ಕೆಆರ್‌ಎಸ್‌ ನೀರಿನ ಮಟ್ಟ 91.88 ಅಡಿಗೆ ಕುಸಿತ

ಕಳೆದ ವರ್ಷ ಜಲಾಶಯದಲ್ಲಿ 73.63 ಅಡಿ ನೀರು ಸಂಗ್ರಹ • ಈ ಬಾರಿ ಕುಡಿಯುವ ನೀರಿಗೆ ತೊಂದರೆ ಇಲ್ಲ

Team Udayavani, Apr 23, 2019, 4:20 PM IST

mandya-3

● ಮಂಡ್ಯ ಮಂಜುನಾಥ್‌

ಮಂಡ್ಯ: ಜಿಲ್ಲೆಯ ಆರ್ಥಿಕ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ 91.88 ಅಡಿಗೆ ಕುಸಿತ ಕಂಡಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದ ಬೇಸಿಗೆಯಲ್ಲಿ 18.25 ಅಡಿ ನೀರು ಹೆಚ್ಚು ಸಂಗ್ರಹ ವಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಪ್ರಸಕ್ತ ವರ್ಷ ಬೇಸಿಗೆಯಲ್ಲಿ ಕೆಆರ್‌ಎಸ್‌ ಅಣೆಕಟ್ಟೆಯಲ್ಲಿ 91.88 ಅಡಿ ನೀರು ಸಂಗ್ರಹವಾಗಿದ್ದು, ಅಣೆಕಟ್ಟೆಗೆ 152 ಕ್ಯುಸೆಕ್‌ ಒಳಹರಿವಿದ್ದರೆ, 1389 ಕ್ಯುಸೆಕ್‌ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿದೆ. ಹಾಲಿ ಜಲಾಶಯದಲ್ಲಿ 17.089 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 2018ರ ಏಪ್ರಿಲ್ ತಿಂಗಳಿನ ಇದೇ ದಿನ ಜಲಾಶಯದಲ್ಲಿ 73.63 ಅಡಿ ನೀರಿತ್ತು. ಅಂದು ಅಣೆಕಟ್ಟೆಗೆ 168 ಕ್ಯುಸೆಕ್‌ ನೀರು ಹರಿದುಬರುತ್ತಿದ್ದರೆ, 292 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿತ್ತು. ಅಣೆಕಟ್ಟೆಯಲ್ಲಿ ಆ ವೇಳೆ 8.24 ಟಿಎಂಸಿ ನೀರು ಸಂಗ್ರಹವಾಗಿತ್ತು.

ಕುಡಿವ ನೀರಿಗೆ ತೊಂದರೆಯಿಲ್ಲ: ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಗಮನಿಸಿದರೆ ಈ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಿಗೆ ಸಾಕಾಗುವಷ್ಟು ನೀರು ಕೆಆರ್‌ಎಸ್‌ ಜಲಾಶಯದಲ್ಲಿ ಸಂಗ್ರಹವಾಗಿದೆ.

ಹಾಲಿ ಕೆಆರ್‌ಎಸ್‌ ಅಚ್ಚುಕಟ್ಟು ಪ್ರದೇಶದಲ್ಲಿರುವ ಬೇಸಿಗೆ ಬೆಳೆಗಳಿಗೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಅಣೆಕಟ್ಟೆಯಿಂದ 1389 ಕ್ಯುಸೆಕ್‌ ನೀರನ್ನು ಈಗಾಗಲೇ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 21ರಿಂದ ಮೇ ತಿಂಗಳ 8ರವರೆಗೆ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳು ನಿರ್ಧಾರ ಮಾಡಿ ಈಗಾಗಲೇ ನಾಲೆಗಳಿಗೆ ನೀರನ್ನು ಹರಿಯಬಿಟ್ಟಿದ್ದಾರೆ.

ಬೇಸಿಗೆ ಬೆಳೆಗಳು: ಬೇಸಿಗೆ ಹಂಗಾಮಿನಲ್ಲಿ ಫೆಬ್ರವರಿ 18ರ ವೇಳೆಗೆ ಜಿಲ್ಲೆಯ 1310 ಹೆಕ್ಟೇರ್‌ನಲ್ಲಿ ಭತ್ತ, 333 ಹೆಕ್ಟೇರ್‌ನಲ್ಲಿ ರಾಗಿ, 128 ಹೆಕ್ಟೇರ್‌ನಲ್ಲಿ ಮುಸುಕಿನ ಜೋಳ, 67 ಹೆಕ್ಟೇರ್‌ನಲ್ಲಿ ಉದ್ದು, 67 ಹೆಕ್ಟೇರ್‌ನಲ್ಲಿ ನೆಲಗಡಲೆ, 150 ಹೆಕ್ಟೇರ್‌ನಲ್ಲಿ ಕಬ್ಬು (ತನಿ), 661 ಹೆಕ್ಟರ್‌ನಲ್ಲಿ ಕಬ್ಬು (ಕೂಳೆ) ಸೇರಿ 2717 ಹೆಕ್ಟೇರ್‌ನಲ್ಲಿ ಬೇಸಿಗೆ ಬೆಳೆ ಇದ್ದು ಈ ಬೆಳೆಗಳ ರಕ್ಷಣೆಗೆ ಜಲಾಶಯದಿಂದ ನೀರು ಹರಿಸಲಾಗುತ್ತಿದೆ.

ಕಳೆದ ವರ್ಷ ಮುಂಗಾರು ಪೂರ್ವ ಮಳೆ ಹಾಗೂ ಮುಂಗಾರು ಮಳೆ ಉತ್ತಮವಾಗಿ ಬಿದ್ದಿದ್ದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಮುಂಗಾರು ಆರಂಭದ ಜೂ.17ರ ವೇಳೆಗೆ ಜಲಾಶಯ 100 ಅಡಿ ನೀರು ದಾಖಲಾಗಿತ್ತು. ಆನಂತರೂ ಕೇರಳದ ವಯನಾಡು ಹಾಗೂ ಕೊಡಗಿನಲ್ಲಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಜುಲೈ ಮಧ್ಯಭಾಗದ ವೇಳೆಗೆ ಜಲಾಶಯ ಭರ್ತಿಯಾಗಿತ್ತು. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿತ್ತು. ತಮಿಳುನಾಡಿಗೆ ಸುಮಾರು 250 ಟಿಎಂಸಿಗೂ ಅಧಿಕ ನೀರು ಹರಿದು ಕಾವೇರಿ ವಿವಾದ ಭುಗಿಲೇಳುವುದಂತೆ ಮಾಡಿತ್ತು.

ಅಗತ್ಯವಿರುವಷ್ಟು ನೀರು ಸಂಗ್ರಹ: ಬೇಸಿಗೆ ಮುಗಿಯುವುದಕ್ಕೆ ಇನ್ನೂ ಒಂದೂವರೆ ತಿಂಗಳಿದೆ. ಅಲ್ಲಿಯವರೆಗೆ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ಅಗತ್ಯವಿರುವಷ್ಟು ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಬೆಳೆಗಳಿಗೂ ನೀರು ಹರಿಸಲು ಸಾಧ್ಯವಾಗುವಷ್ಟು ನೀರಿರುವುದರಿಂದ ಬೇಸಿಗೆ ಮುಗಿಯುವವರೆಗೂ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಸಾಧ್ಯತೆಗಳಿಲ್ಲ.

ಮಳೆಯಾಶ್ರಿತ ಪ್ರದೇಶದಲ್ಲಿ ಕೆರೆಗಳಲ್ಲಿ ನೀರು ಖಾಲಿಯಾಗಿರುವುದರಿಂದ ಅಲ್ಲಿ ಕುಡಿಯುವ ನೀರಿಗೆ ಈಗಾಗಲೇ ಹಾಹಾಕಾರವೆದ್ದಿದೆ. ನಾಗಮಂಗಲ ತಾಲೂಕೊಂದರಲ್ಲೇ 59 ಗ್ರಾಮಗಳಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಸಲಾಗುತ್ತಿದೆ.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.