ಬಾಳುಗೋಡು: ಕೊತ್ನಡ್ಕ ಕಿರು ಸೇತುವೆ ನನೆಗುದಿಗೆ
Team Udayavani, Apr 24, 2019, 6:00 AM IST
ಸುಬ್ರಹ್ಮಣ್ಯ: ಸೇತುವೆ ಇಲ್ಲದೆ ಇಲ್ಲಿಯ ಜನ ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮೂರಿಗೆ ಸಂಪರ್ಕಕ್ಕಾಗಿ ಸೇತುವೆಯೊಂದನ್ನು ನಿರ್ಮಿಸಿಕೊಡುವಂತೆ ಜನಪ್ರತಿನಿಧಿಗಳ ಮುಂದೆ ಕೊತ್ನಡ್ಕ ಗ್ರಾಮಸ್ಥರು ಬೇಡಿಕೆ ಇರಿಸಿದ್ದರು. ಒತ್ತಾಯಕ್ಕೆ ಮಣಿದು ನಾಲ್ಕು ವರ್ಷಗಳ ಹಿಂದೆ ಇಲ್ಲಿಗೆ ಕಿರು ಸೇತುವೆ ಮಂಜೂರುಗೊಂಡಿತ್ತು. ಸೇತುವೆ ನಿರ್ಮಾಣಕ್ಕೆ ಬೇಕಿರುವಷ್ಟು ಅನುದಾನ ದೊರಯದ ಕಾರಣ ಆಮೆಗತಿಯಲ್ಲಿಯೇ ಸಾಗಿದ ಕಾಮಗಾರಿ ಅಪೂರ್ಣವಾಗಿದೆ.
ಹರಿಹರ ಪಳ್ಳತ್ತಡ್ಕ ಗ್ರಾ.ಪಂ. ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ಕೊತ್ನಡ್ಕ ಎನ್ನುವ ತೀರಾ ಕುಗ್ರಾಮವಿದೆ. ಬಾಳುಗೋಡು ಪೇಟೆಯಿಂದ ಐದಾರು ಕಿ.ಮೀ. ದೂರದ ಅರಣ್ಯದ ಅಂಚಿನಲ್ಲಿ ಈ ಪ್ರದೇಶವಿದೆ. ಕಾಡು ದಾರಿಯ ಮೂಲಕ ಕಚ್ಚಾ ರಸ್ತೆಯಲ್ಲಿ ಇಲ್ಲಿಗೆ ತೆರಳಬೇಕು. ದಾರಿ ಮಧ್ಯೆ ಹೊಳೆ ಹರಿಯುತ್ತದೆ. ಇಲ್ಲಿಯವರು ಈ ಹೊಳೆ ದಾಟಲು ಮಳೆಗಾಲದಲ್ಲಿ ಹರಸಾಹಸ ಪಡುತ್ತಾರೆ.
8.25 ಲಕ್ಷ ರೂ. ಬಿಡುಗಡೆ
ಬಹುಕಾಲದ ಬೇಡಿಕೆಯಂತೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಇಲ್ಲಿನ ಸಂಪರ್ಕಕ್ಕಾಗಿ ಕಿರು ಸೇತುವೆ ನಿರ್ಮಾಣಕ್ಕೆ 8.25 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿತ್ತು. ಗುತ್ತಿಗೆದಾರರು ಕಾಮಗಾರಿಗೆ ಬೇಕಿರುವ ಸಾಮಗ್ರಿ ಸಂಗ್ರಹಿಸಿ ಕೆಲಸ ಆರಂಭಿಸಿದ್ದರು. ಪಿಲ್ಲರ್ ಕೆಲಸ ಸಾಗಿತ್ತು. ಕಳೆದ ಮೂರು ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದಕ್ಕೆ ಗುತ್ತಿಗೆದಾರರು ಕೊಟ್ಟಿರುವ ಕಾರಣ ಅನುದಾನ ಸಾಲುವುದಿಲ್ಲ ಎನ್ನುವುದಾಗಿತ್ತು.
ಇನ್ನೂ ಬೇಕು 10 ಲಕ್ಷ ರೂ.!
ಕಿರು ಸೇತುವೆಯ ಕಾಮಗಾರಿ ಪೂರ್ಣಗೊಳಿಸಬೇಕಾದರೆ ಇನ್ನೂ ಹತ್ತು ಲಕ್ಷ ರೂ. ಅನುದಾನದ ಆವಶ್ಯಕತೆ ಇದೆ ಎಂದು ಸಂಬಂಧಪಟ್ಟವರು ಹೇಳುತ್ತಾರೆ. ದೊರೆತ ಅನುದಾನದಲ್ಲಿ ಸೇತುವೆ ಕಾಮಗಾರಿ ನಡೆಸಿದ್ದಾಗಿ ಹೇಳಿ ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ. ಸೇತುವೆಗೆ ಹಾಕಿದ ಪಿಲ್ಲರ್ ಪಾಳು ಬಿದ್ದಿದೆ. ಸೇತುವೆ ನಿರ್ಮಾಣಕ್ಕೆಂದು ತಂದು ಹಾಕಿದ್ದ ಸಾಮಗ್ರಿಗಳು ಕಾಣೆಯಾಗಿವೆ. ಪಿಲ್ಲರಿಗೆ ಅಳವಡಿಸಿದ ಸಾಧನಗಳು ತುಕ್ಕು ಹಿಡಿದಿವೆ.
ನಿರ್ಲಕ್ಷ್ಯದ ಬಿಸಿ ತಟ್ಟಿತ್ತು
ಸತತ ಪ್ರಯತ್ನದ ಮೂಲಕ ಸೇತುವೆ ಮಂಜೂರುಗೊಂಡರೂ, ನಿರೀಕ್ಷಿತ ಅನುದಾನ ಸಿಗದೆ ಸೇತುವೆ ಪೂರ್ಣವಾಗದೆ ಇರುವುದು ಈ ಭಾಗದ ನಾಗರಿಕರಲ್ಲಿ ಬೇಸರ ತರಿಸಿದೆ. ಈ ಬಾರಿ ಚುನಾವಣೆ ವೇಳೆ ಮತ ಕೇಳಲು ಈ ಭಾಗಕ್ಕೆ ತೆರಳುವವರಿಗೆ ಇದರ ಬಿಸಿ ತಟ್ಟಿದೆ. ಚುನಾವಣೆ ಪ್ರಚಾರದ ವೇಳೆ ಇಲ್ಲಿನ ಮೂಲ ಸೌಕರ್ಯ ನಿರ್ಲಕ್ಷ್ಯದ ವಿಚಾರ ಕೂಡ ಚರ್ಚೆಗೆ ಬಂದಿತ್ತು. ಆದರೆ ಪ್ರತಿ ಭಾರಿ ಫಲಿತಾಂಶ ಶೂನ್ಯ.
ತೂಗು ಸೇತುವೆಯೇ ಆಧಾರ
ಶಾಲಾ ಮಕ್ಕಳು, ನಾಗರಿಕರು ಈ ರಸ್ತೆಯ ಮೂಲಕ ನಿತ್ಯವೂ ಓಡಾಡುತ್ತಾರೆ. ನಿತ್ಯವೂ ತಮ್ಮ ಬೇಡಿಕೆಗಳನ್ನು ಈ ರಸ್ತೆ ಮೂಲಕವೇ ಸಂಚರಿಸಿ ಪೂರೈಸಿಕೊಳ್ಳುತ್ತಾರೆ. ಈ ಊರಿಗೆ ಖಾಸಗಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನ ಸೌಲಭ್ಯ ಕೂಡ ಇಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಹೊಳೆ ತುಂಬಿ ಹರಿಯುವ ಕಾರಣ ಸ್ಥಳೀಯರು ತಾತ್ಕಾಲಿಕ ಮರದ ತೂಗು ಸೇತುವೆ ನಿರ್ಮಿಸಿಕೊಂಡು ಹೊಳೆ ದಾಟುತ್ತಾರೆ.
ಅನುದಾನ ಒದಗಿಸಿ: ಆಗ್ರಹ
ಸೇತುವೆ ಮಂಜೂರಾಗಿ ನಾಲ್ಕು ವರ್ಷಗಳು ಆಗಿವೆ. ಇನ್ನೂ ಸೇತುವೆ ಅರ್ಧದಲ್ಲೇ ಬಾಕಿಯಾಗಿದೆ. ಹೆಚ್ಚಿನ ಅನುದಾನದ ಅಗತ್ಯತೆ ಇದೆ. ಅರ್ಧಕ್ಕೆ ಕಾಮಗಾರಿ ಸ್ಥಗಿತವಾಗಿದ್ದರಿಂದ ಸರಕಾರದ ಯೋಜನೆ ಹಳ್ಳ ಹಿಡಿದಿದೆ. ಎಲ್ಲ ಕಡೆಗಳಲ್ಲೂ ಸಂಪರ್ಕ ಅಭಿವೃದ್ಧಿಯಾದರೆ, ನಾವಿಲ್ಲಿ ಇನ್ನೂ ಸಮಸ್ಯೆ ಅನುಭವಿಸುತ್ತಲೇ ಇದ್ದೇವೆ. ಇನ್ನಾದರೂ ಕಾಮಗಾರಿ ಚುರುಕು ಮುಟ್ಟಿಸಿ ಮಳೆಗಾಲದ ಮುಂಚಿತ ಪೂರ್ಣಗೊಳಿಸಬೇಕು.
– ಚೇತನ್ ಕಜೆಗದ್ದೆ ಸ್ಥಳಿಯ ನಿವಾಸಿ
ವಿಶೇಷ ಪ್ರಯತ್ನ
ಜಿ.ಪಂ. ಕ್ಷೇತ್ರಕ್ಕೆ ಹತ್ತು ಲಕ್ಷ ಅನುದಾನವಷ್ಟೇ ಲಭ್ಯವಿರುವುದು. ಹೀಗಾಗಿ ಅನುದಾನದ ಕೊರತೆ ಇದೆ. ಶಾಸಕರ ವಿಶೇಷ ಅನುದಾನವನ್ನು ಕೇಳಿಕೊಂಡು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು. ಸ್ಥಳೀಯ ಜನಪ್ರತಿನಿಧಿಗಳ ಜತೆ ಈ ಕುರಿತು ಶೀಘ್ರವೇ ಚರ್ಚಿಸಲಾಗುವುದು.
– ಆಶಾ ತಿಮ್ಮಪ್ಪ ಜಿ.ಪಂ. ಸದಸ್ಯೆ, ಗುತ್ತಿಗಾರು ಕ್ಷೇತ್ರ
ಬಾಲಕೃಷ್ಣ ಭೀಮಗುಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.