ಮಧ್ಯಾಹ್ನ 12.18ಕ್ಕೆ ಮಾಯವಾದ ನೆರಳು
Team Udayavani, Apr 25, 2019, 3:52 AM IST
ಬೆಂಗಳೂರು: ನಗರದ ಜವಾಹರ್‌ಲಾಲ್ ನೆಹರು ತಾರಾಲಯದಲ್ಲಿ ಶೂನ್ಯ ನೆರಳು ದಿನದ ಹಿನ್ನೆಲೆ ಬುಧವಾರ ಪ್ರಾತ್ಯಕ್ಷಿಕೆ ನಡೆಯಿತು. ತಾರಾಲಯದ ಆವರಣದಲ್ಲಿ ಸುಮಾರು ಒಂದೂವರೆ ಮೀಟರ್ ಉದ್ದದ ಕಂಬ ಇಡಲಾಗಿತ್ತು. ಬೆಳಗ್ಗೆಯಿಂದ ಕಾಣುತ್ತಿದ್ದ ಆ ಕಂಬದ ನೆರಳು ಚಿಕ್ಕದಾಗುತ್ತಾ ಬಂದು ಮಧ್ಯಾಹ್ನ 12.18 ಕ್ಕೆ ಮಾಯವಾಯಿತು.
ಇದರ ಜತೆಗೆ ಆಯತಾಕಾರದ ಮೂರು ಹಲಗೆಗಳನ್ನು ಒಂದರ ಮೇಲೊಂದು ಜೋಡಿಸಲಾಗಿತ್ತು. ಇದರಲ್ಲಿ “ಜೀರೊ ಶಾಡೊ ಡೇ’ ಎಂದು ಸಣ್ಣ ರಂಧ್ರಗಳಿಂದ ಬರೆಯಲಾಗಿತ್ತು. ಇದರ ಮೇಲೆ ಬಿಸಿಲು ಬಿದ್ದಾಗ ಮೂರು ಹಲಗೆಗಳ ಕೆಳಗಿನ ಖಾಲಿ ಹಲಗೆಯಲ್ಲಿ “ಜೀರೊ ಶಾಡೊ ಡೇ’ ಎಂದು ಓದಲು ಸಾಧ್ಯವಾಗುವಂತೆ ಪೂರ್ಣ ಅಕ್ಷರಗಳ ಬಿಂದುಗಳು ಕಂಡುಬಂತು.
ಕಾರ್ಯಕ್ರಮದಲ್ಲಿ ತಾರಾಲಯದ ನಿರ್ದೇಶಕ ಪ್ರಮೋದ್ ಜಿ.ಗಲಗಲಿ ಮಾತನಾಡಿ, ನೂರಾರು ವರ್ಷಗಳ ಹಿಂದೆಯೂ ದೇಶದ ವಿಜ್ಞಾನಿಗಳು ಶೂನ್ಯ ನೆರಳಿನ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಪ್ರಯೋಗಗಳನ್ನು ಮಾಡುತ್ತಿದ್ದರು. ಈ ಬಾರಿ ಬೆಂಗಳೂರಿನಲ್ಲಿ ಏ.24 ಹಾಗೂ ಆ.19 ರಂದು ಶೂನ್ಯ ನೆರಳಿನ ದಿನ ಉಂಟಾಗುತ್ತದೆ.
ಮಕ್ಕಳಿಗೆ ವಿಜ್ಞಾನದಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಬಾರಿ ಶೂನ್ಯ ನೆರಳಿನ ದಿನದಂದು ವಿವಿಧ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇನ್ನು ಕಾರ್ಯಗಾರದಲ್ಲಿ ಭಾಗವಹಿಸಿದ್ದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆರಳ ಮಾಯವ ವಿಸ್ಮಯವನ್ನು ಚಕಿತರಾಗಿ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.