ಗಣಿಗಾರಿಕೆಗೆ ಕಡಿವಾಣ ಹಾಕದಿದ್ದರೆ ಹೋರಾಟ

ತಾಲೂಕಿನ ವಿವಿಧೆಡೆ ಅಕ್ರಮ ಗಣಿಗಾರಿಕೆ ಮೌನಕ್ಕೆ ಶರಣಾದ ಅಧಿಕಾರಿಗಳ ವಿರುದ್ಧ ಗಣಿಗಾರಿಕೆ ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶ

Team Udayavani, Apr 26, 2019, 3:00 PM IST

mandya-tdy-1..

ಶ್ರೀರಂಗಪಟ್ಟಣ: ತಾಲೂಕಿನ ವಿವಿಧೆಡೆ ಅನ ಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿದ್ದರೂ ಸಂಬಂಧಿ ಸಿದ ಅಧಿಕಾರಿಗಳು ಕಡಿವಾಣ ಹಾಕದೆ ಜಾಣ ಮೌನ ವಹಿಸಿರುವುದು ಗಣಿಗಾರಿಕೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಅನುಮಾನ ಉಂಟು ಮಾಡಿದೆ.

ತಾಲೂಕಿನ ಟಿಎಂ.ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಿಯಾಲ-ಆಲಗೂಡು ರಸ್ತೆಯ ಜಕ್ಕನಹಳ್ಳಿ, ಕಾಳೇನಹಳ್ಳಿ ಶೆಡ್ಡು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಬಳಿ ಪರವಾನಗಿ ಇಲ್ಲದೆ ಅನಧಿಕೃತ ಕ್ರಷರ್‌ಗಳು ತಲೆ ಎತ್ತಿದ್ದರೂ ಅಧಿಕಾರಿಗಳು ಕಂಡರೂ ಕಾಣದಂತಿರುವುದು ಅನುಮಾನಕ್ಕೆಡೆ ಮಾಡಿಕೊಟ್ಟಿದೆ.

ಸುರಂಗದ ಮೇಲ್ಭಾಗದಲ್ಲಿ ಕ್ರಷರ್‌: ಮಳವಳ್ಳಿಗೆ ಹೋಗುವ ವಿ.ಸಿ.ನಾಲೆಯ ಸಂಪರ್ಕ ನಾಲೆಯ ಸುರಂಗದ ಬಳಿಯಲ್ಲೇ ನಂದಿಶ್‌ಗೆ ಸೇರಿದ ಎಂ.ಸ್ಯಾಂಡ್‌ ಘಟಕ ತಲೆ ಎತ್ತಿದ್ದು ಅದರ ಕೆಳಭಾಗದಲ್ಲಿ ಸುರಂಗ ಹಾದು ಹೋಗಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ಸುರಂಗಕ್ಕೆ ಧಕ್ಕೆಯಾದರೆ ಯಾರು ಹೊಣೆ?

ಅಧಿಕಾರಿಗಳ ವೈಫ‌ಲ್ಯ: ಅನೇಕ ಬಾರಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮನವಿ ಸಲ್ಲಿಸಿದರೂ, ಜಿಲ್ಲಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ , ಜಿಲ್ಲಾ ಹಾಗೂ ತಾಲೂಕು ಮಟ್ಟದ ಅರಣ್ಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಲು ವಿಫ‌ಲರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಜೆಲ್ಲಿ ಕ್ರಷರ್‌ ಹಾಗೂ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಹಂಗರಹಳ್ಳಿ, ಮುಂಡುಗದೊರೆ, ನೀಲನಕೊಪ್ಪಲು, ಕಾಳೇನಹಳ್ಳಿ ವ್ಯಾಪ್ತಿಯಲ್ಲಿರುವ ಗಣಿಗಾರಿಕೆ ನಡೆಸುವಾಗ ಬಾರಿ ಸಿಡಿಮದ್ದು ಸೇರಿದಂತೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ಅಕ್ಕಪಕ್ಕದ ಗ್ರಾಮಗಳ ಮನೆ ಗೋಡೆ ಬಿರುಕು ಬಿಟ್ಟಿರುವ ಬಗ್ಗೆ ವರದಿ ಬಂದಿದ್ದರೂ ಅಧಿಕಾರಿಗಳು ಕಡಿವಾಣ ಹಾಕುವಲ್ಲಿ ವಿಫ‌ಲರಾಗಿದ್ದಾರೆ.

ಎಚ್ಚರಿಕೆ: ಟಿ.ಎಂ.ಹೊಸೂರು, ಕಾಳೇನಹಳ್ಳಿ, ಹಂಗರಳ್ಳಿ , ಗಣಂಗೂರು, ಸೇರಿದಂತೆ ಇತರ ಗ್ರಾಮದ ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಹಲವು ಬಾರಿ ಜಿಲ್ಲಾಧಿಕಾರಿ, ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈಗಲಾದರೂ ಎಚ್ಚೆತ್ತು ಕ್ರಮ ವಹಿಸಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜೇಶ್‌ಗೌಡ ಎಚ್ಚರಿಸಿದರು.

ಟಾಪ್ ನ್ಯೂಸ್

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.