ಬಿಸಿಲು ನಾಡಾದ ಮಲೆನಾಡು
Team Udayavani, Apr 29, 2019, 3:00 AM IST
ಶಿವಮೊಗ್ಗ: ಇಲ್ಲಿಯ ಬಿಸಿಲು ಬಯಲು ಸೀಮೆ ಬಳ್ಳಾರಿ ಬಿಸಿಲನ್ನೂ ಮೀರಿಸುವಂತಿದೆ. ಬೆಳಗ್ಗೆ 9 ಗಂಟೆ ಹೊತ್ತಿಗೆ ಆರಂಭವಾಗುವ ಬಿಸಿಲ ಝಳ ಸಂಜೆ 5 ಗಂಟೆಯಾದರೂ ಕಡಿಮೆಯಾಗುತ್ತಿಲ್ಲ. ರಾತ್ರಿ ಕೂಡ ಬಿಸಿ ಗಾಳಿಗೆ ಜನ ಹೈರಾಣಾಗಿದ್ದಾರೆ. ಜಿಲ್ಲೆಯ ಸರಾಸರಿ ಉಷ್ಣಾಂಶ 38.7 ಡಿ.ಸೆ.ಗೆ ತಲುಪಿದರೆ, ಶಿವಮೊಗ್ಗ ನಗರದಲ್ಲಿ ಶನಿವಾರ ಈ ವರ್ಷದ ಗರಿಷ್ಠ ತಾಪಮಾನ 39.5 ಡಿಗ್ರಿ ದಾಖಲಾಗಿದೆ.
ಏ.23ರಿಂದ ಜಿಲ್ಲೆಯ ಸರಾಸರಿ ಉಷ್ಣಾಂಶ ನಿರಂತರವಾಗಿ 38.5 ಡಿ.ಸೆ.ದಾಖಲಾಗುತ್ತಿದೆ. ಒಂದು ಕಾಲದಲ್ಲಿ ಮಲೆನಾಡು ಸದಾ ತಂಪಾಗಿರುತ್ತಿತ್ತು. ವರ್ಷದಲ್ಲಿ ಸತತ ಏಳು ತಿಂಗಳ ಮಳೆ, ಸಮೃದ್ಧ ಹಸಿರು ಹೊದ್ದು ಮಲಗಿರುತ್ತಿದ್ದ ದಟ್ಟ ಅರಣ್ಯದಿಂದ ಎಂತಹ ಬೇಸಿಗೆಯಾದರೂ ವಾತಾವರಣ ತಂಪು ತಂಪಾಗಿರುತ್ತಿತ್ತು. ಈಗ ಪರಿಸ್ಥಿತಿ ತಿರುವು ಮುರುವಾಗಿದೆ. ಮಲೆನಾಡು ಬಿಸಿಲ ನಾಡಾಗಿದೆ.
ವಾಯುಭಾರ ಕುಸಿತದಿಂದ ದಕ್ಷಿಣ ರಾಜ್ಯಗಳಲ್ಲಿ ಬಿಸಿಗಾಳಿ: ವಾಯುಭಾರ ಕುಸಿತವು ವಾತಾವರಣದಲ್ಲಿನ ತೇವಾಂಶ ಸೆಳೆದುಕೊಂಡಿರುವುದರಿಂದ ದಕ್ಷಿಣದ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುತ್ತಿದೆ. ಹೀಗಾಗಿ, ಮೂರ್ನಾಲ್ಕು ದಿನಗಳಿಂದ ಉಷ್ಣಾಂಶ 2ರಿಂದ 4 ಡಿಗ್ರಿಯಷ್ಟು ಏರಿಕೆ ಕಂಡು ಗರಿಷ್ಠ ಮಟ್ಟ ದಾಖಲಿಸಿದೆ. ಆದರೆ, ಚಂಡಮಾರುತದ ಪರಿಣಾಮ ಮಲೆನಾಡು ಪ್ರದೇಶದಲ್ಲಿ ಮೇ 1 ಮತ್ತು 2ರಂದು ಮಳೆಯಾಗುವ ನಿರೀಕ್ಷೆಯಿದೆ ಎನ್ನುತ್ತಾರೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿ ಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.