ಲೋಕಸಮರ ನಾಲ್ಕನೇ ಹಂತ: 928ರಲ್ಲಿ 210 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣ
Team Udayavani, Apr 25, 2019, 11:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇದೇ ತಿಂಗಳ 29ರಂದು ನಡೆಯಲಿದೆ. ನಾಲ್ಕನೇ ಹಂತದ ಚುನಾವಣೆಯಲ್ಲಿ 928 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು ಅವರಲ್ಲಿ 210 ಅಭ್ಯರ್ಥಿಗಳ ಮೇಲೆ ವಿವಿಧ ಕ್ರಿಮಿನಲ್ ಪ್ರಕರಣಗಳಿರುವುದು ‘ಪ್ರಜಾಸತ್ತಾತ್ಮಕ ಸುಧಾರಣಾ ಸಂಘ (ಎಡಿಆರ್)) ಬುಧವಾರದಂದು ಬಿಡುಗಡೆಗೊಳಿಸಿರುವ ಸಮೀಕ್ಷೆಯೊಂದರಿಂದ ಬಯಲಾಗಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರಗಳ ಸಲ್ಲಿಕೆ ವೇಳೆ ಸಲ್ಲಿಸಿರುವ ಮಾಹಿತಿಗಳ ಆಧಾರದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗಿದೆ.
ಇವರಲ್ಲಿ 158 ಅಭ್ಯರ್ಥಿಗಳ ಮೇಲೆ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಿವೆ. 12 ಅಭ್ಯರ್ಥಿಗಳು ತಮ್ಮ ಮೇಲೆ ಕ್ರಿಮಿನಲ್ ಪ್ರಕರಣ ಆರೋಪ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಐವರು ಅಭ್ಯರ್ಥಿಗಳು ತಮ್ಮ ಮೇಲೆ ಕೊಲೆ ಪ್ರಕರಣದ ಆರೋಪ ಇರುವುದನ್ನು ಘೋಷಿಸಿಕೊಂಡಿದ್ದರೆ, 24 ಅಭ್ಯರ್ಥಿಗಳ ಮೇಲೆ ಕೊಲೆ ಪ್ರಯತ್ನದ ಪ್ರಕರಣ ದಾಖಲಾಗಿವೆ. ನಾಲ್ವರು ಅಭ್ಯರ್ಥಿಗಳ ಮೇಲೆ ಅಪಹರಣ ಸಂಬಂಧಿ ಪ್ರಕರಣ ದಾಖಲಾಗಿದೆ. 21 ಅಭ್ಯರ್ಥಿಗಳ ಮೇಲೆ ಮಹಿಳೆಯರ ವಿರುದ್ಧದ ವಿವಿಧ ಪ್ರಕರಣಗಳು ದಾಖಲಾಗಿವೆ. ಇನ್ನು 16 ಅಭ್ಯರ್ಥಿಗಳ ಮೇಲೆ ದ್ವೇಷದ ಭಾಷಣ ಮಾಡಿರುವ ಕಾರಣಕ್ಕಾಗಿ ಪ್ರಕರಣ ದಾಖಲಾಗಿದೆ.
ಇನ್ನು ಪಕ್ಷಗಳ ವಿಚಾರಕ್ಕೆ ಬರುವುದಾದರೆ, ನಾಲ್ಕನೇ ಹಂತದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುತ್ತಿರುವ 57 ಸ್ಪರ್ಧಿಗಳಲ್ಲಿ 20 ಅಭ್ಯರ್ಥಿಗಳ ವಿರುದ್ಧ ವಿವಿಧ ಕ್ರಿಮಿನಲ್ ಪ್ರಕರಣಗಳಿವೆ. ಕಾಂಗ್ರೆಸ್ ನ ಒಟ್ಟು 54 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದು ಜಾಹೀರಾಗಿದೆ. ಬಿ.ಎಸ್.ಪಿ.ಯ ಒಟ್ಟು 54 ಅಭ್ಯರ್ಥಿಗಳಲ್ಲಿ 10 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆಯನ್ನು ಹೊಂದಿದವರಾಗಿದ್ದಾರೆ. ಶಿವಸೇನೆಯ 21 ಅಭ್ಯರ್ಥಿಗಳ ಪೈಕಿ 9 ಜನರ ಮೇಲೆ ವಿವಿಧ ರೀತಿಯ ಪ್ರಕರಣಗಳಿವೆ. ಮತ್ತು 345 ಸ್ವತಂತ್ರ ಅಭ್ಯರ್ಥಿಗಳ ಪೈಕಿ 45 ಅಭ್ಯರ್ಥಿಗಳ ಮೇಲೆ ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪಗಳಿರುವುದಾಗಿ ತಮ್ಮ ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.