ಆರೇಮಲ್ಲಾಪುರದಲ್ಲಿ ಶರಣಬಸವೇಶ್ವರ ದೇಗುಲ ನಿರ್ಮಾಣ


Team Udayavani, Apr 26, 2019, 1:32 PM IST

26-April-22

ದೇವಸ್ಥಾನದ ಮಾದರಿ

ಕಲಬುರಗಿ: ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಶರಣಬಸವೇಶ್ವರರ 108 ಮೂರ್ತಿಗಳ ಪ್ರತಿಷ್ಠಾಪನೆ, ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೇಮಲ್ಲಾಪುರ ಶರಣಬಸವೇಶ್ವರ ಆಶ್ರಮದ ಪೀಠಾಧಿಪತಿ ಶ್ರೀ ಪ್ರಣವಾನಂದ ರಾಮಸ್ವಾಮಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದ ಗರ್ಭಗುಡಿಯಲ್ಲಿ ಆರೂವರೆ ಅಡಿ ಎತ್ತರದ ಶರಣಬಸವೇಶ್ವರ ಮೂರ್ತಿ ಮತ್ತು ಎರಡು ಬದಿಯಲ್ಲಿ ಎರಡು ಅಡಿ ಎತ್ತರದ 107 ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈಗಾಗಲೇ ದೇವಸ್ಥಾನ ನಿರ್ಮಾಣದ ಶೇ.60ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.

ಮೂರ್ತಿಗಳ ನಿರ್ಮಾಣಕ್ಕೆ ಕೇರಳದಿಂದ ಶಿಲೆ ತರಿಸಲಾಗುತ್ತಿದೆ. 2020ರೊಳಗೆ ದೇವಸ್ಥಾನ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ. ದೇವಸ್ಥಾನ ಉದ್ಘಾಟನೆ ದಿನ ಕಲಬುರಗಿಯಿಂದ ಆರೇಮಲ್ಲಾಪುರಕ್ಕೆ ಜ್ಯೋತಿ ತೆಗೆದುಕೊಂಡು ಹೋಗಲಾಗುತ್ತದೆ. ಭಕ್ತಾದಿಗಳು ತನು-ಮನ-ಧನದಿಂದ ಸಹಾಯ, ಸಹಕಾರ ನೀಡಿದಲ್ಲಿ ಇನ್ನುಳಿದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು ಎಂದರು.

ಆರೇಮೆಲ್ಲಾಪುರ ಗ್ರಾಮದಲ್ಲಿ 60 ವರ್ಷ ಹಿಂದೆ ಗ್ರಾಮಸ್ಥರು ಶರಣಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಮಾಡಿ, ಕಲಬುರಗಿ ಶರಣಬಸವೇಶ್ವರ ದೇವಸ್ಥಾನದ ಪರಂಪರೆಯಂತೆ ಪೂಜಾ ವಿಧಿ ವಿಧಾನಗಳನ್ನು ಮಾಡುತ್ತಾ ಬಂದಿದ್ದರು. 2010ರಲ್ಲಿ ಶರಣಬಸವೇಶ್ವರ ಮಹಾಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ಆರ್ಶೀವಾದದಿಂದ ಮತ್ತು ಗ್ರಾಮದ ಭಕ್ತರ ಕೋರಿಕೆಯಂತೆ ಆಶ್ರಮ ಪೀಠಾಧಿಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಆಶ್ರಮದಲ್ಲಿ ಸಾಮೂಹಿಕ ವಿವಾಹ, ದಾಸೋಹ, ಭಜನೆ, ಪುರಾಣ ಪ್ರವಚನ, ಸದ್ಭಾವನ ಪಾದಯಾತ್ರೆ ಮತ್ತು ದೈನಂದಿನ ಪೂಜೆ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಆರೇಮಲ್ಲಾಪುರ ಗ್ರಾಮದ ಭಾವನ್ಮಠದ ಜಗನ್ನಾಥದಾಸ ಸರಸ್ವತಿ, ಮಂಜಪ್ಪ ಮಣಪುರ, ಶ್ರೀರಾಮ ಸೇನೆ ಮುಖಂಡ ಮಲ್ಲಿಕಾರ್ಜುನ ಧೋಳೆ ಇದ್ದರು.

ಮಗುವಿಗೆ ನಾಮಕರಣ
ಶರಣಬಸವೇಶ್ವರ ದೇವಸ್ಥಾನದಲ್ಲಿ ತಾವು 2015ರಲ್ಲಿ ಮೀರಾ ಅವರನ್ನು ಪಾಣಿಗ್ರಹಣ (ವಿವಾಹ) ಮಾಡಿಕೊಂಡಿದ್ದು, 2018ರ ನ.28ರಂದು ಪುತ್ರರತ್ನ ಪ್ರಾಪ್ತಿಯಾಯಿತು. ಬುಧವಾರ ಡಾ| ಶರಣಬಸವಪ್ಪ ಅಪ್ಪ ಅವರು ಮಗುವಿಗೆ ಶರಣಬಸವ ವೇದಪ್ರಕಾಶ ಎಂದು ನಾಮಕರಣ ಮಾಡಿದರು. ಜತೆಗೆ ಆಶ್ರಮದ ಉತ್ತರಾಧಿಕಾರಿಯೆಂದು ಘೋಷಿಸಲಾಯಿತು. ಪತ್ನಿ ಮೀರಾ ಐಎಎಸ್‌ ಪ್ರಿಲಿಮ್ನರಿ ಪರೀಕ್ಷೆ ತೇರ್ಗಡೆಗೊಂಡಿದ್ದು, ಮುಖ್ಯ ಪರೀಕ್ಷೆ ತಯಾರಿಯಲ್ಲಿದ್ದಾರೆ ಎಂದು ಶ್ರೀ ಪ್ರಣವಾನಂದ ರಾಮಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.