ರಾಜ್ಯದಲ್ಲಿ ಕಾಂಗ್ರೆಸ್‌ಗೆ 10-11 ಸ್ಥಾನ ಗ್ಯಾರಂಟಿ


Team Udayavani, Apr 29, 2019, 3:10 AM IST

congress-logo

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ರಾಜ್ಯದ ಅಭ್ಯರ್ಥಿಗಳ ಭವಿಷ್ಯ ಬ್ಯಾಲೆಟ್‌ ಬಾಕ್ಸ್‌ನಲ್ಲಿ ಭದ್ರವಾಗಿದೆ. ಆದರೆ, ರಾಜಕೀಯ ಪಕ್ಷಗಳಲ್ಲಿ ಮಾತ್ರ ಸೋಲು-ಗೆಲುವಿನ ಆಂತರಿಕ ಸಮೀಕ್ಷೆ ಪಡೆಯುವ ಪ್ರಕ್ರಿಯೆ ನಿರಂತರವಾಗಿ ನಡೆದಿದೆ.

ರಾಜ್ಯ ಕಾಂಗ್ರೆಸ್‌ ಕೂಡ ಚುನಾವಣೆಯ ಸೋಲು-ಗೆಲುವಿನ ಲೆಕ್ಕಾಚಾರದ ಆಂತರಿಕ ವರದಿಯನ್ನು ಪಡೆದುಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ಗೆ ಮತದಾನದ ನಂತರದ ಆಂತರಿಕ ಸಮೀಕ್ಷೆಯ ವರದಿ ನೀಡಿದ್ದಾರೆಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಹತ್ತರಿಂದ, ಹನ್ನೊಂದು ಕ್ಷೇತ್ರಗಳನ್ನು ಗೆಲ್ಲುವುದು ಖಚಿತ. ಐದರಿಂದ ಆರು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಫಿಪ್ಟಿ-ಫಿಪ್ಟಿ ಇದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಕೆ.ಸಿ.ವೇಣಗೋಪಾಲ್‌ಗೆ ಸಚಿವರು ನೀಡಿರುವ ಮಾಹಿತಿ ಪ್ರಕಾರ ಬೀದರ್‌, ಕಲಬುರಗಿ, ರಾಯಚೂರು, ಕೊಪ್ಪಳ, ಚಿಕ್ಕೋಡಿ, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಚಾಮರಾಜನಗರ ಕ್ಷೇತ್ರಗಳನ್ನು ಗೆಲ್ಲುವುದು ಖಚಿತ.

ಇನ್ನು, ಮೈಸೂರು, ಧಾರವಾಡ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಯ ವರದಿ ನೀಡಿದ್ದರೂ, ಫ‌ಲಿತಾಂಶ ಯಾರ ಕಡೆಯಾದರೂ ಒಲಿಯಬಹುದೆಂಬ ಲೆಕ್ಕಾಚಾರ ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಖರ್ಗೆ ಗೆಲುವು ಖಚಿತ: ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿರುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕನಿಷ್ಠ ಅಂತರದಿಂದಾದರೂ ಗೆಲ್ಲುವುದು ಖಚಿತ ಎಂಬ ಅಭಿಪ್ರಾಯವನ್ನು ರಾಜ್ಯ ನಾಯಕರು ಹೊಂದಿದ್ದು, ಅದನ್ನು ಹೈಕಮಾಂಡ್‌ ಗಮನಕ್ಕೂ ತಂದಿದ್ದಾರೆ ಎನ್ನಲಾಗುತ್ತಿದೆ.

ಈ ಬಾರಿಯ ಚುನಾವಣೆಯಲ್ಲಿಯೂ ಲಿಂಗಾಯತ ಸಮುದಾಯದ ಮತಗಳು ಕಾಂಗ್ರೆಸ್‌ ಕಡೆಗೆ ಬಂದಿರುವ ಬಗ್ಗೆ ಸಚಿವರು ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳಿಗಿಂತ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸಿಗೆ ಹೆಚ್ಚಿನ ಆದ್ಯತೆ ದೊರೆತಿರುವ ಮಾಹಿತಿ ಇದೆ. ಅದೇ ಕಾರಣಕ್ಕೆ ಲಿಂಗಾಯತ ಸಮುದಾಯದ ಮತಗಳು ನಿರೀಕ್ಷಿತ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಬಂದಿರುವುದು ಅನುಮಾನ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಆದರೆ, ಲಿಂಗಾಯತ ಸಮುದಾಯದ ಮತಗಳು ಈ ಬಾರಿ ಕಾಂಗ್ರೆಸ್‌ಗೆ ಗುಪ್ತಗಾಮಿನಿಯಾಗಿ ಹರಿದು ಬಂದಿರುವ ಸಾಧ್ಯತೆ ಇದೆ. ಅದೇ ಕಾರಣದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಸಹಕಾರಿಯಾಗುತ್ತದೆ ಎಂಬ ಅಭಿಪ್ರಾಯವನ್ನು ಕೆಲ ನಾಯಕರು ವ್ಯಕ್ತಪಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ನಾಯಕರು ನೀಡಿರುವ ವರದಿ ಪ್ರಕಾರ, ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದಲ್ಲಿ ಮೈತ್ರಿ ಪಕ್ಷಗಳಿಂದ ಹದಿನೈದರಿಂದ ಹದಿನಾರು ಕ್ಷೇತ್ರಗಳನ್ನು ಗೆಲ್ಲುವ ಲೆಕ್ಕಾಚಾರ ಹಾಕಿಕೊಂಡಿದೆ. ಹದಿನೈದಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ಉತ್ತಮ ಫ‌ಲಿತಾಂಶ ಬಂದಂತೆ ಎನ್ನುವ ಆಲೋಚನೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

3 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ: ರಾಜ್ಯದಲ್ಲಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್‌ ನಾಯಕರು ಜೆಡಿಎಸ್‌ನ ಅಭ್ಯರ್ಥಿಗಳು ಸ್ಪರ್ಧಿಸಿರುವ ಕ್ಷೇತ್ರಗಳ ಗೆಲುವಿನ ಲೆಕ್ಕಾಚಾರವನ್ನೂ ಪಕ್ಷದ ನಾಯಕರ ಗಮನಕ್ಕೆ ತಂದಿದ್ದಾರೆ. ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸಿರುವ ಏಳು ಕ್ಷೇತ್ರಗಳಲ್ಲಿ ತುಮಕೂರು, ಹಾಸನ ಹಾಗೂ ಶಿವಮೊಗ್ಗ ಸೇರಿ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಸಕಾರಾತ್ಮಕ ವರದಿ ನೀಡಿಲ್ಲ ಎಂದು ತಿಳಿದು ಬಂದಿದೆ.

* ಶಂಕರ ಪಾಗೋಜಿ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.