ಅವ್ಯವಸ್ಥೆ ಆಗರವಾದ ಮೀನು ಮಾರುಕಟ್ಟೆ
Team Udayavani, Apr 23, 2019, 4:53 PM IST
ಕನಿಷ್ಠ ಮೂಲ ಸೌಕರ್ಯವನ್ನೂ ಒದಗಿಸುವಲ್ಲಿ ಪಟ್ಟಣ ಪಂಚಾಯತ್ ವಿಫಲವಾಗಿದೆ. ಎನ್.ಆರ್.ಪುರ ತಾಲೂಕಿನ ವ್ಯಾಪ್ತಿಯಲ್ಲಿ ಭದ್ರಾ ನದಿ ಹರಿಯುತ್ತಿದ್ದು,ಇದರಿಂದಾಗಿ ಮೀನುಗಾರಿಕೆಯೂ ಈ ಭಾಗದ ಪ್ರಮುಖ ಉದ್ಯೋಗವಾಗಿದೆ. ಈ ಮೀನುಗಳಿಗೆ ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಹಳ ಬೇಡಿಕೆ ಇದೆ. ದೂರದ ಊರುಗಳಿಂದ ಮೀನುಗಳನ್ನು ಕೊಳ್ಳಲು ಪ್ರತಿದಿನ ನೂರಾರು ಜನರು ಮೀನು ಮಾರುಕಟ್ಟೆಗೆ ಆಗಮಿಸುತ್ತಾರೆ. ಇದನ್ನು ಮನಗಂಡು ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಹಿಂದಿನ ಪಟ್ಟಣ ಪಂಚಾಯತ್ ಆಡಳಿತ ಮಂಡಳಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾದ ಅಭಯಚಂದ್ರ ಜೈನ್‌ರವರ ಮೇಲೆ ಒತ್ತಡ ಎಂದು 60 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ದೂರಕಿತು.
ನಂತರ 2017ರಲ್ಲಿ ಅಂದಿನ ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರೆವೇರಿಸಿ 6ತಿಂಗಳಲ್ಲಿ ಕಾಮಗಾರಿ ಮುಗಿಸುವ ಭರವಸೆ ನೀಡಿ ಕಾಮಗಾರಿಯನ್ನು ಭೂಸೇನಾ ನಿಗಮಕ್ಕೆ ವಹಿಸಿದ್ದರು. ನಂತರ ಕಾಮಗಾರಿ ಆಮೆಗತಿಯಲ್ಲಿ ಸಾಗಿ ಹಳೆಯ ಮೀನು ಮಾರುಕಟ್ಟೆಯನ್ನು ತೆರವುಗೊಳಿಸಿ ಹೊಸ ಮೀನುಮಾರುಕಟ್ಟೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಆದರೆ ಕಾಮಗಾರಿ ಆರಂಭಗೊಂಡು 2 ವರ್ಷ ಪೂರೈಸುತ್ತ ಬಂದರೂ ಇನ್ನೂ ಕಾಮಗಾರಿ ಶುರುವಾಗುವ ಹಂತದಲ್ಲಿಯೇ ಇದೆ. ಪ್ರತಿದಿನ ಮೀನು ಮಾರುವ ಮಹಿಳೇಯರು ಸೇರಿದಂತೆ ಎಲ್ಲರೂ ಬಿಸಿಲಿನಲ್ಲಿ ಕುಳೀತು ಮೀನು ಮಾರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣ ಪಂಚಾಯತ್ ಸಹ ಈ ಮೀನು ಮಾರಾಟಗಾರರತ್ತ ಕಣ್ಣೇತ್ತಿ ನೋಡುತ್ತಿಲ್ಲ. ಯಾವುದೇ ಮೂಲ ಸೌಕರ್ಯ ಒದಗಿಸಿಲ್ಲ. ಅಲ್ಲಿ ನೀರಿನ ವ್ಯವಸ್ಥೆ ಇಲ್ಲದೇ ವ್ಯಾಪರಸ್ಥರು ಪರದಾಡಬೇಕಾಗಿದೆ. ಇದರಿಂದ ಮಾರುಕಟ್ಟೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಾರೆ.
ಪ್ರಶಾಂತ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.