ಮಲೇರಿಯಾ ಮುಕ್ತ ಜಿಲ್ಲೆಗಾಗಿ ಪ್ರಯತ್ನ
ವರ್ಷಪೂರ್ತಿ ಜಾಗೃತಿ ಕಾರ್ಯಕ್ರಮ
Team Udayavani, Apr 25, 2019, 6:05 AM IST
ವಿಶೇಷ ವರದಿ- ದಕ್ಷಿಣ ಕನ್ನಡ ಜಿಲ್ಲೆಯನ್ನು ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂಬ ನಿಟ್ಟಿನಲ್ಲಿ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯು ಸರ್ವ ರೀತಿಯಲ್ಲಿ ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಇದಕ್ಕಾಗಿ ಪ್ರತಿ ಮಳೆಗಾಲಕ್ಕೂ ಮುನ್ನ ವಿವಿಧ ಜಾಗೃತಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಆದರೆ, ಈ ಜಾಗೃತಿ ಕಾರ್ಯಕ್ರಮಗಳು ವರ್ಷಪೂರ್ತಿ ಮುಂದುವರಿಯುತ್ತಿವೆ.
ಪ್ರಮುಖವಾಗಿ ಮಂಗಳೂರು ನಗರದ ಎಲ್ಲ 10 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲೆಯ ಇತರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ಪರೀಕ್ಷೆ ನಡೆಸಲಾಗುತ್ತದೆ. ಪಾಸಿಟಿವ್ ಕಂಡು ಬಂದಲ್ಲಿ ಸಂಪೂರ್ಣ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ವಲಸೆ ಕಾರ್ಮಿಕರಿಂದ ಮಲೇರಿಯಾ ಹೆಚ್ಚಾಗಿ ಹರಡುವುದರಿಂದ ಅವರಲ್ಲಿ ಮಲೇರಿಯಾ ಪತ್ತೆಗೆ ಸಮೀಕ್ಷೆ ನಡೆಸಲಾಗುತ್ತಿದೆ.
ನೀರು ನಿಲ್ಲಿಸದಂತೆ ಎಚ್ಚರ
ಇವೆಲ್ಲ ಸಾರ್ವಜನಿಕರಿಗಾಗಿರುವ ಆರೋಗ್ಯ ಪೂರಕ ಕ್ರಮಗಳಾದರೆ, ಸಾರ್ವಜನಿಕ ಸ್ಥಳಗಳನ್ನು ಕೂಡ ಸ್ವತ್ಛವಾಗಿಟ್ಟುಕೊಳ್ಳುವುದು ಅಷ್ಟೇ ಮುಖ್ಯ. ಅದಕ್ಕಾಗಿ ಸಾರ್ವಜನಿಕ ಸ್ಥಳ, ಮನೆಯ ಸುತ್ತಮುತ್ತ, ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ನಿಲ್ಲಿಸದಂತೆ ಆಯಾ ಕಟ್ಟಡ ಮಾಲಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಎಚ್ಚರಿಕೆಯ ಹೊರತಾಗಿಯೂ ನಿಯಮಗಳನ್ನು ಪಾಲಿಸದ 65ಕ್ಕೂ ಹೆಚ್ಚು ಮಂದಿ ಕಟ್ಟಡ ಮಾಲಕರಿಗೆ ಈ ವರ್ಷದಲ್ಲಿ ನೋಟಿಸ್ ನೀಡಲಾಗಿದ್ದು, ದಂಡ ವಿಧಿಸಲಾಗಿದೆ.
ಸೊಳ್ಳೆ ಪರದೆ ವಿತರಣೆ
ಮಲೇರಿಯಾಕ್ಕೆ ಕಾರಣವಾಗುವ ಅನಾಫಿಲಿಸ್ ಹೆಣ್ಣು ಸೊಳ್ಳೆಯ ನಿರ್ನಾಮದಲ್ಲಿ ಗಪ್ಪಿ ಮೀನುಗಳ ಪಾತ್ರ ಹೆಚ್ಚಿದೆ. ಅದಕ್ಕಾಗಿಯೇ ಮನೆ ಮನೆಗಳ ಬಾವಿಗಳಿಗೆ ಹಾಕಲು ಗಪ್ಪಿ ಮೀನು ಬಿಡಲು ಇಲಾಖೆ ಪ್ರೋತ್ಸಾಹಿಸುತ್ತಿದೆ. ನಗರ ವ್ಯಾಪ್ತಿಯಲ್ಲಿ ಮಲೇರಿಯಾ ಪ್ರಮಾಣ ಅಧಿಕವಿರುವುದರಿಂದ ಇಲ್ಲಿನ ಜನಗಳಿಗೆ ಸುಮಾರು 10 ಸಾವಿರಕ್ಕೂ ಮಿಕ್ಕಿ ರಾಸಾಯನಿಕ ಲೇಪಿತ ಸೊಳ್ಳೆ ಪರದೆಗಳನ್ನು ವಿತರಿಸಲಾಗಿದೆ.
ಸೊಳ್ಳೆ ಬೆಳವಣಿಗೆ
ನಿಯಂತ್ರಣ ಅಭಿಯಾನ
ಈ ಬಾರಿ ನೂತನ ಕಾರ್ಯಕ್ರಮ ವೊಂದನ್ನು ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ಅದರಂತೆ, ನಗರದ ಎಲ್ಲ ಸರಕಾರಿ ಕಚೇರಿಗಳಲ್ಲಿ ಸೊಳ್ಳೆ ಬೆಳವಣಿಗೆ ನಿಯಂತ್ರಣ ಅಭಿಯಾನ ಮತ್ತು ಮಾಹಿತಿ ಶಿಕ್ಷಣ ನೀಡುವಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
494 ಮಲೇರಿಯಾ ಪ್ರಕರಣ
2019ರ ಜನವರಿಯಿಂದ ಮಾರ್ಚ್ 22ರವರೆಗೆ ಜಿಲ್ಲೆಯಲ್ಲಿ ಒಟ್ಟು 494 ಮಲೇರಿಯಾ ಪ್ರಕರಣ ಕಂಡು ಬಂದಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 470, ಮಂಗಳೂರಿನಲ್ಲಿ 16, ಬಂಟ್ವಾಳ 4, ಪುತ್ತೂರು 2, ಬೆಳ್ತಂಗಡಿ 2, ಸುಳ್ಯದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಮನೆ ಬಾಗಿಲಿಗೆ ಆಸ್ಪತ್ರೆ
ನಗರ ವ್ಯಾಪ್ತಿಯಲ್ಲಿ 24×7 ಸಂಚಾರಿ ಮಲೇರಿಯಾ ಚಿಕಿತ್ಸಾ ಘಟಕದ ಮೂಲಕ ರಕ್ತ ಲೇಪನಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ. ಕುಟುಂಬ ಸದಸ್ಯರಿಗೆ ಜ್ವರ ಕಾಣಿಸಿಕೊಂಡರೆ ಮೊಬೈಲ್ ದೂರವಾಣಿ ಸಂಖ್ಯೆ: 9448556872ಕ್ಕೆ ಕರೆ ಮಾಡಬಹುದು. ಕೂಡಲೇ ಮನೆ ಬಾಗಿಲಿಗೆ ಬಂದು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಒಂದು ವೇಳೆ ಹೆಚ್ಚಿನ ಚಿಕಿತ್ಸೆ ಬೇಕಾದರೆ ಉಚಿತ ವೈದ್ಯಕೀಯ ಚಿಕಿತ್ಸೆ ಸಹಿತ ಔಷಧ ನೀಡಲಾಗುತ್ತದೆ. 60 ಮಂದಿ ವಿವಿಧ ಉದ್ದೇಶ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮಲೇರಿಯಾ ಜಾಗೃತಿ, ರಕ್ತ ಮಾದರಿ ಸಂಗ್ರಹ, ಸಮೀಕ್ಷೆ ಕೈಗೊಳ್ಳುತ್ತಿದ್ದಾರೆ.
ಮಲೇರಿಯಾ ನಿಯಂತ್ರಣ
ರಾಜ್ಯದಲ್ಲಿಯೇ ಮಂಗಳೂರಿನಲ್ಲಿ ಮಲೇರಿಯಾ ಹೆಚ್ಚಿತ್ತು. ಆದರೆ, ಈಗ ಮಲೇರಿಯಾದ ಸಂಪೂರ್ಣ ನಿಯಂತ್ರಣಕ್ಕೆ ಇಲಾಖೆ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ನಾನಾ ಜಾಗೃತಿ ಕಾರ್ಯಕ್ರಮ, ಮಲೇರಿಯಾ ಹೆಚ್ಚಿರುವ ಕಡೆಗಳಿಗೆ ಇಲಾಖೆ ಸಿಬಂದಿಗಳೇ ಭೇಟಿ ನೀಡಿ ಪರಿಶೀಲನೆ, ಪರೀಕ್ಷೆ, ಚಿಕಿತ್ಸೆ ನೀಡುತ್ತಿದ್ದಾರೆ. ಪರಿಣಾಮ ಇತ್ತೀಚಿನ ವರ್ಷಗಳಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಬರುತ್ತಿದೆ.
-ಡಾ| ರಾಮಕೃಷ್ಣ ರಾವ್,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.