ಅವೈಜ್ಞಾನಿಕ ಚರಂಡಿ ಕಾಮಗಾರಿ ಸರಿಪಡಿಸಲು ಶಾಸಕರ ಸೂಚನೆ
Team Udayavani, Apr 30, 2019, 6:15 AM IST
ಮಹಾನಗರ: ಲಾಲ್ಬಾಗ್ನಲ್ಲಿರುವ ಮಹಾನಗರ ಪಾಲಿಕೆಯ ಕಟ್ಟಡದ ಎದುರಿನಲ್ಲಿರುವ ಗಾಂಧಿವೃತ್ತದ ಪಾಶ್ವಭಾಗದಲ್ಲಿರುವ (ಮಹಿಳಾ ಹಾಸ್ಟೆಲ್ ಎದುರಿಗೆ) ಮಳೆಯ ನೀರು ಹೋಗುವ ಚರಂಡಿಯ ನಿರ್ಮಾಣ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಅದನ್ನು ನಗರದ ಹಿತದೃಷ್ಟಿಯಿಂದ ಸರಿಪಡಿಸಬೇಕು ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಪ್ರಮುಖ ರಸ್ತೆ ಮತ್ತು ಜಂಕ್ಷನ್ ಅಗಲ ಕಿರಿದಾಗುತ್ತಿದ್ದು, ಆ ಮೂಲಕ ವಾಹನಗಳ ಸರಾಗ ಸಂಚಾರಕ್ಕೆ ತೊಂದರೆಯಾಗಲಿದೆ. ಈ ಬಗ್ಗೆ ಸಾರ್ವ ಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀ ಲಿಸಲಾಗಿದೆ ಎಂದು ಅವರು ಹೇಳಿದರು.
ಅಧಿಕಾರಿಗಳನ್ನು ಕರೆಸಿ ಮಾತನಾಡಿದ ಶಾಸಕರು, ಈ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ತೊಂದರೆ ಆಗಬಾರದು ಎನ್ನುವ ದೃಷ್ಟಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಲಹೆ ಸೂಚನೆ ನೀಡಿದರು.
ಪಾಲಿಕೆಯ ಮಾಜಿ ಸದಸ್ಯ ದಿವಾಕರ ಪಾಂಡೇಶ್ವರ್, ಬಿಜೆಪಿ ಮುಖಂಡ ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.