ವ್ಹೀಲಿಂಗ್‌ಗೆ ಮೊದಲು ಹೆತ್ತರವ ಬಗ್ಗೆ ಯೋಚಿಸಿ

Team Udayavani, Apr 28, 2019, 3:00 AM IST

wheeli

ಕೆ.ಆರ್‌.ಪುರ: ವ್ಹೀಲಿಂಗ್‌ ಹಾಗೂ ಡ್ರಾಗ್‌ ರೇಸ್‌ ಮಾಡುವ ಯುವಕರು, ಒಂದು ಕ್ಷಣ, ಹೆತ್ತವರ ಬಗ್ಗೆ ಯೋಚಿಸಬೇಕು ಎಂದು ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿ ಅಬ್ದುಲ್‌ ಅಹದ್‌ ಹೇಳಿದರು.

ಇಲ್ಲಿನ ಸಿಲಿಕಾನ್‌ ಸಿಟಿ ಕಾಲೇಜಿನಲ್ಲಿ ಕೆ.ಆರ್‌.ಪುರ ಪೊಲೀಸ್‌ ಠಾಣೆಯಿಂದ ಆಯೋಜಿಸಿದ್ದ ವ್ಹೀಲಿಂಗ್‌ ಮಾಡುವವರ ಮನಪರಿವರ್ತನಾ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಮ್ಮ ಶೋಕಿಗಾಗಿ ತಂದೆ-ತಾಯಿಯನ್ನು ಬೀದಿಗೆ ತರುವುದು ಸರಿಯೇ ಎಂದು ಪ್ರಶ್ನಿಸಿದರು. ಅಲ್ಲದೆ, ಬೆಂಗಳೂರಲ್ಲಿ ಕಳೆದ ವರ್ಷ 685 ಮಂದಿ ದ್ವಿಚಕ್ರ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪೈಕಿ 150 ಜನ ವ್ಹೀಲಿಂಗ್‌ನಿಂದ ಸಾವನ್ನಪ್ಪಿದ್ದಾರೆ ಎಂದರು.

ವ್ಹೀಲಿಂಗ್‌ ಮಾಡುವುದರಿಂದ ಯಾರೂ ಹೀರೋಗಳಾಗಬಹುದು ಎಂದು ತಿಳಿದಿದ್ದರೆ ಅದು ನಿಮ್ಮ ತಪ್ಪು ಕಲ್ಪನೆ. ನಿಜವಾದ ಹೀರೋಗಳಾಗಬೇಕೆಂದರೆ ಪೊಲೀಸ್‌, ಸೇನೆ, ಎನ್‌ಸಿಸಿಗೆ ಸೇರಿ. ದ್ವಿಚಕ್ರ ವಾಹನ ಚಾಲನೆಯಲ್ಲೇ ಖ್ಯಾತಿ ಗಳಿಸಬೇಕೆಂಬ ಹಂಬಲವಿದ್ದರೆ, ವೃತ್ತಿಪರ ರೇಸಿಂಗ್‌ ಆಯ್ಕೆ ಮಾಡಿಕೊಳ್ಳಿ. ಅಲ್ಲಿ ಸುರಕ್ಷತೆ ಇರುತ್ತದೆ ಎಂದು ತಿಳಿಸಿದರು.

ಮುಸ್ಲಿಂ ಯುವಕರೇ ಹೆಚ್ಚು: ವ್ಹೀಲಿಂಗ್‌ ವಿರುದ್ಧ ನಾವು ನಡೆಸಿದ ಕಾರ್ಯಾಚರಣೆಯಲ್ಲಿ ಬಹುತೇಕ ಮುಸ್ಲಿಂ ಯುವಕರೇ ಸಿಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಮುದಾಯದ ಯುವಕರಲ್ಲಿ ಜಾಗೃತಿ ಮೂಡಿಸಲು ಸುತ್ತಮುತ್ತಲಿನ ಎಲ್ಲ ಮಸೀದಿಗಳ ಆಡಳಿತ ಮಂಡಳಿ ಸದಸ್ಯರು, ಸ್ವಯಂ ಸೇವಕರು ಸಹಕಾರ ನೀಡಬೇಕು. ನಾವು ಈ ಹಿಂದೆ ಡ್ರಗ್ಸ್‌ ಹಾವಳಿ ವಿರುದ್ಧ ನಡೆಸಿದ್ದ ಚಳವಳಿ ಮಾದರಿಯಲ್ಲೆ ವ್ಹೀಲಿಂಗ್‌ ವಿರುದ್ಧವೂ ಚಳವಳಿ ನಡೆಸಬೇಕಿದೆ ಎಂದು ಡಿಸಿಪಿ ಅಬ್ದುಲ್‌ ಅಹದ್‌ ಹೇಳಿದರು.

ಮಕ್ಕಳ ಸಹಾಯವಾಣಿಯ ಹಿರಿಯ ಸಮಾಲೋಚಕಿ ಪ್ರೀತಿ ಬಾಳಿಗಾ, ಯುವಕರೊಂದಿಗೆ ಸಂವಾದ ನಡೆಸಿದರು. ಜಮೀಯತ್‌ ಉಲೇಮಾ ಬೆಂಗಳೂರು ನಗರ ಜಿಲ್ಲೆಯ ಅಧ್ಯಕ್ಷ ಮೌಲಾನ ಮುಫ್ತಿ ಮುಹಮ್ಮದ್‌ ಹುಸೇನ್‌, ಕೆ.ಆರ್‌.ಪುರ ಠಾಣೆ ಇನ್‌ಸ್ಪೆಕ್ಟರ್‌ ಜಯರಾಜ್‌, ವೈಟ್‌ಫೀಲ್ಡ್‌ ಉಪ ವಿಭಾಗದ ಎಸಿಪಿ ರವಿಶಂಕರ್‌, ಸಿಲಿಕಾನ್‌ ಸಿಟಿ ಕಾಲೇಜು ಪ್ರಾಂಶುಪಾಲ ಜ್ಞಾನೇಶ್‌ ಇತರರು ಉಪಸ್ಥಿತರಿದ್ದರು.

9 ತಿಂಗಳು ತನ್ನ ಗರ್ಭದಲ್ಲಿರಿಸಿಕೊಂಡು, ನಿಮಗೆ ಯಾವುದೇ ತೊಂದರೆ ಆಗದಂತೆ ಕಾಪಾಡುವ ತಾಯಿಯನ್ನು ರಸ್ತೆ ಪಕ್ಕದಲ್ಲಿ ಕೂರಿಸಿ ಆಕೆಯ ಮುಂದೆ ಒಂದು ಬಾರಿ ವ್ಹೀಲಿಂಗ್‌ ಮಾಡಿ. ಆಕೆಯ ಕರುಳು ಕಿತ್ತು ಬರುತ್ತದೆ.
-ಅಬ್ದುಲ್‌ ಅಹದ್‌, ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.