ಕಾಲು ಸಂಕ: 23.50 ಲಕ್ಷ ರೂ. ಅನುದಾನ ಬಿಡುಗಡೆ

Team Udayavani, Apr 28, 2019, 6:06 AM IST

33

ಜಾಲ್ಸೂರು: ಜಾಲ್ಸೂರು ಬೇರ್ಪಡ್ಕ ನಿವಾಸಿಗಳ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಬೇರ್ಪಡ್ಕ ಪರಿಸರದಲ್ಲಿ ಹರಿಯುವ ತೋಡಿಗೆ ಕಾಲು ಸಂಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದೆ. ಜಾಲ್ಸೂರು-ಸುಬ್ರಹ್ಮಣ್ಯ ರಸ್ತೆಯ ಬೇರ್ಪಡ್ಕ ತೋಡಿಗೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರ ವಿಶೇಷ ಅನುದಾನದಲ್ಲಿ 23.50 ಲಕ್ಷ ರೂ. ವೆಚ್ಚದಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಕಾಮಗಾರಿ ಆರಂಭಗೊಳ್ಳಲಿದೆ. ಸಿದ್ಧತೆಗಳು ಪ್ರಗತಿಯಲ್ಲಿವೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಅಗ್ರಿಮೆಂಟ್ ಲಭಿಸಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎನ್ನುವ ಮಾಹಿತಿಯನ್ನು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಬೇರ್ಪಡ್ಕದಲ್ಲಿ ತೋಡಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ನಿರ್ಮಿಸುವಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಸಹಿತ ಹಲವು ಇಲಾಖೆಗೆ ಮನವಿ ಪತ್ರ ಬರೆಯಲಾಗಿತ್ತು. 2016ರಲ್ಲಿ ದ.ಕ. ಜಿಲ್ಲಾಧಿಕಾರಿಗೆ ಹಾಗೂ ಪ್ರಧಾನಿ ಕಾರ್ಯಾಲಯಕ್ಕೆ ಪತ್ರ ಬರೆದು ಸೂಚಿಸಲಾಗಿತ್ತು. 2017ರಲ್ಲಿ ರಾಜ್ಯದ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದರು. ಯೋಜನಾ ಇಲಾಖೆಯಿಂದ ಎಂಜಿನಿಯರ್‌ ಇಲಾಖೆಗೆ ಪ್ರತಿ ಕಳುಹಿಸಲಾಗಿತ್ತು. ವರದಿ ಪರಿಶೀಲಿಸಿದ ಎಂಜಿನಿಯರ್‌ ಇಲಾಖೆ ಹೆಚ್ಚುವರಿ ಅನುದಾನ ಕೋರಿ ಸರಕಾರಕ್ಕೆ ವರದಿ ಸಲ್ಲಿಸಿತ್ತು. ಕೊನೆಗೂ ಜನರ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿದೆ. ಕಾಲು ಸಂಕ ನಿರ್ಮಾಣಕ್ಕೆ ಅನುಮೋದನೆ ಲಭಿಸಿದೆ.

ಕಾಲು ಸಂಕ ಕಾಮಗಾರಿಗೆ ಚಾಲನೆ
ಜಾಲ್ಸೂರು ಗ್ರಾಮದ ಬೇರ್ಪಡ್ಕದಲ್ಲಿ ಕಾಲು ಸಂಕ ನಿರ್ಮಾಣಕ್ಕೆ ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು ಅವರು ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ ಗೋಪಾಲಕೃಷ್ಣ ಭಟ್ ಬೇರ್ಪಡ್ಕ, ಪ್ರೇಮ ಕುರ್ಮಾರ್‌, ಮನೋಹರ, ಪುಷ್ಪಾ ಬೇರ್ಪಡ್ಕ, ಕುಮಾರ ಸುಬ್ರಹ್ಮಣ್ಯ ಬೇರ್ಪಡ್ಕ, ಲಿಂಗಪ್ಪ ಗೌಡ ಗಬ್ಬಲಡ್ಕ, ಪ್ರವೀಣ ಬೇರ್ಪಡ್ಕ, ಸುಜಾತಾ ಬೇರ್ಪಡ್ಕ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಲ್ಸೂರಿನ ಬೇರ್ಪಡ್ಕದಲ್ಲಿ 25ಕ್ಕಿಂತ ಹೆಚ್ಚು ಮನೆಗಳಿವೆ. ಈ ಭಾಗದ ನಿವಾಸಿಗಳು ದಿನನಿತ್ಯ ಕೆಲಸ-ಕಾರ್ಯಗಳಿಗೆ ತೆರಳಲು ತೋಡು ದಾರಿಯನ್ನೆ ಅವಲಂಬಿಸಿದ್ದಾರೆ. ತೋಡಿಗೆ ಅಡ್ಡಲಾಗಿ ಅಡಿಕೆ ಪಾಲ ನಿರ್ಮಿಸಲಾಗಿದೆ. ಶಾಲಾ ಮಕ್ಕಳು, ಹಿರಿಯರು, ಮಹಿಳೆಯರು, ಅಡಿಕೆ ಪಾಲದಲ್ಲಿಯೇ ಓಡಾಡುತ್ತಿದ್ದಾರೆ. ನಡೆಯುವಾಗ ನಿಯಂತ್ರಣ ತಪ್ಪಿದರೆ ಅಪಾಯ ಖಚಿತ. ಮಳೆಗಾಲದಲ್ಲಂತೂ ಜನರ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು.

ಸ್ಥಳೀಯ ನಿವಾಸಿ ಗೋಪಾಲಕೃಷ್ಣ ಭಟ್ ಬೈತಡ್ಕ ಅವರು ಪ್ರಧಾನಿಗೆ ಬರೆದ ಮನವಿ ಪತ್ರದ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಕಾರ್ಯಾಲಯದಿಂದ ರಾಜ್ಯ ಸರಕಾರಕ್ಕೆ ಸೂಚನೆ ಕಳುಹಿಸಲಾಗಿತ್ತು. ಅನುದಾನ ಕೊರತೆ ಮುಂದಿಟ್ಟುಕೊಂಡು ಸರಕಾರ ಕ್ರಮ ಕೈಗೊಳ್ಳಲಿಲ್ಲ ಎಂದು ದೂರಲಾಗಿತ್ತು.

ದಶಕಗಳ ವ್ಯಥೆ

ಕೇಂದ್ರದಿಂದ ರಾಜ್ಯ ಸರಕಾರಕ್ಕೆ ಸೂಚನೆ
ಸ್ಥಳೀಯ ನಿವಾಸಿ ಗೋಪಾಲಕೃಷ್ಣ ಭಟ್ ಬೈತಡ್ಕ ಅವರು ಪ್ರಧಾನಿಗೆ ಬರೆದ ಮನವಿ ಪತ್ರದ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಕಾರ್ಯಾಲಯದಿಂದ ರಾಜ್ಯ ಸರಕಾರಕ್ಕೆ ಸೂಚನೆ ಕಳುಹಿಸಲಾಗಿತ್ತು. ಅನುದಾನ ಕೊರತೆ ಮುಂದಿಟ್ಟುಕೊಂಡು ಸರಕಾರ ಕ್ರಮ ಕೈಗೊಳ್ಳಲಿಲ್ಲ ಎಂದು ದೂರಲಾಗಿತ್ತು.

ಶೀಘ್ರ ಕಾಮಗಾರಿ
ಜಾಲ್ಸೂರಿನ ಬೇರ್ಪಡ್ಕದಲ್ಲಿ ಕಾಲು ಸಂಕ ನಿರ್ಮಿಸಲು 23.5 ಲಕ್ಷ ರೂ. ಟೆಂಡರ್‌ ಬಿಡುಗಡೆಗೊಂಡಿದೆ. ಅಗ್ರಿಮೆಂಟ್ ಪ್ರತಿ ಲಭಿಸಿದ ಕೂಡಲೇ ಕಾಮಗಾರಿ ಆರಂಭಿಸಲಿದ್ದೇವೆ.
– ಹರೀಶ್‌, ಎಂಜಿನಿಯರ್‌, ಪಿಡಬ್ಲ್ಯೂಡಿ ಸುಳ್ಯ

•ಶಿವಪ್ರಸಾದ್‌ ಮಣಿಯೂರು

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.