ಇಂದು ಡಾ.ರಾಜ್ 91ನೇ ಹುಟ್ಟುಹಬ್ಬ
Team Udayavani, Apr 24, 2019, 3:29 AM IST
ಬೆಂಗಳೂರು: ಇಂದು ವರನಟ ಡಾ.ರಾಜ್‌ಕುಮಾರ್ ಅವರ 91ನೇ ಜನ್ಮದಿನ. ತಮ್ಮ ವಿಶಿಷ್ಟ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ ರಾಜ್ ಹುಟ್ಟುಹಬ್ಬವನ್ನು ಇಂದು ರಾಜ್ಯಾದ್ಯಂತ ಅಭಿಮಾನಿಗಳು ಆಚರಿಸಲಿದ್ದಾರೆ.
ಡಾ.ರಾಜ್ ಕುಟುಂಬ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ತೆರಳಿ, ಪೂಜೆ ಸಲ್ಲಿಸಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಸೇರಲಿರುವ ಅಭಿಮಾನಿಗಳು ಕೂಡಾ ತಮ್ಮ ನೆಚ್ಚಿನ ನಟನ ಸ್ಮರಣೆ ಮಾಡಲಿದ್ದಾರೆ. ಡಾ.ರಾಜ್ ಹುಟ್ಟುಹಬ್ಬದಂದು ಅನ್ನದಾನ, ರಕ್ತದಾನ ಶಿಬಿರ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ.
ವಾರ್ತಾ ಇಲಾಖೆ ವತಿಯಿಂದಲೂ ಡಾ.ರಾಜ್‌ಕುಮಾರ್ ಅವರ 91ನೇ ಜನ್ಮದಿನಾಚರಣೆ ನಡೆಯಲಿದೆ. ಇಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ನಾಡೋಜ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಸೇರಿ ಅನೇಕರು ಭಾಗವಹಿಸಲಿದ್ದಾರೆ. ಮೋಹನ್ ಹಾಗೂ ತಂಡದವರಿಂದ ರಾಜ್ ಚಿತ್ರಗಳ ಗೀತಗಾಯನ ನಡೆಯಲಿದೆ.
ಸರ್ಕಾರದ ವತಿಯಿಂದ ರಾಜ್ ಹುಟ್ಟುಹಬ್ಬ: ಸರ್ಕಾರದ ವತಿಯಿಂದ ರಾಜ್ಯದೆಲ್ಲೆಡೆ ಡಾ.ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ.
ನಾಳೆ ಅವರ ಹುಟ್ಟುಹಬ್ಬ.
ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ.
ಎಲ್ಲರೂ ಭಾಗವಹಿಸಿ.
ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು#Rajkumar pic.twitter.com/FhnCvkpReB— H D Kumaraswamy (@hd_kumaraswamy) April 23, 2019
ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಅವರು, “ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ. ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟುಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ.ರಾಜ್ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.