ಉಡುಪಿ ಜಿಲ್ಲೆ 11 ಕೇಂದ್ರಗಳಲ್ಲಿ ಸುಗಮ ಸಿಇಟಿ
Team Udayavani, Apr 30, 2019, 6:30 AM IST
ಉಡುಪಿ: ಉಡುಪಿ ಜಿಲ್ಲೆಯ 11 ಕೇಂದ್ರಗಳಲ್ಲಿ ನಡೆಯಲಿರುವ 2019ನೇ ಸಾಮಾನ್ಯ ಪ್ರವೇಶ ಪರೀಕ್ಷೆಯು ಸೋಮವಾರ ಆರಂಭಗೊಂಡಿತು.
ಉಡುಪಿಯ ಪೂರ್ಣಪ್ರಜ್ಞ ಪ.ಪೂ. ಕಾಲೇಜು, ಎಂಜಿಎಂ ಪ.ಪೂ. ಕಾಲೇಜು, ಬಾಲಕಿಯರ ಸರಕಾರಿ ಪ.ಪೂ. ಕಾಲೇಜು, ಸರಕಾರಿ ಪ.ಪೂ. ಕಾಲೇಜು, ವಿದ್ಯೋದಯ ಪ.ಪೂ. ಕಾಲೇಜು, ಮಣಿಪಾಲ ಪ.ಪೂ. ಕಾಲೇಜು, ಕುಂದಾಪುರದ ಸರಕಾರಿ ಪ.ಪೂ. ಕಾಲೇಜು, ಭಂಡಾರ್‌ಕಾರ್ ಪ.ಪೂ. ಕಾಲೇಜು, ಆರ್.ಎನ್.ಶೆಟ್ಟಿ ಕಾಲೇಜು, ಕಾರ್ಕಳದ ಭುವನೇಂದ್ರ ಪ.ಪೂ. ಕಾಲೇಜು, ಸರಕಾರಿ ಕಾಲೇಜುಗಳಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆದವು. ಬೆಳಗ್ಗೆ ಜೀವಶಾಸ್ತ್ರ ಮತ್ತು ಅಪರಾಹ್ನ ಗಣಿತ ಪರೀಕ್ಷೆಗಳು ನಡೆದವು.
ಒಟ್ಟು 4,769 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯನ್ನು ಉಡುಪಿ ಜಿಲ್ಲಾ ಖಜಾನೆಯಿಂದ ಸಂಬಂಧ ಪಟ್ಟ ಪರೀûಾ ಕೇಂದ್ರಗಳಿಗೆ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಂಶುಪಾಲರೊಳಗೊಂಡ ತ್ರಿಸದಸ್ಯ ಸಮಿತಿಯವರು ತೆಗೆದುಕೊಂಡು ಹೋದರು. ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ತಹಶೀಲ್ದಾರರ ಜಿಪಿಎಸ್ ಅಳವಡಿಸಲಾದ ವಾಹನಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸಲಾಯಿತು. ಪರೀûಾ ಕೇಂದ್ರಗಳಿಗೆ ಅಗತ್ಯ ಪೋಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಸಾಮಾನ್ಯ ಪ್ರವೇಶ ಪರೀಕ್ಷೆ ಪರಿಣಾಮಕಾರಿ ಹಾಗೂ ಲೋಪ ರಹಿತವಾಗಿ ನಡೆಸಲು ಜಿಲ್ಲಾಡಳಿತ ತೆಗೆದುಕೊಂಡ ಕ್ರಮದಂತೆ ಯಾವುದೇ ಸಮಸ್ಯೆಗಳಿಲ್ಲದೆ ಪರೀಕ್ಷೆ ನಡೆಯಿತು ಎಂದು ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಸುಬ್ರಹ್ಮಣ್ಯ ಜೋಷಿ ಹೇಳಿದ್ದಾರೆ. ಮಂಗಳವಾರವೂ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.