ದಸರಾ ಆನೆ ದ್ರೋಣ ಸಾವು
Team Udayavani, Apr 27, 2019, 5:00 AM IST
ಹುಣಸೂರು/ಗೋಣಿಕೊಪ್ಪಲು: ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಮೆರವಣಿಗೆಯ ಆಕರ್ಷಣೆಯಾಗಿದ್ದ ಆನೆ ದ್ರೋಣ, ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾನೆ. ದ್ರೋಣನಿಗೆ 37 ವರ್ಷ ವಯಸ್ಸಾಗಿತ್ತು.
ತಿತಿಮತಿ, ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದಲ್ಲಿ ಆರು ವರ್ಷಗಳಿಂದ ವಾಸವಾಗಿದ್ದ ದ್ರೋಣ, 2017 ಮತ್ತು 2018ರಲ್ಲಿ ಎರಡು ಬಾರಿ ದಸರಾದಲ್ಲಿ ಭಾಗವಹಿಸಿದ್ದ. ಶುಕ್ರವಾರ ಬೆಳಗ್ಗೆ ಶಿಬಿರದ ನೀರಿನ ತೊಟ್ಟಿಯಲ್ಲಿ ದಾಹ ನೀಗಿಸಿಕೊಂಡ ನಂತರ ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಆನೆಯ ಶವಪರೀಕ್ಷೆ ಶನಿವಾರ ಬೆಳಗ್ಗೆ ನಡೆಯಲಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವೈದ್ಯರಾದ ಡಾ| ನಾಗರಾಜ್ ತಿಳಿಸಿದ್ದಾರೆ. 2014ರಲ್ಲಿ ನಾಗರಹೊಳೆ ಅಭಯಾರಣ್ಯದ ಹಾಸನ ಜಿಲ್ಲೆಯ ಆಲೂರು ವ್ಯಾಪ್ತಿಯಲ್ಲಿ ಪುಂಡಾಟ ನಡೆಸಿದ್ದ ದ್ರೋಣನನ್ನು ಸೆರೆ ಹಿಡಿದು ಮತ್ತಿಗೋಡು ಆನೆ ಶಿಬಿರಕ್ಕೆ ಕರೆತರಲಾಗಿತ್ತು.
ನಂತರ ಸಂಯಮದ ತರಬೇತಿ ನೀಡಿ ಪಳಗಿಸಲಾಗಿತ್ತು. ದ್ರೋಣನನ್ನು ರವಿ ಮತ್ತು ಗುಂಡು ಎಂಬ ಮಾವುತ, ಕಾವಾಡಿಗಳು ಆರೈಕೆ ಮಾಡುತ್ತಿದ್ದರು. ನಂತರ ದ್ರೋಣ ಶಿಬಿರದ ಖಾಯಂ ನಿವಾಸಿಯಾಗಿದ್ದ. ಕಳೆದ ಬಾರಿ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಗಮನ ಸೆಳೆದಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.