ಒಂದು ಗಂಟೆ ಕೈ ಕೊಟ್ಟ ಇವಿಎಂ ಯಂತ್ರ

ವಾಹನ ಸ್ಥಗಿತ•ಪರದಾಡಿದ ಪ್ರಯಾಣಿಕರು•ರಾವೂರಿನಲ್ಲಿ ಮಾದರಿ ಮತಗಟ್ಟೆ

Team Udayavani, Apr 24, 2019, 10:20 AM IST

1

ವಾಡಿ: ಪಟ್ಟಣದ ರೆಸ್ಟ್‌ಕ್ಯಾಂಪ್‌ ತಾಂಡಾದ ಎಂಪಿಎಸ್‌ ಶಾಲೆಯಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ವಾಲ್ಮೀಕಿ ನಾಯಕ ದಂಪತಿ ಮತದಾನ ಮಾಡಿದರು.

ವಾಡಿ: ಪಟ್ಟಣದ ಪುರಸಭೆ ವ್ಯಾಪ್ತಿಯ ಎಸಿಸಿ ಕಾಲೋನಿಯ ಮತದಾನ ಕೇಂದ್ರ ಸಂಖ್ಯೆ 159, 143, ತರ್ಕಸ್‌ಪೇಟೆ ಹಾಗೂ ಕಮರವಾಡಿ ಗ್ರಾಮದ ಮತಗಟ್ಟೆಗಳ ಇವಿಎಂ ಯಂತ್ರಗಳು ಒಂದು ತಾಸಿಗೂ ಹೆಚ್ಚು ಸಮಯ ಕೈಕೊಟ್ಟರೆ, ಕಡಬೂರ ಗ್ರಾಮದ ಮತದಾನ ಕೇಂದ್ರದ ಎದುರು ಕೈ-ಕಮಲ ಕಾರ್ಯಕರ್ತರ ಮಾತಿನ ವಾಗ್ವಾದ ಪ್ರಕರಣ ಘಟಿಸಿದ್ದು ಹೊರತುಪಡಿಸಿ ಎಲ್ಲೆಡೆ ಶಾಂತಿಯುತ ಮತದಾನ ನಡೆಯಿತು.

ಅತಿಸೂಕ್ಷ್ಮ ವಲಯ ಎಂದು ಗುರುತಿಸಲಾಗಿರುವ ನಗರದ ವಿವಿಧ ಮತಗಟ್ಟೆಗಳಿಗೆ ಪೊಲೀಸ್‌ ಬಿಗಿ ಭದ್ರತೆ ಒದಗಿಸಿದ್ದರ ಪರಿಣಾಮ ಯಾವುದೇ ಅಹಿತಕರ ಘಟನೆಗಳು ಘಟಿಸಲಿಲ್ಲ ಎನ್ನುವುದೇ ಸಮಾಧಾನದ ಸಂಗತಿ. ಬೆಳಗ್ಗೆ ರೆಸ್ಟ್‌ಕ್ಯಾಂಪ್‌ ತಾಂಡಾದ ಎಂಪಿಎಸ್‌ ಶಾಲೆಯ ಮತಗಟ್ಟೆಯಲ್ಲಿ ಮಾಜಿ ಶಾಸಕ, ಬಿಜೆಪಿಯ ವಾಲ್ಮೀಕಿ ನಾಯಕ ಅವರು ಪತ್ನಿ ಜತೆಗೆ ಮತದಾನ ಮಾಡಿದರು. ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಹೆಚ್ಚಿನ ಬಹುಮತ ತಂದುಕೊಡುವ ಆತುರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರು, ಮತದಾರರನ್ನು ಮತಗಟ್ಟೆಗೆ ಕರೆತರುವಲ್ಲಿ ಇಡೀ ದಿನ ಶ್ರಮಿಸಿದ್ದು ಕಂಡುಬಂದಿತು. ಮತದಾರರೂ ಮಧ್ಯಾಹ್ನದ ರಣಬಿಸಿಲಿಗೆ ಹೆದರಿ ಬೆಳಗ್ಗೆಯೇ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸುವ ಕಸರತ್ತು ನಡೆಸಿದರು.

ಪ್ರಿಯಾಂಕ್‌ ಖರ್ಗೆ ಮಿಂಚಿನ ಸಂಚಾರ: ಬಿಜೆಪಿ ವಿರುದ್ಧ ತೊಡೆತಟ್ಟಿ ಮತ ಪ್ರಚಾರದ ವೇಳೆ ಜಿಲ್ಲೆಯಾಧ್ಯಂತ ಮಾತಿನ ಸಂಘರ್ಷವೇ ನಡೆಸಿದ್ದ ಚಿತ್ತಾಪುರ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ, ನಾಲವಾರ, ಹಳಕರ್ಟಿ, ವಾಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಿಂಚಿನ ಸಂಚಾರ ನಡೆಸುವ ಮೂಲಕ ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಿದರು.

ಕ್ಷೇತ್ರ ಸುತ್ತಿದ ಎಸ್‌ಯುಸಿಐ ಅಭ್ಯರ್ಥಿ: ಜಿಲ್ಲೆಯಲ್ಲಿ ತುರುಸಿನ ಪ್ರಚಾರ ಕೈಗೊಂಡು ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸೆಡ್ಡು ಹೊಡೆದ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ನಾಯಕ, ಪಕ್ಷೇತರ ಅಭ್ಯರ್ಥಿ ಕಾಮ್ರೇಡ್‌ ಎಸ್‌.ಎಂ. ಶರ್ಮಾ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಪರಿಶೀಲಿಸಿದರು. ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಕಾ.ಎಚ್.ವಿ. ದಿವಾಕರ ಇದ್ದರು.

ರಾವೂರಿನಲ್ಲಿ ಮಾದರಿ ಮತಗಟ್ಟೆ: ಮಾದರಿ ಮತದಾನ ಕೇಂದ್ರವನ್ನು ರಾವೂರ ಗ್ರಾಮದಲ್ಲಿ ಸಿದ್ಧಗೊಳಿಸಲಾಗಿತ್ತು. ಗ್ರಾಪಂ ಪಿಡಿಒ ಕಾವೇರಿ ರಾಠೊಡ ಹಾಗೂ ಸಿಬ್ಬಂದಿ ಶ್ರಮ, ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಕಳಪೆ ಉಪಹಾರ ಪೂರೈಕೆ: ಪುರಸಭೆ ವ್ಯಾಪ್ತಿಯ ವಿವಿಧ ಮತಗಟ್ಟೆಗಳ ಸಿಬ್ಬಂದಿಗೆ ಹಾಗೂ ಭದ್ರತೆಗೆ ನಿಯೋಜನೆಗೊಂಡ ಪೊಲೀಸ್‌ ಸಿಬ್ಬಂದಿಗೆ ಪೂರೈಸಲಾದ ಬೆಳಗಿನ ಉಪಹಾರ ಉಪ್ಪಿಟ್ಟು ತೀರಾ ಕಳಪೆಮಟ್ಟದ್ದಾಗಿತ್ತು ಎನ್ನುವ ದೂರುಗಳು ಕೇಳಿಬಂದವು. ಸಿಪಿಐ ಚಂದ್ರಶೇಖರ, ಪಿಎಸ್‌ಐ ವಿಜಯಕುಮಾರ ಭಾವಗಿ ಆದೇಶದಂತೆ ಸೂಕ್ಷ್ಮ ಮತದಾನ ಕೇಂದ್ರಗಳ ಭದ್ರತೆಗೆ ಕಾವಲು ನಿಂತಿದ್ದ ಪೊಲೀಸ್‌ ಸಿಬ್ಬಂದಿ ಕಾನೂನು ಸುವ್ಯವಸ್ಥೆ ಕಾಪಾಡಿದರು.

ಟಾಪ್ ನ್ಯೂಸ್

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.