜೀವೇಗೌಡ, ಡಾ.ಸಾವಿತ್ರಿ, ಡಾ.ಭಾರತಿ ರಾಜಶೇಖರ್‌, ಎಸ್‌.ಎಸ್‌.ಪಾಷಾ, ಅಹಮದ್‌ ಹಗರೆ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್‌.ಉದಯ್‌ಕುಮಾರ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ‌ ಶ್ರೀನಿವಾಸ್‌, ವಕೀಲರ ಸಂಘದ ಅಧ್ಯಕ್ಷ‌ ಜೆ.ಪಿ.ಶೇಖರ್‌ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.

ನಂತರ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ವಿಶೇಷ ಸೈಕಲ್ ಜಾಥಾವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎನ್‌. ವಿಜಯ್‌ಪ್ರಕಾಶ್‌ ಅವರು ಚಾಲನೆ ನೀಡಿದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ‌ ಕೆ.ಎಸ್‌. ತಿಮ್ಮಣ್ಣಚಾರ್‌ ಪ್ರತಿಜ್ಞಾಧಿ ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ. ಕೇವಲ ವಿಶ್ವ ಭೂಮಿ ದಿನದಂದು ಖಾಸಗಿ ವಾಹನಗಳಿಗೆ ರಜೆ ನೀಡಿ ಎಂಬ ಆಚರಣೆಯನ್ನು ಸೀಮಿತಗೊಳಿಸದೇ ಇದೊಂದು ನಿರಂತರವಾಗಿ ಚಳವಳಿಯ ರೂಪದಲ್ಲಿ ನಡೆಯಬೇಕು. ಎಲ್ಲಾ ರೀತಿಯ ಪರಿಸರ ಮಾಲಿನ್ಯ ತಡೆಗೆ ಸರ್ಕಾರಿ ಇಲಾಖೆ, ಸಂಘ ಸಂಸ್ಥೆಗಳು ಕೈ ಜೋಡಿಸಿ ಶ್ರಮಿಸಬೇಕು ಎಂದು ಹೇಳಿದರು.

ಜಿ.ಪಂ ಸಿಇಒ ಕೆ.ಎನ್‌.ವಿಜಯ್‌ ಪ್ರಕಾಶ್‌ ಮಾತನಾಡಿ, ಜಲಾಮೃತ ಸೇರಿದಂತೆ ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಮೂಲಕ ಹಲವು ರೀತಿಯ ಜಲ ಮರುಪೂರಣ ಜಲ ಸಂರಕ್ಷಣೆ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದರು. ವಿವಿಧ ನ್ಯಾಯಾಧೀಶರು, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

ಗಮನ ಸೆಳೆದ ಮೆರವಣಿಗೆ: ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ಸೈಕಲ್ಗಳು ಹಾಗೂ ಕುದುರೆಗಳು ವಿಶೇಷ ಆಕರ್ಷಣೆಯಾಗಿದ್ದವು. ಜೊತೆಗೆ ನೂರಾರು ಮಂದಿ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಪರಿಸರ ಕಾಳಜಿಯನ್ನು ಪ್ರದರ್ಶಿಸಿದ್ದು ವಿಶೇಷವಾಗಿತ್ತು.

ಕಾಲ್ನಡಿಗೆಯಲ್ಲಿ ಕಚೇರಿಗೆ ಬಂದ ಡೀಸಿ, ಸಿಇಒ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಕೆ.ಎನ್‌. ವಿಜಯ್‌ ಪ್ರಕಾಶ್‌, ಉಪವಿಭಾಗಾಧಿ ಕಾರಿ ಎಚ್.ಎಲ್ ನಾಗರಾಜ್‌, ಜಿಲ್ಲಾ ಪಂಚಾ ಯಿತಿಯ ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸಗೌಡ, ಮತ್ತಿತರರು ಇಂದು ಕಾಲ್ನಡಿಗೆಯಲ್ಲಿ ತಮ್ಮ ಕಚೇರಿಗೆ ಆಗಮಿಸಿ ಗಮನ ಸೆಳೆದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸವಿತಾ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಮಂಜುನಾಥ್‌, ಜಿಲ್ಲಾ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಆನಂದ್‌ ಕುಮಾರ್‌, ಪಿಎಂಜಿಎಸ್‌ವೈ ವಿಭಾಗದ ಕಾರ್ಯ ಪಾಲಕ ಅಭಿಯಂತರ ವಾತ್ಸಲ್ಯ, ಉದ್ಯೋಗ ವಿನಿಮಯಾಧಿಕಾರಿ ಜಯಲಕ್ಷ್ಮೀ, ಜಿಲ್ಲಾ ವಾರ್ತಾ ಧಿಕಾರಿ ವಿನೋದ್‌ಚಂದ್ರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.