ಹದ ಮಳೆಗೆ ಕೋಟೆಯಲ್ಲಿ ಬಿತ್ತನೆ ಚುರುಕು
Team Udayavani, Apr 30, 2019, 3:00 AM IST
ಎಚ್.ಡಿ.ಕೋಟೆ: ಅರೆ ಮಲೆನಾಡು ಖ್ಯಾತಿಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಎರಡು ಮೂರು ಬಾರಿ ಹದವಾದ ಮಳೆಯಾಗಿರುವ ಹಿನ್ನಲೆಯಲ್ಲಿ ರೈತರು ಕುಟುಂಬ ಸಮೇತರಾಗಿ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಬಿತ್ತನೆ ಕಾರ್ಯದಲ್ಲಿ ತೊಡಗಿ ಕೊಂಡಿರುವ ದೃಶ್ಯಗಳು ತಾಲೂಕಿನಾದ್ಯಂತ ಕಂಡು ಬರುತ್ತಿದ್ದು, ಮಳೆ ಕೊರತೆಯ ನಡುವೆಯೂ ಕೃಷಿ ಚಟುವಟಿಕೆ ಗರಿಗೆದರಿದೆ.
ಮಾರ್ಚ್ ಪ್ರಾರಂಭದಲ್ಲೇ ಪೂರ್ವ ಮುಂಗಾರು ಮಳೆ ಅಗಮಿಸದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದರು. ತಡವಾದರೂ ಕಡೆಗೆ ಏಪ್ರಿಲ್ ಎರಡನೇ ವಾರದಲ್ಲೇ ಪೂರ್ವ ಮುಂಗಾರು ಮಳೆ ಭರ್ಜರಿಯಾಗಿ ಪ್ರಾರಂಭವಾಗಿ ತಾಲೂಕಿನಾದ್ಯಂತ ಆಗಾಗ ಉತ್ತಮ ಮಳೆಯಾಗುತ್ತಿರುವುದರಿಂದ ಇಲ್ಲಿನ ರೈತರಲ್ಲಿ ಈ ಬಾರಿ ಉತ್ತಮ ಬೆಳೆಯ ಅಶಾಭಾವನೆ ಮೂಡಿಸಿದೆ.
ಹದ ಮಳೆ: ಕಳೆದ ವರ್ಷ ಏಪ್ರಿಲ್ ಕಳೆದರೂ ಮಳೆ ಬಾರದೇ ರೈತರು ಸಂಕಷ್ಟ ಎದುರಿಸಿದ್ದರು. ಈ ಬಾರಿ ಒಂದು ತಿಂಗಳ ಮೊದಲೇ ವರುಣದೇವ ಕೃಪೆಯಿಂದಾಗಿ ತಾಲೂಕಿನ ಕಸಬಾ, ಹಂಪಾಪುರ ಹೋಬಳಿ ಹೊರತುಪಡಿಸಿ ಇನ್ನುಳಿದ ಹೋಬಳಿ ವ್ಯಾಪ್ತಿಯಲ್ಲಿ ಆಗಾಗ ಹದ ಉತ್ತಮ ಮಳೆ ಆಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಕೃಷಿ ತಾಂತ್ರಿಕ ಅಧಿಕಾರಿ ಹರೀಶ್ ತಿಳಿಸಿದ್ದಾರೆ.
ಭರ್ಜರಿ ಬೆಳೆ ನಿರೀಕ್ಷೆ: ಈಗಾಗಲೇ ಉತ್ತಮ ಮಳೆಯಾಗಿರುವುದರಿಂದ ಮುಂದೆಯು ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ತಾಲೂಕಿನ ರೈತರು ಭರ್ಜರಿ ಬೆಳೆಯ ನಿರೀಕ್ಷೆಯೊಂದಿಗೆ ಮುಂಜಾನೆಯೇ ತಮ್ಮ ಜಮೀನುಗಳಲ್ಲಿನ ಕೃಷಿ ಚಟುವಟಿಕೆಗಳಲ್ಲಿ ಸಂಭ್ರಮದಿಂದ ತೊಡಗಿಕೊಂಡಿರುವುದನ್ನು ತಾಲೂಕಿನಾದ್ಯಂತ ಕಾಣುತ್ತಿದ್ದೇವೆ.
ಶೇ.13 ಮಳೆ ಕೊರತೆ: ತಾಲೂಕಿನಲ್ಲಿ ಇಲ್ಲಿಯವರೆಗೆ 96.01 ಮಿ.ಮೀ. ಮಳೆಯಾಗಬೇಕಿತ್ತು. ಅದರೆ, ಏ.29 ರ ಸೋಮವಾರದ ವರೆಗೆ 84 ಮಿ.ಮೀ. ಮಳೆಯಾಗಿದ್ದು, ಶೇ.13 ರಷ್ಟು ಮಳೆ ಕೊರತೆ ಕಂಡು ಬಂದಿದೆ.
67,717 ಸಾವಿರ ಹೆಕ್ಟೇರ್ ಗುರಿ: ಈ ವರ್ಷದ ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಕೃಷಿ ಅಧಿಕಾರಿಗಳು 67,717 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಸೇರಿದಂತೆ ವಿವಿಧ ದ್ವಿ-ದಳ ಧಾನ್ಯಗಳ ಬಿತ್ತನೆ ಗುರಿ ಹೊಂದಿದ್ದು, ಈಗಾಗಲೇ ಬಿದ್ದಿರುವ ಮಳೆಗೆ 831 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಗಿದಿದೆ.
ಗೊಬ್ಬರ ದಾಸ್ತಾನು: ರೈತರಿಗೆ ಬೇಕಾದ ರಸ ಗೊಬ್ಬರ ಅಗತ್ಯಕ್ಕಿಂತಲೂ ಹೆಚ್ಚಿನ ದಾಸ್ತನು ಇದ್ದು, ಹಂತ ಹಂತಕ್ಕೆ ಬೇಕಾದ ಕ್ರಿಮಿನಾಶಕ ಕೂಡ ಆಗ್ರೋ ಮಳಿಗೆಗಳಲ್ಲಿ ದಾಸ್ತನು ಇದೆ ಎಂದು ಇಲ್ಲಿನ ಕೃಷಿ ಸಹಾಯಕ ನಿರ್ದೇಶಕರ ಕಚೇರಿ ಮೂಲಗಳಿಂದ ತಿಳಿದು ಬಂದಿದೆ. ತಾಲೂಕಿನ ಭಾಗಶಃ ರೈತರು ಕೂಡ ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಮುಗಿಸಿದ್ದು, ಇಲ್ಲಿನ ರೈತರು ಈ ಬಾರಿ ಉತ್ತಮ ಮಳೆ ಫಲವತ್ತಾದ ಲಾಭದಾಯಕ ಬೆಳೆ ನಿರೀಕ್ಷೆಯಲ್ಲಿದ್ದಾರೆ.
ತಾಲೂಕಿನಲ್ಲಿ ಬಿತ್ತನೆ ಪ್ರಮಾಣ ಎಷ್ಟು?: ಎಚ್.ಡಿ. ಕೋಟೆ ತಾಲೂಕಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಹತ್ತಿ ಬೆಳೆ 500 ಹೆಕ್ಟೇರ್, ತಂಬಾಕು 5 ಸಾವಿರ ಹೆಕ್ಟೇರ್, ಮುಸುಕಿನ ಜೋಳ 3 ಸಾವಿರ ಹೆಕ್ಟೇರ್, ವಿವಿಧ ದ್ವಿ-ದಳ ಧಾನ್ಯಗಳಾದ ಅಲಸಂದೆ 27 ಹೆಕ್ಟೇರ್, ಇತರೆ ದ್ವಿ-ದಳ ಧಾನ್ಯ ಬೆಳೆಗಳಾದ ಹಸಿರು, ಉದ್ದು, ತೊಗರಿ, 12 ಹೆಕ್ಟೇರ್, ನೆಲಗಡಲೆ 50 ಹೆಕ್ಟೇರ್, ಎಳ್ಳು 500 ಹೆಕ್ಟೇರ್ ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಕಾರ್ಯ ಮುಗಿದಿದೆ. ತಾಲೂಕಿನಲ್ಲಿ ಆಗಾಗ ಮಳೆ ಸುರಿಯುತ್ತಿದ್ದು, ರೈತರು ಈ ಬಾರಿ ಭರ್ಜರಿ ಮುಂಗಾರು ಬೆಳೆಯ ನಿರೀಕ್ಷೆಯಲ್ಲಿದ್ದಾರೆ.
ಎರಡ್ಮೂರು ದಿನದಲ್ಲಿ ಉತ್ತಮ ಮಳೆ: ಈ ಬಾರಿ ಕಳೆದ ವರ್ಷಕ್ಕಿಂತ ಪೂರ್ವ ಮುಂಗಾರು ತಾಲೂಕಿನಲ್ಲಿ ಪ್ರಾರಂಭವಾಗಿಲ್ಲ. ಇದುವರೆಗೆ 96.01 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು, ಅದರೆ ಏ.29 ರ ಸೋಮವಾರದವರೆಗೆ 84 ಮಿ.ಮೀ. ಮಳೆಯಾಗಿದ್ದು, ಶೇ.13ರಷ್ಟು ಮಳೆ ಕೊರತೆ ಉಂಟಾಗಿದೆ. ತಾಲೂಕಿನ ರೈತರು ಕೂಡ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಇನ್ನು ಎರಡು ಮೂರು ದಿನದಲ್ಲಿ ಉತ್ತಮ ಮಳೆಯ ಮುನ್ಸೂಚನೆ ವರದಿಯಾಗಿದ್ದು, ಮುಂದಿನ ಒಂದು ವಾರದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕೃಷಿ ಸಹಾಯಕ ನಿರ್ದೇಶಕ ಜಯರಾಮಯ್ಯ ತಿಳಿಸಿದ್ದಾರೆ.
* ಬಿ.ನಿಂಗಣ್ಣಕೋಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.