ಲೈಂಗಿಕ ಕಿರುಕುಳ ಆರೋಪ: ವಕೀಲರಿಂದ ಸ್ಪಷ್ಟನೆ ಕೇಳಿದ ಸಿಜೆಐ
Team Udayavani, Apr 24, 2019, 6:00 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡುವ ಮೂಲಕ ಅವರು ರಾಜೀನಾಮೆ ನೀಡುವಂತೆ ಮಾಡುವ ಸಂಚು ಹೂಡಲಾಗಿದೆ ಎಂದು ಹೇಳಿಕೆ ನೀಡಿರುವ ವಕೀಲ ಉತ್ಸವ್ ಸಿಂಗ್ ಬೇನ್ಸ್‌ಗೆ ನೋಟಿಸ್ ನೀಡಲಾಗಿದ್ದು, ಈ ಆರೋಪಕ್ಕೆ ಸಂಬಂಧಿಸಿ ವಿವರಣೆ ನೀಡುವಂತೆ ಕೋರಲಾಗಿದೆ. ಸಿಜೆಐ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯ ಪರ ವಕಾಲತ್ತು ವಹಿಸಿದರೆ 1.5 ಕೋಟಿ ರೂ. ನೀಡುವುದಾಗಿ ಆಮಿಷ ಒಡ್ಡಲಾಗಿತ್ತು ಎಂದು ಸಿಂಗ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾ. ಅರುಣ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠವು ಈ ನೋಟಿಸ್ ನೀಡಿದೆ. ಪ್ರಕರಣದ ವಿಚಾರಣೆ ಬುಧವಾರ ಬೆಳಗ್ಗೆ 10.30 ಕ್ಕೆ ನಿಗದಿಯಾಗಿದೆ.
ಲಂಚದ ಆಮಿಷ ಒಡ್ಡುವ ಕೆಲವು ಫಿಕ್ಸರುಗಳು, ಸಿಜೆಐ ವಿರುದ್ಧ ಸಂಚು ಹೂಡಿದ್ದಾರೆ. ಲಂಚದ ಆಮಿಷ ಒಡ್ಡುವವರ ವಿರುದ್ಧ ಮುಖ್ಯನ್ಯಾಯಮೂರ್ತಿಗಳು ಕಠಿಣ ಕ್ರಮ ಕೈಗೊಂಡಿದ್ದರಿಂದಾಗಿ ಈ ರೀತಿಯ ಸಂಚು ಹೂಡಲಾಗಿದೆ ಎಂದು ಉತ್ಸವ್ ಆರೋಪಿಸಿದ್ದಾರೆ.
ತಮ್ಮ ವಿರುದ್ಧವೇ ದಾಖಲಾದ ಲೈಂಗಿಕ ದೌರ್ಜನ್ಯದ ಪ್ರಕರಣದ ವಿಚಾರಣೆಯನ್ನು ತಾವೇ ನಡೆಸುವುದು ಕಾನೂನಾತ್ಮಕವಾಗಿ ಮತ್ತು ನೈತಿಕವಾಗಿ ತಪ್ಪು ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ. ಆದರೆ ಈ ಪ್ರಕರಣದ ಬಗ್ಗೆ ನಾನು ಮಾತನಾಡಲಾರೆ. ಯಾಕೆಂದರೆ ಅದರ ಬಗ್ಗೆ ನನಗೆ ತಿಳಿದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.