ಮೋದಿ ನಾಮಪತ್ರಕ್ಕೆ ‘ರಿಯಲ್ ಚೌಕಿದಾರ್’ ಅನುಮೋದನೆ !
ಮಣಿಕರ್ಣಿಕಾ ಘಾಟ್ ನ ಈ ಕಾವಲುಗಾರ ಪ್ರಧಾನಿ ನಾಮಪತ್ರದ ಸೂಚಕರಲ್ಲೊಬ್ಬ!
Team Udayavani, Apr 26, 2019, 1:19 PM IST
ವಾರಣಾಸಿ: ‘ನಾನು ಪ್ರಧಾನಮಂತ್ರಿಯಲ್ಲ ನಿಮ್ಮ ಪ್ರಧಾನ ಸೇವಕ’ ಮತ್ತು ‘ನಾನು ಈ ದೇಶದ ಚೌಕಿದಾರ’ ಎಂದು ತನ್ನನ್ನು ತಾನು ಬಣ್ಣಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ನಾಮಪತ್ರ ಸಲ್ಲಿಕೆ ವೇಳೆ ನಿಜವಾದ ಚೌಕಿದಾರರೊಬ್ಬರನ್ನು ತಮ್ಮ ನಾಮಪತ್ರಕ್ಕೆ ಸೂಚಕರನ್ನಾಗಿ ಆಯ್ಕೆಮಾಡಿಕೊಂಡಿದ್ದು ವಿಶೇಷವಾಗಿತ್ತು.
ವಾರಣಾಸಿ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಶುಕ್ರವಾರದಂದು ಇಲ್ಲಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸೂಚಕರಲ್ಲಿ ಒಬ್ಬರಾಗಿರುವ ಪ್ರೊಫೆಸರ್ ಅನ್ನಪೂರ್ಣ ಅವರ ಕಾಲಿಗೆ ಎರಗಿ ಬಳಿಕ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಅನ್ನಪೂರ್ಣ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸಂಸ್ಥಾಪಕ ಸಮಾಜ ಸುಧಾರಕ ಮದನ ಮೋಹನ ಮಾಳವೀಯ ಅವರ ಮೊಮ್ಮಗಳಾಗಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿರುವವರಲ್ಲಿ ಒಬ್ಬ ರಿಯಲ್ ಚೌಕಿದಾರ ಸಹ ಸೇರಿದ್ದಾರೆ ಎನ್ನುವುದೇ ವಿಶೇಷ. ಇಲ್ಲಿನ ಮಣಿಕರ್ಣಿಕಾ ಘಾಟ್ ನಲ್ಲಿ ಕಾವಲುಗಾರರಾಗಿರುವ ಜಗದೀಶ್ ಚೌಧರಿ ಎಂಬವರೇ ಈ ರಿಯಲ್ ಚೌಕಿದಾರರಾಗಿದ್ದು, ಮೋದಿ ಅವರ ನಾಮಪತ್ರದ ಸೂಚಕರಲ್ಲಿ ಜಗದೀಶ್ ಅವರೂ ಕೂಡ ಒಬ್ಬರಾಗಿದ್ದಾರೆ.
ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿರುವ ಇನ್ನಿಬ್ಬರಲ್ಲಿ ರಮಾಶಂಕರ್ ಪಟೇಲ್ ಎನ್ನುವವರು ಕೃಷಿ ವಿಜ್ಞಾನಿಯಾಗಿದ್ದರೆ ಸುಭಾಷ್ ಚಂದ್ರ ಗುಪ್ತಾ ಎಂಬವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದಾರೆ.
ಗುರುವಾರ ವಾರಣಾಸಿಯುದ್ದಕ್ಕೂ ಭರ್ಜರಿ ರೋಡ್ ಶೋ ನಡೆಸಿ ಬಳಿಕ ಗಂಗಾರತಿಯಲ್ಲಿ ಭಾಗವಹಿಸಿ ಗಮನಸೆಳೆದಿದ್ದ ಮೋದಿ ಇಂದು ತಮ್ಮ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿಯೂ ವಿಶೇಷತೆಯನ್ನು ಮೆರೆಯುವ ಮೂಲಕ ಗಮನಸೆಳೆದಿದ್ದಾರೆ.
Before filing my nomination papers, prayed at the temple of Bhagwan Kaal Bhairav, also revered as the Kotwal of Kashi. pic.twitter.com/AuEy9GjHQO
— Chowkidar Narendra Modi (@narendramodi) April 26, 2019
ನಾಮಪತ್ರ ಸಲ್ಲಿಕೆಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ‘ಕಾಶಿಯ ಕೊತ್ವಾಲ’ ಎಂದೇ ಹೆಸರುವಾಸಿಯಾಗಿರುವ ವಾರಣಾಸಿಯಲ್ಲಿರುವ ಪುರಾಣ ಪ್ರಸಿದ್ಧ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.