ಕುಡಿಯಲು ಎಡದಂಡೆ ಕಾಲುವೆಗೆ ನೀರು
•ಆಲಮಟ್ಟಿಯಿಂದ ಬಸವಸಾಗರ ಜಲಾಶಯಕ್ಕೆ 6700 ಕ್ಯೂಸೆಕ್ ನೀರು ಬಿಡುಗಡೆ
Team Udayavani, Apr 26, 2019, 3:04 PM IST
ನಾರಾಯಣಪುರ: ಬಸವಸಾಗರ ಜಲಾಶಯದ ಹಿನ್ನೀರು (ಸಂಗ್ರಹ ಚಿತ್ರ).
ನಾರಾಯಣಪುರ: ನಾರಾಯಣಪುರ ಬಸವಸಾಗರ ಜಲಾಶಯದಿಂದ 1.50 ಟಿಎಂಸಿ ಅಡಿ ನೀರನ್ನು ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ (ಎನ್‌ಎಲ್ಬಿಸಿ) ಮೂಲಕ ಹರಿಸಲಾಗುತ್ತಿದೆ ಎಂದು ಅಣೆಕಟ್ಟು ಗೇಟ್ಸ್ ಉಪವಿಭಾಗದ ಎಇಇ ಆರ್.ಎಲ್. ಹಳ್ಳೂರ ತಿಳಿಸಿದ್ದಾರೆ.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ತುಷಾರ್ ಗಿರಿನಾಥ್ ಅವರು ಆಲಮಟ್ಟಿ ಮತ್ತು ನಾರಾಯಣಪುರ ವೃತ್ತಗಳ ಅಧೀಕ್ಷಕ ಅಭಿಯಂತರರೊಂದಿಗೆ ಸಭೆ ನಡೆಸಿ ತಾಂತ್ರಿಕ ಅಭಿಪ್ರಾಯ ಪಡೆದು ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಸೂಚಿಸಿದಂತೆ ಆಲಮಟ್ಟಿ ಜಲಾಶಯದಿಂದ ಜನ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕೆ ನಾರಾಯಣಪುರ ಜಲಾಶಯಕ್ಕೆ ಹಾಗೂ ವಿವಿಧ ಏತ ನೀರಾವರಿ ಯೋಜನೆಗಳ ಕಾಲುವೆ ಜಾಲಗಳಡಿ ಬರುವ ಕೆರೆಗಳು, ಬಾಂದಾರುಗಳಿಗೆ ನೀರು ಹರಿಸಲಾಗುತ್ತಿದೆ. ಅದರಂತೆ ಏ.23ರಂದು ಬೆಳಗ್ಗೆ 11:00ರಿಂದ ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ 6700 ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಬಸವಸಾಗರಕ್ಕೆ ಹಿನ್ನೀರು ಹರಿದು ಬಂದ ಹಿನ್ನೆಲೆಯಲ್ಲಿ ಆದೇಶದಲ್ಲಿನ ಸೂಚನೆಯಂತೆ ಏ.24ರಂದು ಬೆಳಗ್ಗೆ 8:00ರಿಂದ ನಾರಾಯಣಪುರದ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ಆರಂಭಿಸಲಾಗಿದೆ ಎಂದು ಹಳ್ಳೂರ ತಿಳಿಸಿದ್ದಾರೆ.
ಶಾಖಾ ಕಾಲುವೆಗಳ ಮೂಲಕ ನೀರು: ಜಲಾಶಯ ಅವಲಂಬಿತ ನಗರ-ಪಟ್ಟಣಗಳಿಗೆ ಮುಖ್ಯ ಕಾಲುವೆ ಮೂಲಕ 1.50 ಟಿಎಂಸಿ ಅಡಿ ನೀರು ಹರಿಸಲು ನಿಗದಿ ಮಾಡಲಾದ ಪ್ರಮಾಣದಲ್ಲಿ ಅರ್ಧ ಟಿಎಂಸಿ ಅಡಿ ನೀರನ್ನು ಶಹಾಪುರ ಶಾಖಾ ಕಾಲುವೆ ಮೂಲಕ ಹರಿಸಲಾಗುತ್ತದೆ. ನಂತರದಲ್ಲಿ ಕಲಬುರಗಿ ನಗರಕ್ಕೆ ಅರ್ಧ ಟಿಎಂಸಿ ಅಡಿ ನೀರು ನಿಗದಿ ಮಾಡಲಾಗಿದೆ. ಅದನ್ನು ಜೇವರ್ಗಿ ಶಾಖಾ ಕಾಲುವೆ ಮೂಲಕ ಹರಿಸಲಾಗುತ್ತಿದೆ. ಉಳಿದಂತ ಅರ್ಧ ಟಿಎಂಸಿ ಅಡಿ ಇಂಡಿ ಶಾಖಾ ಕಾಲುವೆ ಮೂಲಕ ಬಳಗಾನೂರು ಕೆರೆಗೆ ನೀರು ಹರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಕಾಲುವೆ ಜಾಲದ ಮೂಲಕ ಬಿಡುಗಡೆ ಮಾಡಲಾದ ನೀರನ್ನು ಕುಡಿಯುವ ನೀರಿನ ಉದ್ಧೇಶಕ್ಕೆ ಮಾತ್ರ ಬಳಸಬೇಕು. ಪೋಲಾಗದಂತೆ ಎಚ್ಚರವಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.
ಜಲಾಶಯದ ಮಟ್ಟ: ಜಲಾಶಯದಲ್ಲಿ ಪ್ರಸ್ತುತ 16.09 ಟಿಎಂಸಿ ಅಡಿ ನೀರು ಸಂಗ್ರಹ ಇದೆ. ಆಲಮಟ್ಟಿ ಜಲಾಶಯದಿಂದ ಒಳಹರಿವು 6700 ಕ್ಯೂಸೆಕ್ ಇದೆ. ಹೊರಹರಿವು 1335 ಕ್ಯೂಸೆಕ್ (ಎಡದಂಡೆ ಮುಖ್ಯ ಕಾಲುವೆ) ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.