ಬತ್ತಿದ ಕೊಳವೆಬಾವಿಯಲ್ಲಿ ಹೆಚ್ಚಿದ ಸೆಲೆ
Team Udayavani, Apr 28, 2019, 3:32 PM IST
ಕುಷ್ಟಗಿ: ತಾಲೂಕಿನಾದ್ಯಂತ ಬರಗಾಲದ ಪರಿಸ್ಥಿತಿ ಭೀಕರವಾಗಿದ್ದು, ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ತಾಲೂಕಿನ ಹಂಚಿನಾಳ ಗ್ರಾಮದಲ್ಲೂ ಕೆಲ ದಿನಗಳ ಹಿಂದೆ ಇಂತಹದ್ದೇ ಪರಿಸ್ಥಿತಿ ಇತ್ತು. ಆದರೆ ಈಗ ಕೊಳವೆಬಾವಿಗಳಲ್ಲಿ ಗ್ರಾಮಸ್ಥರು ಅಚ್ಚರಿ ಪಡುವಷ್ಟು ನೀರು ಲಭ್ಯವಾಗುತ್ತಿದೆ. ಕೆಲವು ದಿನಗಳ ಹಿಂದೆ ನಿರ್ಮಿಸಿದ ಕೃಷಿ ಹೊಂಡ ಗ್ರಾಮಸ್ಥರ ದಾಹ ತೀರಿಸಿದೆ.
ತಾಲೂಕಿನಲ್ಲಿ ಬರಗಾಲ ತೀವ್ರಗೊಂಡಿದೆ. ಹಂಚಿನಾಳ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿತ್ತು. ಕೆಲ ತಿಂಗಳ ಹಿಂದೆ ಗ್ರಾಮದ ಹೊರವಲಯದ ನಾಲೆಯಲ್ಲಿ ಕೊಳವೆಬಾವಿ ಕೊರೆಯಿಸಿದ್ದು, ಕಡಿಮೆ ಪ್ರಮಾಣದ ಸೆಲೆ ದೊರೆಯಿತು. ಬೇಸಿಗೆ ಇರುವುದರಿಂದ ಕೊಳವೆಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಸಮಸ್ಯೆ ಉಲ್ಭಣಗೊಂಡಿತ್ತು. ಗ್ರಾಮಸ್ಥರು ದೂರದ ಸ್ಥಳಗಳಿಂದ ನೀರು ತರುತ್ತಿದ್ದರು. ಆದರೆ 20 ದಿನಗಳ ಹಿಂದೆ ಗ್ರಾಮ ವ್ಯಾಪ್ತಿಯಲ್ಲಿ ಅಕಾಲಿಕ ಮಳೆ ಸುರಿದಿದೆ. ನಾಲೆಯಲ್ಲಿ ಕೊರೆದಿದ್ದ ಕೊಳವೆಬಾವಿಗೆ ಸಮೀಪ ಕೃಷಿ ಭಾಗ್ಯ ಯೋಜನೆಯಡಿ ಛತ್ರಪ್ಪ ಭಜಂತ್ರಿ ಎಂಬುವವರ ಹೊಲದಲ್ಲಿ 27 ಅಡಿ ಉದ್ದ, 27 ಅಡಿ ಅಗಲ ಹಾಗೂ 10 ಅಡಿ ಆಳದ ಕೃಷಿ ಹೊಂಡ ನಿರ್ಮಿಸಲಾಗಿತ್ತು. ಮಳೆಯಿಂದಾಗಿ ಕೃಷಿ ಹೊಂಡ ಭರ್ತಿಯಾಗಿ, ನಾಲೆಯಲ್ಲೂ ನೀರು ಜಿನುಗಿತು. ಕೃಷಿ ಹೊಂಡ ಭರ್ತಿಯಾಗುತ್ತಿದ್ದಂತೆ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ಕೊಳವೆಬಾವಿಯಲ್ಲಿ ಸೆಲೆ ಹೆಚ್ಚಿದ್ದು, ಅಗತ್ಯ ಪ್ರಮಾಣದ ನೀರು ಲಭ್ಯವಾಗುತ್ತಿದೆ ಎಂದು ಸ್ಥಳೀಯರು ಸಂತಸಗೊಂಡಿದ್ದಾರೆ.
ಗ್ರಾಮದ ಹೊರವಲಯದ ನಾನಾ ಕಡೆ ದಿಬ್ಬದಿಂದ ಮಳೆ ನೀರು ಹರಿದು ಬರುತ್ತದೆ. ಗ್ರಾಮಕ್ಕೆ ಹೊಂದಿಕೊಂಡಿರುವ ನಾಲೆಗೆ ಮಳೆ ನೀರು ಹರಿದು ಬರುತ್ತದೆ. 2018-19ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಗ್ರಾಮ ವ್ಯಾಪ್ತಿಯಲ್ಲಿ 28 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಗ್ರಾಮದ ರೈತ ಅನುವುಗಾರ ರಾಮನಗೌಡ ದುಂಬಾಲು ಬಿದ್ದು ಕೃಷಿ ಹೊಂಡ ನಿರ್ಮಿಸಿಕೊಳ್ಳುವಂತೆ ರೈತರ ಮನವೊಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 28 ಕೃಷಿ ಹೊಂಡಗಳು ನಿರ್ಮಾಣವಾಗಿವೆ. ಇತ್ತೀಚೆಗೆ ಅಕಾಲಿಕ ಮಳೆ ಸುರಿದಾಗ ಎಲ್ಲ ಕೃಷಿ ಹೊಂಡಗಳೂ ತುಂಬಿವೆ. ಜಾನುವಾರುಗಳಿಗೆ ಅಡವಿಯಲ್ಲಿ ಕುಡಿಯಲು ನೀರು ಇಲ್ಲದ ಸ್ಥಿತಿ ಇತ್ತು. ಈಗ ಕೃಷಿ ಹೊಂಡದಲ್ಲಿ ನೀರು ನಿಂತಿರುವುದರಿಂದ ಜಾನುವಾರುಗಳು, ಕುರಿ-ಮೇಕೆಗಳಿಗೆ ನೀರು ದೊರೆಯುತ್ತಿದೆ.
ಈ ವಿಷಯ ತಿಳಿಯುತ್ತಿದ್ದಂತೆ ತಾಪಂ ಇಒ ಬಸಣ್ಣ, ಕೃಷಿ ಸಹಾಯಕ ನಿರ್ದೇಶಕ ವೀರಣ್ಣ ಕಮತರ ಮತ್ತು ಸಿಬ್ಬಂದಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.