ಈ ಬಾರಿ ಕಡಿಮೆ ಆಯ್ತಲ್ಲ ಮತದಾನ


Team Udayavani, Apr 25, 2019, 11:18 AM IST

25-April-6

ದಾವಣಗೆರೆ: 17ನೇ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಏನೇಲ್ಲಾ ಸರ್ಕಸ್‌ ಮಾಡಿದರೂ ಕಳೆದ ಬಾರಿಗಿಂತ ಮತದಾನ ಕಡಿಮೆಯೇ ಆಗಿದೆ.

ಏ.23ರಂದು ಲೋಕಸಭೆಗೆ ರಾಜ್ಯದಲ್ಲಿ ನಡೆದ 2ನೇ ಹಂತದ ಮತದಾನದಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಒಟ್ಟು ಶೇ. 73.03 ಮತದಾರರು ತಮ್ಮ ಸಂವಿಧಾನಿಕ ಹಕ್ಕು ಚಲಾಯಿಸಿದ್ದು, ಇದು ಕಳೆದ ಬಾರಿಯ ಲೋಕಸಭಾ ಚುನಾವಣೆ ಮತದಾನಕ್ಕೆ ಹೋಲಿಸಿದರೆ .2% ಇಳಿಕೆಯಾಗಿರುವುದು ಕಂಡು ಬಂದಿದೆ.

ಕಳೆದ ಚುನಾವಣೆಯಲ್ಲಿ ದಾವಣಗೆರೆ ಲೋಕಸಭಾ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಿಂದ 7,71,821 ಪುರುಷರು, 7,50,411 ಮಹಿಳೆಯರು ಹಾಗೂ ಇತರೆ 106 ಸೇರಿ ಒಟ್ಟು 15,22,338 ಮತದಾರರಿದ್ದರು. ಆ ಚುನಾವಣೆಯಲ್ಲಿ ಒಟ್ಟು 11,14.385 ಮಂದಿ ತಮ್ಮ ಹಕ್ಕು ಚಲಾಯಿಸಿದ್ದು, ಶೇ. 73.23ರಷ್ಟು ಮತ ಚಲಾವಣೆ ಆಗಿದ್ದವು. 5,80,146 ಪುರುಷರು ಹಾಗೂ 5,33,438 ಮಹಿಳೆಯರು ಮತದಾನ ಮಾಡಿದ್ದರು.

ಈ ಚುನಾವಣೆಯಲ್ಲಿ 8,22,593 ಪುರುಷರು, 8,09,744 ಮಹಿಳೆಯರು, ಇತರರು 129 ಸೇರಿ ಒಟ್ಟು 16,32,466 ಮತದಾರರಿದ್ದು, ಇವರಲ್ಲಿ 11,92,162 ಮಂದಿ ಮತದಾನ ಮಾಡಿದ್ದಾರೆ. ಇವರಲ್ಲಿ 6,17,298 ಪುರುಷರು, 5,74,856 ಮಹಿಳೆಯರು ಹಾಗೂ ಇತರೆ 8 ಮಂದಿ ಸೇರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

2014ರ ಚುನಾವಣೆಯಲ್ಲಿ ದಾವಣಗೆರೆ ಉತ್ತರ-ಶೇ. 65.13, ದಾವಣಗೆರೆ ದಕ್ಷಿಣ-ಶೇ. 65.60, ಹೊನ್ನಾಳಿ- ಶೇ. 78.82, ಜಗಳೂರು-ಶೇ. 74.67, ಹರಪನಹಳ್ಳಿ- ಶೇ. 75.8, ಚನ್ನಗಿರಿ- ಶೇ. 77.17, ಹರಿಹರ-ಶೇ. 72.73 ಹಾಗೂ ಮಾಯಕೊಂಡ ಶೇ. 78.06 ಮತ ಚಲಾವಣೆ ಆಗಿದ್ದವು. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಕ್ಷೇತ್ರಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದಿತ್ತು.

ಈ ಬಾರಿ ಜಗಳೂರು- ಶೇ. 73.36, ಹರಪನಹಳ್ಳಿ-ಶೇ. 75.78, ಹರಿಹರ- ಶೇ. 74.41, ದಾವಣಗೆರೆ ಉತ್ತರ- ಶೇ. 65.71, ದಾವಣಗೆರೆ ದಕ್ಷಿಣ- ಶೇ. 65.93, ಮಾಯಕೊಂಡ- ಶೇ. 77.61, ಚನ್ನಗಿರಿ-ಶೇ. 73.73 ಹಾಗೂ ಹೊನ್ನಾಳಿ ಕ್ಷೇತ್ರದಲ್ಲಿ ಶೇ. 80.01 ಮತದಾನ ಆಗಿದೆ. ಈ ಚುನಾವಣೆಯಲ್ಲೂ ಹೊನ್ನಾಳಿ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚು ಮತದಾನ ಆಗಿರುವುದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಈ ಚುನಾವಣೆಯಲ್ಲಿ ಮಹಾನಗರ ಪಾಲಿಕೆ ಒಳಗೊಂಡ, ಸುಶಿಕ್ಷಿತರು, ಪ್ರಜ್ಞಾವಂತರು, ವಿದ್ಯಾವಂತರು, ದಾವಣಗೆರೆ ಉತ್ತರ ಹಾಗೂ ದಕ್ಷಿಣ ಎರಡೂ ವಿಧಾನ ಸಭಾ ಕ್ಷೇತ್ರಗಳಲ್ಲೂ ಕಡಿಮೆ ಮತದಾನ ಆಗಿರುವುದು ವಿಪರ್ಯಾಸ ಎನಿಸಿದೆ. ದಾವಣಗೆರೆ ಉತ್ತರ- ಶೇ. 65.71 ಹಾಗೂ ದಕ್ಷಿಣ-ಶೇ| 65.93 ಮತ ಚಲಾವಣೆ ಆಗಿವೆ.

2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 13,07,583 ಮತದಾರರ ಪೈಕಿ 9,07,727 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ಆ ಚುನಾವಣೆಯಲ್ಲಿ ಶೇ. 69.41ರಷ್ಟು ಮತದಾನ ಆಗಿತ್ತು.

ಕಳೆದ ಚುನಾವಣೆಯಲ್ಲಿ ದಾವಣಗೆರೆ ಲೋಕಸಭಾ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಿಂದ ಒಟ್ಟು 15,22,338 ಮತದಾರರಿದ್ದರು. ಆ ಚುನಾವಣೆಯಲ್ಲಿ ಒಟ್ಟು 11,14.385 ಮಂದಿ ತಮ್ಮ ಹಕ್ಕು ಚಲಾಯಿಸಿದ್ದು, ಶೇ. 73.23ರಷ್ಟು ಮತ ಚಲಾವಣೆ ಆಗಿದ್ದವು. 2014ರಲ್ಲಿ 5,80,146 ಪುರುಷರು ಹಾಗೂ 5,33,438 ಮಹಿಳೆಯರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

•ಎನ್‌.ಆರ್‌. ನಟರಾಜ್‌

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.