ಉಪಸಮರ ಫಲಿತಾಂಶ ರಾಜ್ಯರಾಜಕೀಯ ದಿಕ್ಸೂಚಿ: ಶೆಟ್ಟರ್
Team Udayavani, Apr 30, 2019, 11:33 AM IST
ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆ ಮುಂದಿನ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.
ಸೋಮವಾರ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೂತ್ ಮಟ್ಟದವರೆಗೆ ಬೆಳೆದಿರುವ ಕೇಡರ್ ಬೇಸ್ಡ್ ಪಕ್ಷ. ಈ ಹಂತದವರಿಗೆ ತಲುಪಲು ಯಾವ ಪಕ್ಷದಿಂದಲೂ ಸಾಧ್ಯವಿಲ್ಲ. ಹಣ ಹಾಗೂ ಅಧಿಕಾರ ಬಲ ನಡೆಯುವುದಿಲ್ಲ. ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಲೋಕಸಭೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಸೋಲನುಭವಿಸಲಿದ್ದು, ಇದರಿಂದ ಮೈತ್ರಿ ಸರ್ಕಾರ ಬೀಳಲಿದೆ. ಕುಂದಗೋಳ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಆರ್.ಪಾಟೀಲ ಈ ಚುನಾವಣೆ ಪ್ರಾಮಾಣಿಕತೆಯಿಂದ ಮಾಡಲಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಂ.ಆರ್. ಪಾಟೀಲ ಒಂದಿಷ್ಟು ಬೇಸರಗೊಂಡಿದ್ದರು. ಇದೀಗ ಅದೆಲ್ಲವು ಮುಗಿದ ಅಧ್ಯಾಯ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.