ನಂ.1 ವೆಂಕಟೇಶ್ವರ ಕಾಲೋನಿಗೆ ಜಲಕ್ಷಾಮ

Team Udayavani, Apr 30, 2019, 12:23 PM IST

Udayavani Kannada Newspaper

ಚಿತ್ತಾಪುರ: ಪಟ್ಟಣದ ವಾರ್ಡ್‌ ಸಂಖ್ಯೆ 4ರಲ್ಲಿ ಬರುವ ವೆಂಕಟೇಶ್ವರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಕಾಡುತ್ತಿರುವುದರಿಂದ ಬೆಳಗ್ಗೆ ಎದ್ದು ಹನಿ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪ್ರತಿದಿನ ನೀರು ಪೂರೈಕೆ ಆಗುತ್ತಿರುವುದು ಒಂದೆಡೆಯಾದರೆ, ಕಾಲೋನಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿವೆ. ಮನೆಗೊಂದು ನಳ ಅಳವಡಿಸಿಕೊಂಡಿದ್ದಾರೆ. ಆದರೆ ಟಾಕಿ ಸಮೀಪವಿರುವ ಮನೆಗಳಿಗೆ ಮಾತ್ರ ನೀರು ಬರುತ್ತದೆ. ದೂರದ ಮನೆಗಳಲ್ಲಿ ಹನಿ ನೀರು ಬರುತ್ತಿಲ್ಲ.

ನಳ ಬಂದಾಗ ಪ್ರತಿಯೊಬ್ಬರೂ ಮೋಟಾರ್‌ ಹಚ್ಚಿದ್ದರೂ ನಳದಲ್ಲಿ ನೀರು ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಲೋನಿ ನಿವಾಸಿಗಳು ಯಾವ ನಳದಲ್ಲಿ ನೀರು ಬರುತ್ತಿದೆ ಎಂದು ಹುಡುಕಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಬಹುತೇಕ ಮನೆಗಳಲ್ಲಿ ನೀರು ಸಂಗ್ರಹಿಸಿಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಜನರು ಕನಿಷ್ಠ ಒಂದು ಕಿ.ಮೀ. ದೂರವಾದರೂ ಕ್ರಮಿಸಿ, ಇರುವ ಒಂದೇ ಬೋರ್‌ವೆಲ್ ಬಳಿ ಸರದಿ ನಿಂತು ಕುಡಿಯುವ ನೀರು ತರಬೇಕಾದ ಅನಿವಾರ್ಯ ಸ್ಥಿತಿ ಬಂದೊದಗಿದೆ ಎಂದು ಗೃಹಿಣಿ ಅಕ್ಕನಾಗಮ್ಮ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ನೀರಿನ ಸಮಸ್ಯೆ ನಿವಾರಿಸುವತ್ತ ಪುರಸಭೆ ಯಾವುದೇ ಗಮನ ಹರಿಸಿಲ್ಲ. ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿಲ್ಲ ಎಂದು ಕಾಲೋನಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಲೋನಿ ನಿವಾಸಿಗಳಿಗೆ ಸಮರ್ಪಕ ಕುಡಿಯಲು ಕನಿಷ್ಠ ಎರಡು ಕೊಡ ನೀರು ಸಿಗುತ್ತಿಲ್ಲ. ಕಾರಣ ದೂರದ ಬಾವಿಗಳಿಂದ 600 ರೂ.ಗಳಿಂದ 800 ರೂ. ನೀಡಿ ಟ್ಯಾಂಕರ್‌ಗಳಿಂದ ನೀರು ಹಾಕಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಾಲೋನಿ ನಿವಾಸಿಗಳು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದಲ್ಲಿಯೇ ವೆಂಕಟೇಶ್ವರ ಕಾಲೋನಿ ನಂ.1 ಪಟ್ಟ ಪಡೆದಿದೆ. ಆದ್ದರಿಂದಲೇ ಇಲ್ಲಿನ ನಿವಾಸಿಗಳಿಂದ ಎಲ್ಲದಕ್ಕೂ ತೆರಿಗೆ ಕಟ್ಟಿಸಿಕೊಳ್ಳಲಾಗುತ್ತಿದೆ. ಆದರೆ ಕಾಲೋನಿಯಲ್ಲಿ ಸ್ವಚ್ಛತೆ, ರಸ್ತೆ, ಚರಂಡಿ, ದೀಪಗಳು ಇಲ್ಲದೇ ಇರುವುದರಿಂದ ಹಾಳು ಕೊಂಪೆಯಂತೆ ಗೋಚರಿಸುತ್ತಿದೆ. ಕಾಲೋನಿಯಲ್ಲಿ ಸಾವಿರಾರು ಜನರು ಹಲವು ವರ್ಷಗಳಿಂದ ವಾಸವಾಗಿದ್ದಾರೆ. ಆದರೆ ಕಾಲೋನಿಗೆ ಕುಡಿಯಲು ನೀರು ಸಮರ್ಪಕವಾಗಿ ಸರಬರಾಜು ಆಗುತ್ತಿಲ್ಲ. ಕಾರಣ ಅಲೆದಾಡುವಂತಹ ಪರಿಸ್ಥಿತಿ ಉಲ್ಬಣಗೊಂಡಿದೆ.

ಪಟ್ಟಣದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕೋಟಿಗಟ್ಟಲೇ ಅನುದಾನ ರೂಪದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೈಗೊಂಡು ಪಟ್ಟಣದಲ್ಲಿ ಶುದ್ಧೀಕರಣ ಘಟಕ ಸ್ಥಾಪಿಸಿದರೂ ಚರಂಡಿ ನೀರು ಹಾಳಾದ ಪೈಪ್‌ಗ್ಳ ಮೂಲಕ ಹರಿದು ಕಲುಷಿತ ನೀರು ಪಟ್ಟಣದೆಲ್ಲೆಡೆ ಸರಬರಾಜು ಆಗುತ್ತಿದೆ ಎಂದು ವಾರ್ಡ್‌ ನಿವಾಸಿ ಮೈನೋದ್ದಿನ್‌ ಬಾಂಬೆ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಪಟ್ಟಣದಲ್ಲಿಯೇ ವೆಂಕಟೇಶ್ವರ ಕಾಲೋನಿ ನಂ.1 ಪಟ್ಟ ಪಡೆದಿದೆ. ಆದರೆ ಇಲ್ಲಿಯ ಸಮಸ್ಯೆಗಳ ಬಗ್ಗೆ ಪುರಸಭೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಆದರೆ ತೆರಿಗೆ ಮಾತ್ರ ಪ್ರತಿ ತಿಂಗಳು ಕಟ್ಟಬೇಕು. ಇಲ್ಲದಿದ್ದರೆ ನಳಗಳನ್ನು ಬಂದ್‌ ಮಾಡಲಾಗುವುದು ಎಂದು ಆಟೋದಲ್ಲಿ ಪ್ರಚಾರ ಮಾಡುತ್ತಾರೆ. ಅದೇ ರೀತಿ ಕಾಲೋನಿಯಲ್ಲಿ ಸಮರ್ಪಕ ನೀರು ಸೀಗುತ್ತಿದೆಯೋ, ಇಲ್ಲವೊ ಎನ್ನುವುದನ್ನು ನೋಡಲು ಬರೋದಿಲ್ಲ.

•ಕಲಾವತಿ, ವಾರ್ಡ್‌ ನಿವಾಸಿ

ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬೆಳಗ್ಗೆ ಎದ್ದ ಕೂಡಲೇ ಪಾಳಿ ಹಚ್ಚಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ.

• ಮಲ್ಲಿಕಾರ್ಜುನ, ಕಾಲೋನಿ ನಿವಾಸಿ

ಟಾಪ್ ನ್ಯೂಸ್

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.