ಅದ್ಭುತ ಕಥೆಗೆ ಶವವೇ ಮೂಲ
Team Udayavani, Apr 26, 2019, 11:51 AM IST
ಕಳೆದ 13 ವರ್ಷಗಳಿಂದ “ದೇವರಾಣೆ’, “90′, “ಹುಡುಗಾಟ’, “ಕಂದ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಸಂತೋಷ್ ಕುಮಾರ್ ಬೆಟಗೇರಿ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ “ಒಂಬತ್ತನೇ ಅದ್ಭುತ’. ಈ ಚಿತ್ರದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆುತು. ಸಂತೋಷ್‌ಕುಮಾರ್ ಅವರೇ ಈ ಚಿತ್ರದ ನಿರ್ಮಾಪಕರು ಆಗಿದ್ದು, ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸಂತೋಷ್ ಕುಮಾರ್ ಒಂದು ಶವವನ್ನಿಟ್ಟುಕೊಂಡು ಅದರ ಸುತ್ತ ನಡೆಯುವ ಘಟನೆಗಳನ್ನು ಕಾಮಿಡಿಯಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ರೆಗ್ಯುಲರ್ ಪ್ಯಾಟ್ರನ್ ಬಿಟ್ಟು ಬೇರೆಯದೇ ಸ್ಟೈಲ್‌ನಲ್ಲಿ ನಿರೂಪಣೆ ಮಾಡಿದ್ದೇವೆ. ನಿರ್ಮಾಣ ಕಾರ್ಯದಲ್ಲಿ ನಮ್ಮ ಸಹೋದರರ ಸಹಕಾರ ಕೂಡ ಇದೆ. ಮಂಡ್ಯದಲ್ಲಿ ನಡೆಯುವ ಕಥೆ ಇದಾಗಿದ್ದು, ಮಂಗಳೂರು, ಉತ್ತರ ಕರ್ನಾಟಕ, ಮಂಡ್ಯ ಸೇರಿ 3 ತರದ ಭಾಷೆ ಈ ಚಿತ್ರದಲ್ಲಿದೆ ಎಂದು ಹೇಳಿದರು.
ಈ ಚಿತ್ರದ ನಾಯಕಿಯಾಗಿ ನಯನ ಕಾಣಿಸಿಕೊಂಡಿದ್ದಾರೆ. ಅಲ್ಲದೆ ತಿಥಿ ಖ್ಯಾತಿಯ ಸೆಂಚುರಿಗೌಡ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ತನ್ನ ಪಾತ್ರದ ಕುರಿತಂತೆ ಮಾತನಾಡಿದ ನಯನ, “ನಾನು ಮೂಲತಃ ಮಾಡೆಲ್ ಮಿಸ್ ಇಂಡಿಯಾ ಸೌತ್‌ನಲ್ಲಿ ಭಾಗವಹಿಸಿದ್ದೆ. ನನ್ನ ಪೊ›ಫೈಲ್ ನೋಡಿ ನಿರ್ದೇಶಕರು ನನಗೆ ಚಾನ್ಸ್ ಕೊಟ್ಟಿದ್ದಾರೆ.
ಒಬ್ಬ ಕಾಲೇಜು ಹುಡುಗಿಯ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಕಾಮಿಡಿ, ಸಸ್ಪೆನ್ಸ್ ಕಥೆ ಇದೆ. ಟೀಮ್ ಸಪೋರ್ಟ್ ತುಂಬಾ ಚೆನ್ನಾಗಿತ್ತು ಎಂದು ಹೇಳಿಕೊಂಡರು. ಚಿತ್ರಕ್ಕೆ ಸುನಿಲ್ ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಘವೇಂದ್ರ ಬಿ.ಕೋಲಾರ್ ಛಾಯಾಗ್ರಹಣವಿದೆ. ನಾಗರಾಜ್ ಆರ್ ಕುಂತೂರ್, ಗೋಪಾಲಕೃಷ್ಣ ಗೌಡ ಹಾಗೂ ಮಂಜಣ್ಣ ಬೆಟ್ಟಹಳ್ಳಿ ಈ ಚಿತ್ರದ ಸಹನಿರ್ಮಾಪಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.