ತ್ಯಾಜ್ಯ ಸಮಸ್ಯೆ ಶೀಘ್ರ ಪರಿಹರಿಸಿ
Team Udayavani, Apr 25, 2019, 4:05 AM IST
ಬೆಂಗಳೂರು: ಸಿಲಿಕಾನ್ ಸಿಟಿ ಹೆಗ್ಗಳಿಕೆಯ ಬೆಂಗಳೂರು ನಗರದಲ್ಲಿ ಘನತ್ಯಾಜ್ಯ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯದ ಸಮರ್ಪಕ ವಿಲೇವಾರಿಗೆ ಮುಂದಾಗುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಅವರು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ನಗರದ ಕೇಂದ್ರ ವಾಣಿಜ್ಯ ಪ್ರದೇಶದಲ್ಲಿ (ಸಿಬಿಡಿ) ವಿವಿಧ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ವಿವಿಧ ಕಾಮಗಾರಿಯಿಂದಾಗಿ ವಾಹನಗಳು ಸಂಚಾರಕ್ಕೆ ತೊಂದರೆಯಾಗಿದೆ. ಇದರೊಂದಿಗೆ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಸಮಸ್ಯೆಗಳಿಗೆ ಪರಿಹಾರ ದೊರೆಯದಂತಾಗಿದೆ. ಹೀಗಾಗಿ ಕೂಡಲೇ ನಗರದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದಿದ್ದಾರೆ.
ಬೆಂಗಳೂರಿಗೆ ನಿತ್ಯ ಬೇರೆ ದೇಶಗಳಿಂದ ಗಣ್ಯ ಭೇಟಿ ನೀಡುತ್ತಾರೆ. ಹೀಗಾಗಿ ನಗರವನ್ನು ಸ್ವತ್ಛವಾಗಿರಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಆದರೆ, ಪ್ರಮುಖ ರಸ್ತೆಗಳ ಬದಿಯಲ್ಲಿಯೇ ಕಟ್ಟಡ ತ್ಯಾಜ್ಯ ಹಾಗೂ ಘನತ್ಯಾಜ್ಯ ಸುರಿದ್ದು, ಕೂಡಲೇ ತೆರವುಗೊಳಿಸಲು ಪಾಲಿಕೆ ಮುಂದಾಗಬೇಕು ಎಂದು ಕೋರಿದ್ದಾರೆ.
ಇದರೊಂದಿಗೆ ಬಿಬಿಎಂಪಿ ವತಿಯಿಂದ ಈಗಾಗಲೇ ಕೈಗೆತ್ತಿಕೊಂಡಿರುವ ಬಹುತೇಕ ಕಾಮಗಾರಿಗಳು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದವು. ಇದೀಗ ಚುನಾವಣೆ ಮುಗಿದಿರುವುದರಿಂದ ಪಾಲಿಕೆಯ ಅಧಿಕಾರಿಗಳು ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಬೇಕು ಎಂದು ಸುಧಾಕರ್ ಶೆಟ್ಟಿ ಆಯುಕ್ತರನ್ನು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.