ಪಾಲಿಕೆ ಟೆಂಡರ್‌ ನಾಟ್ ಶ್ಯೂರ್‌

Team Udayavani, Apr 26, 2019, 11:35 AM IST

blore-4

ಬೆಂಗಳೂರು: ಮಣ್ಣಿನ ರಸ್ತೆಗಳಾಗಿ ಪರಿವರ್ತನೆಯಾಗಿರುವ ರಾಜಧಾನಿ ಹೃದಯ ಭಾಗದ ಮಾರ್ಗಗಳು, ಎಲ್ಲೆಡೆ ರಾಶಿ ರಾಶಿ ಕಟ್ಟಡ ತ್ಯಾಜ್ಯ, ಕಣ್ಮರೆಯಾಗಿರುವ ಪಾದಚಾರಿ ಮಾರ್ಗ, ಅಳಿದುಳಿದ ರಸ್ತೆಯನ್ನೂ ಆಕ್ರಮಿಸಿರುವ ವಾಹನಗಳು, ನಿಮಿಷ ನಿಮಿಷಕ್ಕೂ ಮೇಲೇಳುವ ಧೂಳಿಗೆ ಮಸುಕಾಗಿರುವ ಕಟ್ಟಡಗಳು…

ರಾಜಧಾನಿ ಬೆಂಗಳೂರಿನ ಹೃದಯ ಭಾಗವೂ, ಪ್ರಮುಖ ವಾಣಿಜ್ಯ ಪ್ರದೇಶವಾದ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಕಂಡುಬರುತ್ತಿರುವ ದೃಶ್ಯಗಳಿವು.

ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಆ ಪೈಕಿ ಕೆಲವು ಕಾಮಗಾರಿಗಳು ಪೂರ್ಣಗೊಂಡಿವೆ. ಆದರೆ, ಗಾಂಧಿನಗರದ ನ್ಯಾಷನಲ್ ಮಾರುಕಟ್ಟೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾಲಿಕೆಯಿಂದ ನಡೆಸುತ್ತಿರುವ ಟೆಂಡರ್‌ ಶ್ಯೂರ್‌ ಕಾಮಗಾರಿಯಿಂದ ಜನರು ಹೈರಾಣಾಗಿದ್ದಾರೆ.

ಪಾಲಿಕೆಯಿಂದ ಗಾಂಧಿನಗರದ ಎಸ್‌.ಸಿ.ರಸ್ತೆ, 5ನೇ ಮುಖ್ಯರಸ್ತೆ, 6ನೇ ಮುಖ್ಯರಸ್ತೆ, 1 ಹಾಗೂ 2ನೇ ಅಡ್ಡರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ಟೆಂಡರ್‌ ಶ್ಯೂರ್‌ ಕಾಮಗಾರಿ ಪ್ರಗತಿಯಲ್ಲಿದೆ. ಪರಿಣಾಮ, ಪಾದಚಾರಿ ಮಾರ್ಗಗಳು ಕಾಣೆಯಾಗಿದ್ದು, ಸಂಪೂರ್ಣ ಮಣ್ಣಿನ ರಸ್ತೆಗಳಾಗಿ ಪರಿವರ್ತನೆಯಾಗಿವೆ.

ಏಕಕಾಲದಲ್ಲಿ ಎಲ್ಲ ಕಡೆ ಕಾಮಗಾರಿ: ಪಾಲಿಕೆಯಿಂದ ಪ್ರಮುಖ ಐದು ರಸ್ತೆಗಳಲ್ಲಿ ಏಕಕಾಲದಲ್ಲಿ ಕಾಮಗಾರಿ ನಡೆಸುತ್ತಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ನಿತ್ಯ ನರಕ ಅನುಭವಿಸುವಂತಾಗಿದೆ. ನ್ಯಾಷನಲ್ ಮಾರ್ಕೆಟ್, ಅಣ್ಣಮ್ಮ ದೇವಸ್ಥಾನ ರಸ್ತೆ, ಸುಖಸಾಗರ್‌ ಮಾಲ್ ಎದುರಿನ ರಸ್ತೆ, ಗುಬ್ಬಿ ವೀರಣ್ಣ ರಂಗ ಮಂದಿರ ಎದುರಿನ ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ಏಕಕಾಲದಲ್ಲಿ ಕಾಮಗಾರಿ ನಡೆಯುತ್ತಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಮಾಸ್ಕ್ ಇಲ್ಲದೆ ಉಸಿರಿಲ್ಲ: ಪಾಲಿಕೆಯ ಟೆಂಡರ್‌ಶ್ಯೂರ್‌ ಕಾಮಗಾರಿ ಹಾಗೂ ಕೆಲ ಖಾಸಗಿಯವರು ನಡೆಸುತ್ತಿರುವ ಕಟ್ಟಡ ನಿರ್ಮಾಣ ಕಾಮಗಾರಿ ಪರಿಣಾಮ, ಗಾಂಧಿನಗರವನ್ನು ಧೂಳು ಆವರಿಸಿದೆ. ಪರಿಣಾಮ, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಅನಿವಾರ್ಯತೆ ಎದುರಾಗಿದೆ. ಇನ್ನು ಮಳಿಗೆಗಳನ್ನು ದಿನಕ್ಕೆ ಎಷ್ಟು ಬಾರಿ ಸ್ವಚ್ಛಗೊಳಿಸಿದರೂ ಧೂಳು ತುಂಬುತ್ತಿದೆ ಎಂಬುದು ವ್ಯಾಪಾರಿಗಳ ಅಳಲು.

ಗಾಂಧಿನಗರದ ಎಲ್ಲ ರಸ್ತೆಗಳಲ್ಲಿ ಏಕಕಾಲದಲ್ಲಿ ಕಾಮಗಾರಿ ಆರಂಭಿಸಿರುವುದರಿಂದ ಸಮಸ್ಯೆಯಾಗಿದೆ. ಪಾದಚಾರಿ
ಮಾರ್ಗದ ಬಹುತೇಕ ಭಾಗ ಅಗೆದಿರುವ ಕಾರಣ, ರಸ್ತೆಗಳು ಚಿಕ್ಕದಾಗಿದ್ದು, ಅಲ್ಲಿ ಮಣ್ಣು ತುಂಬಿಕೊಂಡಿದೆ. ವಾಹನಗಳು
ಸಂಚರಿಸಿದಾಗ ಭಾರೀ ಧೂಳು ಸೃಷ್ಟಿಯಾಗುತ್ತಿದೆ.
●ಸುಂದರ್‌ ಪಟ್ನಾಯಕ್‌, ಬೀದಿ ಬದಿ ವ್ಯಾಪಾರಿ

ವಾಹನಗಳ ಪಾರ್ಕಿಂಗ್‌ಗೆ ಅರ್ಧ ರಸ್ತೆ ಮೀಸಲು

ಗಾಂಧಿನಗರದಲ್ಲಿ ಪ್ರಮುಖ ಟ್ರಾವೆಲ್ಸ್ ಸಂಸ್ಥೆಗಳು, ಪುಸ್ತಕ ಮಳಿಗೆಗಳು, ಮೊಬೈಲ್, ಕ್ಯಾಮೆರಾ, ಚಿತ್ರಮಂದಿರ ಸೇರಿದಂತೆ ಹಲವಾರು ವಾಣಿಜ್ಯ ಚಟುವಟಿಕೆಗಳು ನಡೆಯುವುದರಿಂದ ನಿತ್ಯ ಹತ್ತಾರು ಸಾವಿರ ಜನರು ಬಂದು ಹೋಗುತ್ತಾರೆ. ಅದರಲ್ಲೂ ವಸ್ತುಗಳ ಖರೀದಿಗೆ ಬರುವವರಿಗೆ ಪಾರ್ಕಿಂಗ್‌ ಸಮಸ್ಯೆ ಕಾಡುತ್ತಿದ್ದು, ಪಾಲಿಕೆಯಿಂದ ಕಾಮಗಾರಿ ನಡೆಸುತ್ತಿರುವ ಜಾಗ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.